ಮಂಡ್ಯ ಜಿಲ್ಲೆಯ ಗ್ರಂಥಾಲಯಗಳಲ್ಲಿ 1.88 ಲಕ್ಷ ಪುಸ್ತಕಗಳು: ಜಿಲ್ಲಾಧಿಕಾರಿ ಡಾ.ಕುಮಾರ

KannadaprabhaNewsNetwork |  
Published : Aug 08, 2025, 01:01 AM IST
5ಕೆಎಂಎನ್‌ಡಿ-10ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 70 ನೇ ಆಯವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. | Kannada Prabha

ಸಾರಾಂಶ

ಗ್ರಂಥಾಲಯಗಳಿಗೆ ಓದಲು ಬರುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕಿದೆ. ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ಜೊತೆಗೆ ಗ್ರಂಥಾಲಯಗಳ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಓದುಗರ ಸಂಖ್ಯೆ ಹೆಚ್ಚಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ಎಲ್ಲಾ ಗ್ರಂಥಾಲಯಗಳು ಸೇರಿ ಒಟ್ಟು 1.88 ಲಕ್ಷ ಪುಸ್ತಕಗಳು ಜಿಲ್ಲೆಯಲ್ಲಿವೆ. 14 ಲಕ್ಷ ಜನರು ಡಿಜಿಟಲ್ ಸದಸ್ಯತ್ವ ಕಾರ್ಡ್ ಹೊಂದಿದ್ದರೆ ಹಾಗೂ 53 ಸಾವಿರ ಜನರು ಮ್ಯಾನುವಲ್ ಗ್ರಂಥಾಲಯ ಕಾರ್ಡ್‌ಗಳನ್ನು ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 70 ನೇ ಆಯವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಸಮರ್ಪಕವಾಗಿ ಓದಿ ಸದುಪಯೋಗ ಪಡಿಸಿಕೊಳ್ಳುವವರು ನಿಜವಾಗಿಯೂ ಸಾಧಕರು ಎಂದರು.

ಗ್ರಂಥಾಲಯಗಳಿಗೆ ಓದಲು ಬರುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕಿದೆ. ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ಜೊತೆಗೆ ಗ್ರಂಥಾಲಯಗಳ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಓದುಗರ ಸಂಖ್ಯೆ ಹೆಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಳವಳ್ಳಿಯಲ್ಲಿ ನೂತನ ಗ್ರಂಥಾಲಯ ನಿರ್ಮಿಸಲಾಗಿದೆ. ಶ್ರೀರಂಗಪಟ್ಟಣ ಹಾಗೂ ಕೆ.ಆರ್.ಪೇಟೆ ಗಳಲ್ಲಿ ನೂತನ ಗ್ರಂಥಾಲಯ ಸ್ಥಾಪನೆಗೆ ಅನುಮೋದನೆ ದೊರೆತಿದ್ದು ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದರು.

‘ಮಾಸಿಕ ಉತ್ತಮ ಓದುಗ ಅಭಿಯಾನ’ ಮಾಡಿ ಗ್ರಂಥಾಲಯಗಳಲ್ಲಿ ಕಲಿತು ಸಾಧನೆ ಮಾಡಿದವರನ್ನು ಕರೆಸಿ ಸನ್ಮಾನ ಮಾಡಿ ಹಾಗೂ ಮಾಸಿಕವಾಗಿ ಗ್ರಂಥಾಲಯದಲ್ಲಿ ಹೆಚ್ಚು ಸಮಯ ಕಳೆದು ವ್ಯಾಸಂಗ ಮಾಡುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುವ ಮೂಲಕ ಓದುಗರನ್ನು ಉತ್ತೇಜಿಸಿ ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ಹಾಗೂ ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ ಕೃಷ್ಣ ಮೂರ್ತಿ, ಪ್ರಾಧಿಕಾರದ ಸದಸ್ಯರುಗಳಾದ ಚಂದನ್, ತೈಲೂರು ವೆಂಕಟಕೃಷ್ಣ, ಚಂದ್ರು, ಎಸ್.ಎಸ್ ದಯಾನಂದ, ಲಿಂಗರಾಜುಮೂರ್ತಿ.ಎನ್, ಜಿ.ಕೆ ಮಂಜೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜು.೧೦ರಂದು ಕನ್ನಡ ಅಕ್ಷರ ಜಾತ್ರೆ, ಪ್ರಶಸ್ತಿ ಪ್ರದಾನ

