ರಾಜ್ಯದಲ್ಲಿ ಬೆಲೆ ಏರಿಲ್ಲ ಅಂತತೋರಿಸಿದ್ರೆ ₹1 ಲಕ್ಷ ಇನಾಮು!- ಮಾಜಿ ಸಿಎಂ ಬೊಮ್ಮಾಯಿಯಿಂದ ಆಫರ್‌

KannadaprabhaNewsNetwork |  
Published : Nov 12, 2026, 01:45 AM IST
ಬೊಮ್ಮಾಯಿ | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ವಸ್ತುಗಳ ಬೆಲೆ ಏರಿಕೆಯಾಗಿಲ್ಲ ಎಂದು ಸಾಬೀತುಪಡಿಸಿದರೆ ಅಂಥವರಿಗೆ 1 ಲಕ್ಷ ರು. ಬಹುಮಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ವಸ್ತುಗಳ ಬೆಲೆ ಏರಿಕೆಯಾಗಿಲ್ಲ ಎಂದು ಸಾಬೀತುಪಡಿಸಿದರೆ ಅಂಥವರಿಗೆ 1 ಲಕ್ಷ ರು. ಬಹುಮಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ರಾಜ್ಯ ಬಿಜೆಪಿಯಿಂದ ರಾಜ್ಯ ಸರ್ಕಾರದ ಬೆಲೆ ಏರಿಕೆ ಕ್ರಮದ ವಿರುದ್ಧ ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 4 ಲಕ್ಷ ಕೋಟಿ ರು. ಸಾಲ ಮಾಡಿರುವುದೇ ದಾಖಲೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಅಕ್ರಮಗಳು ಹೆಚ್ಚಳ:

ನೀರು, ಅಡುಗೆ ಎಣ್ಣೆ, ಕಸದಿಂದ ಹಿಡಿದು ಹಾಲು, ಆಲ್ಕೋಹಾಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಮತ್ತು ಸೇವೆಗಳ ಬೆಲೆಗಳು ಎರಡರಿಂದ ಮೂರು ಪಟ್ಟು ಹೆಚ್ಚಾಗಿವೆ. ರಾಜ್ಯದಲ್ಲಿ ಅಕ್ರಮಗಳು ಹೆಚ್ಚಾಗಿವೆ. ಅಧಿಕಾರದಲ್ಲಿ ಇರುವವರೇ ಎಲ್ಲವನ್ನೂ ಮಾಡಿಕೊಂಡು ಬಹಳ ದೊಡ್ಡ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಟೀಕಿಸಿದರು.

​ಇದು ಸಂಪೂರ್ಣವಾಗಿ ಎಡವಟ್ಟು ಸರ್ಕಾರ. ಸರ್ಕಾರದಲ್ಲಿ ಯಾವುದೇ ಸುಧಾರಣೆ ಮಾಡಿಕೊಳ್ಳುವ ಸ್ವಭಾವವಿಲ್ಲ. ​ ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಹೀಗಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಮಯವಿಲ್ಲ. ಬರುವ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಹಾಗೂ ಮುನ್ಸಿಪಾಲಿಟಿಯ ನಾಲ್ಕನೇ ದರ್ಜೆ ನೌಕರರಿಗೆ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಕಿಡಿಕಾರಿದರು.

​2028ಕ್ಕೆ ಈ ಸರ್ಕಾರ ಗುಜರಿಗೆ:ಈ ಸರ್ಕಾರ ಕೆಟ್ಟು ಹೋದ ಬಸ್ಸಿನಂತೆ ಸಾಗುತ್ತಿದೆ. ಈ ಸರ್ಕಾರದಲ್ಲಿ ಯಾವುದೇ ಸುಧಾರಣೆ ಮಾಡಲು ಸಾಧ್ಯವಿಲ್ಲ. ಸಂಪೂರ್ಣವಾಗಿ ಕೆಟ್ಟು ಹೋದ ಬಸ್ಸನ್ನು ಗುಜರಿಗೆ ಹಾಕುವಂತೆ, 2028ರಲ್ಲಿ ಜನರೇ ಈ ಸರ್ಕಾರವನ್ನು ಗುಜರಿಗೆ ಹಾಕುವುದು ಗ್ಯಾರಂಟಿ. ನಮ್ಮ ಈ ಹೋರಾಟದ ಹೆಜ್ಜೆಯನ್ನು ಹಿಂದಕ್ಕೆ ಇಡಬಾರದು. ಈ ದುಷ್ಟ, ಭ್ರಷ್ಟ ಸರ್ಕಾರವನ್ನು ಹಿಂದಕ್ಕೆ ತಳ್ಳಿ, ಮತ್ತೊಮ್ಮೆ ಜನಪರವಾದ ಸರ್ಕಾರವನ್ನು ತರಲು ಎಲ್ಲರೂ ಒಗ್ಗಟ್ಟಾಗಿ ಸಂಕಲ್ಪ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀಪಾವಳಿಲೀ ರಾಕೆಟ್‌ನಂತೆ ಹಾರಿದ ವಾಯು ಮಾಲಿನ್ಯ!
ಕೌಟುಂಬಿಕ ಕೇಸಲ್ಲಿ ಕುಟುಂಬ ಸಿಲುಕಿಸುವುದು ತರವಲ್ಲ: ಕೋರ್ಟ್‌