ಕನ್ನಡಪ್ರಭ ವಾರ್ತೆ ಕಲಬುರಗಿ
ಕಲಬುರ್ಗಿ ವಿಭಾಗದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವ್ಯಾಪ್ತಿ ಹೊಂದಿರುವ ಈ ಕ್ಷೇತ್ರದಲ್ಲಿ 160 ಮುಖ್ಯ ಮತ್ತು 35 ಹೆಚ್ಚುವರಿ ಸೇರಿ ಒಟ್ಟು 195 ಮತಗಟ್ಟೆಗಳಿದ್ದು, ಅಂತಿಮ ಸ್ಫರ್ಧಾ ಕಣದಲ್ಲಿ 19 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ಮತದಾರರ ಪಟ್ಟಿಯನ್ನು ಆಯಾ ಡಿ.ಸಿ. ಕಚೇರಿ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದ್ದು, ಮತದಾರರನ್ನು ಇದನ್ನು ವೀಕ್ಷಿಸಬಹದಾಗಿದೆ.
ಸಾಮಾನ್ಯವಾಗಿ ವಿಧಾನಸಭೆ, ಲೋಕಸಭೆ ಚುನಾವಣೆಗಳು ಇ.ವಿ.ಎಂ. ಮತಯಂತ್ರಗಳ ಮೂಲಕ ಮತ ಚಲಾಯಿಸಲಾಗುತ್ತಿದೆ. ಇಲ್ಲಿ ಪೋಸ್ಟಲ್ ಬ್ಯಾಲೆಟ್ ಮೂಲಕ ಪ್ರಾಶಸ್ತ್ಯದ ಮತ ನೀಡಲು ಅವಕಾಶವಿದ್ದು, ಸಾಮಾನ್ಯ ಚುನಾವಣೆಗ್ಗಿಂತ ಇದು ಭಿನ್ನವಾಗಿದೆ. ಮತದಾನ ಕೇಂದ್ರದಲ್ಲಿ ಚುನಾವಣಾ ಆಯೋಗವು ನೀಡುವ ನೇರಳೆ ಬಣ್ಣದ ಸ್ಕೆಚ್ ಪೆನ್ನಿನಿಂದ ಮಾತ್ರ ಆದ್ಯತಾ ಮತ ನಮೂದಿಸಬೇಕು.ಆದ್ಯತಾ ಸಂಖ್ಯೆ ನಮೂದಿಸುವಾಗ ಒಂದೇ ಭಾಷೆ ಬಳಸಬೇಕು. ಸ್ಕೆಚ್ ಪೆನ್ ಹೊರತುಪಡಿಸಿ ಇತರೆ ಪೆನ್ ಬಳಸಿ ಮತ ಚಲಾಯಿಸಿದಲ್ಲಿ ಅಂತಹ ಮತಗಳು ಅಸಿಂಧುಗೊಳ್ಳಲಿದೆ. ಇನ್ನು ಈ ಚುನಾವಣೆಯಲ್ಲಿ ನೋಟಾ (ಓಔಖಿಂ) ಅನ್ವಯಿಸದ ಕಾರಣ ಮತಪತ್ರದಲ್ಲಿ ಇದನ್ನು ಮುದ್ರಿಸಿರುವುದಿಲ್ಲ ಎಂದಿರುವ ಅವರು, ಬ್ಯಾಲೆಟ್ ಪೇಪರ್‍ನಲ್ಲಿ ಆದ್ಯತೆ ಸೂಚಿಸಲು ಸರಿಯಾದ ರೀತಿಯ ವಿಧಾನ, ಮತ ಸಿಂಧು-ಅಸಿಂಧುಗೊಳ್ಳುವ ಕಾರಣಗಳನ್ನು ಉದಾಹರಣೆಯೊಂದಿಗೆ www.rcgulbarga.gov.in ನಲ್ಲಿ ಪ್ರಕಟಿಸಿದೆ. ಇದನ್ನು ಮತದಾರರು ವೀಕ್ಷಿಸಬಹುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಬನ್ನಿ, ಮತ ಚಲಾಯಿಸಿ: ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ಮತದಾನ ಸಮಯ ನಿಗದಿ ಮಾಡಲಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಅಮೂಲ್ಯ ಮತವನ್ನು ಚಲಾಯಿಸಬೇಕೆಂದು ಕೃಷ್ಣ ಭಾಜಪೇಯಿ ಅವರು ಮನವಿ ಮಾಡಿದ್ದಾರೆ.
ಮತದಾರ ಚೀಟಿ ವಿತರಣೆ: ಪದವೀಧರ ಮತಕ್ಷೇತ್ರದ ಮತದಾರರ ಮಾಹಿತಿಗಾಗಿ ಎಲ್ಲಾ ಮತದಾರರಿಗೆ ಮತದಾರ ಚೀಟಿಯನ್ನು ವಿತರಿಸಲಾಗುತ್ತಿದೆ. ಇದರಲ್ಲಿ ಮತಗಟ್ಟೆ ವಿವರ, ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆ ಇದೆ. ಮತದಾರ ಚೀಟಿಯಲ್ಲಿ ನೀಡಲಾಗುವ ಕ್ಯೂಆರ್ ಕೋಡ್‍ನ್ನು ಗೂಗಲ್ ಮ್ಯಾಪ್‍ನಲ್ಲಿ ಸ್ಕಾನ್ ಮಾಡಿ ಮತಗಟ್ಟೆ ನಿಖರ ಸ್ಥಳ ತಿಳಿಯಬಹುದಾಗಿದೆ. ಇದಲ್ಲದೆ ಪ್ರತಿ ಮತದಾರರಿಗೆ ಎಸ್.ಎಂ.ಎಸ್. ಸಹ ಕಳುಹಿಸಲಾಗುತ್ತಿದೆ. ಅಲ್ಲದೇ ಕಲಬುರ್ಗಿ ಪ್ರಾದೇಶಿಕ ಆಯುಕ್ತರ ಕಚೇರಿಯ ಫೇಸಬುಕ್ ಪುಟ @RCKalaburagi ಮತ್ತು ಎಕ್ಸ್(ಟ್ವಿಟರ್) ಖಾತೆ @RCKalaburagi ನಲ್ಲಿಯೂ ಮಾಹಿತಿ ಲಭ್ಯವಿದೆ.
ಬಲಗೈ ತೋರು ಬೆರಳಿಗೆ ಶಾಹಿ: ಈಶಾನ್ಯ ಕರ್ನಾಟಕ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರರಿಗೆ ಅಳಿಸಲಾಗದ ಶಾಹಿಯನ್ನು (Iಟಿಜeಟibಟe iಟಿಞ) ನ್ನು ಬಲಗೈ ತೋರು ಬೆರಳಿಗೆ ಹಚ್ಚಲಾಗುತ್ತದೆ.