1ಲಕ್ಷ ವಿದ್ಯಾರ್ಥಿಗಳಿಗೆ ತಂಬಾಕಿನ ದುಷ್ಪರಿಣಾಮ ಜಾಗೃತಿ ವೆಬಿನಾರ್‌

KannadaprabhaNewsNetwork |  
Published : May 26, 2024, 01:42 AM ISTUpdated : May 26, 2024, 11:20 AM IST
Dubai Police seized over   400kg  drugs stuffed in beans

ಸಾರಾಂಶ

ಮೇ 31ರಂದು ತಂಬಾಕು ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಕರ್ನಾಟಕ ಒಕ್ಕೂಟವು ವೆಬಿನಾರ್‌ ಹಮ್ಮಿಕೊಂಡಿದೆ.

 ಬೆಂಗಳೂರು :  ವಿಶ್ವ ತಂಬಾಕು ರಹಿತ ದಿನ ಮೇ 31ರಂದು ಸುಮಾರು ಒಂದು ಲಕ್ಷ ವಿದ್ಯಾರ್ಥಿಗಳಿಗೆ ತಂಬಾಕಿನ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಕರ್ನಾಟಕ ಒಕ್ಕೂಟವು ವೆಬಿನಾರ್‌ ಹಮ್ಮಿಕೊಂಡಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಎಸ್.ಜೆ. ಚಂದರ್, ದೇಶದ ವಿವಿಧೆಡೆ 15ಕ್ಕೂ ಹೆಚ್ಚಿನ ವಿಶ್ವವಿದ್ಯಾಲಯಗಳು ವೆಬಿನಾರ್‌ನಲ್ಲಿ ಪಾಲ್ಗೊಳ್ಳುತ್ತಿವೆ. ಈ ವೇಳೆ ಚರ್ಚಾಕೂಟ, ತಜ್ಞರ ಅಭಿಪ್ರಾಯ ಮಂಡನೆ ಹಾಗೂ ಸಮಾಲೋಚನೆ ನಡೆಯಲಿದೆ ಎಂದು ತಿಳಿಸಿದರು.

ತಂಬಾಕು ಕಂಪನಿಗಳು ಮಕ್ಕಳನ್ನೇ ಗುರಿಯಾಗಿಸಿಕೊಂಡಿವೆ. ತಂಬಾಕು ಉತ್ಪನ್ನಗಳ ಸೇವನೆಗೆ ಕಡಿವಾಣ ಹಾಕಲು ಕಾನೂನು ಬಲಗೊಳಿಸುವ ಜತೆಗೆ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಳದಂತಹ ಕ್ರಮಕೈಗೊಳ್ಳಬೇಕು. ತಂಬಾಕು ಕಂಪನಿಗಳು ಆಕರ್ಷಕ ಜಾಹೀರಾತಿನ ಮೂಲಕ ಜನರನ್ನು ಸೆಳೆಯುತ್ತಿವೆ. ತಂಬಾಕು ಉತ್ಪನ್ನಗಳನ್ನು ಬಳಸುವಂತೆ ಯುವಜನರು ಮತ್ತು ಮಕ್ಕಳಿಗೆ ಆಮಿಷ ಒಡ್ಡಲಾಗುತ್ತಿದೆ. ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವ ಮೂಲಕ ಮಕ್ಕಳು ಹಾಗೂ ಯುವಜನರು ಧೂಮಪಾನದಂತಹ ವ್ಯಸನಗಳಿಗೆ ಒಳಪಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರೋಗ್ಯ ಸುಧಾರಣೆಗೆ ಆಯುರ್ವೇದ ಅಗತ್ಯ: ಶಾಸಕ ಗವಿಯಪ್ಪ
ಮರಳು ಮಾಫಿಯಾ ವಿರುದ್ಧ ಕ್ರಮಕ್ಕೆ ಆಗ್ರಹ