ಕನ್ನಡಪ್ರಭ ವಾರ್ತೆ ಮಂಡ್ಯ

ಡಾ.ಜೀಶಂಪ ಸಾಹಿತ್ಯ ವೇದಿಕೆ ಹಾಗೂ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ದಿನದ ಅಂಗವಾಗಿ ಜೂನ್ ೧೦ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ೧೩ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ ವಿವಿಧ ಪ್ರಶಸ್ತಿ ಪ್ರದಾನ ಮತ್ತು ಮೂರು ಕಿರು ಚಿತ್ರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ವೇದಿಕೆ ಅಧ್ಯಕ್ಷ ಎಸ್.ಕೃಷ್ಣಸ್ವರ್ಣಸಂದ್ರ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಅಕ್ಷರ ಜಾತ್ರೆ ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಡಾ.ರೇವಣ್ಣ (ವಾಲಿಬಾಲ್) ಉದ್ಘಾಟಿಸಲಿದ್ದು, ಖ್ಯಾತ ಕವಿ ಮತ್ತು ವೈದ್ಯ ಡಾ.ಚಂದ್ರಶೇಖರ್ ಪ್ರಧಾನ ಭಾಷಣ ಮಾಡಲಿದ್ದು, ಸಾಹಿತಿ ಡಾ.ಎಚ್.ಎಸ್.ಮುದ್ದೇಗೌಡ ನೇಗಿಲ ಧರ್ಮ ಕೃತಿ ಬಿಡುಗಡೆ ಮಾಡುವರು. ಕವಯತ್ರಿ ಬಿ.ಆರ್.ಉಮಾ ಅಕ್ಷರ ಜಾತ್ರೆ ಸಮ್ಮೇಳನಾಧ್ಯಕ್ಷತೆ ವಹಿಸುವರು ಎಂದು ಹೇಳಿದ್ದಾರೆ.

ಶಾಸಕ ಪಿ.ರವಿಕುಮಾರ್ ಗಣಿಗ ಕನ್ನಡರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಕರ್ನಾಟಕ ಸೇವಾ ಭೂಷಣ ಪ್ರಶಸ್ತಿ ಪ್ರದಾನ ಮಾಡುವರು. ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬನ್ನಂಗಾಡಿ ಸಿದ್ದಲಿಂಗಯ್ಯ ಸಮ್ಮೇಳನಾಧ್ಯಕ್ಷರಿಗೆ ಗೌರವ ಸಲ್ಲಿಸಲಿದ್ದು, ಎಸ್.ಕೃಷ್ಣಸ್ವರ್ಣಸಂದ್ರ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಡಾ.ರೇವಣ್ಣ (ವಾಲಿಬಾಲ್), ಪ್ರವೀಣ್ ಚಕ್ರವರ್ತಿ, ಬಿ.ರಾಜಣ್ಣ, ಡಾ.ಆರ್.ಮನೋಹರ್, ಶಂಕರ್ ಹೆಮ್ಮಿಗೆ, ಡಾ.ತನ್ಮಯಿ, ಸೋಮಶೇಖರಮೂರ್ತಿ, ಉಮಾ, ಸೌಭಾಗ್ಯ ಸಿದ್ದರಾಜ, ಮುನಿರಾ ಅನ್ವರ್, ಚೈತ್ರಾ , ದೀಪಕ್‌ಗೌಡ, ಎಂ.ಡಿ.ನಾಗೇಂದ್ರ, ಭಾರ್ಗವಿ ಅವರನ್ನು ಅಭಿನಂದಿಸಲಾಗುವುದು ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಮುಂದಿನ ಸಿಎಂ ಯಾರು?’ ಎನ್ನುವ ಬಗ್ಗೆಯೂ ರಾಜ್ಯದಲ್ಲಿ ಬೆಟ್ಟಿಂಗ್‌ - ನಿಯಂತ್ರಿಸಿ'
ಕ್ರೈಂ ಹೆಚ್ಚಳಕ್ಕೆ ಸಿಬ್ಬಂದಿ ಕೊರತೆ ಕಾರಣ : ಡಾ.ಜಿ.ಪರಮೇಶ್ವರ್‌