ಕನ್ನಡಪ್ರಭ ವಾರ್ತೆ ಹಲಗೂರು
ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಾಲಾ ಆವರಣದಲ್ಲಿ ಕೇಕ್ ಕತ್ತರಿಸಿ ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು ಉಚಿತವಾಗಿ ನೋಟ್ ಪುಸ್ತಕ ವಿತರಿಸಿ ಮಾತನಾಡಿ, ನಾನು ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿ ಈಗ ಉನ್ನತ ಉದ್ಯಮಿಯಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು.
ನಾವು ವ್ಯಾಸಂಗ ಮಾಡಿದ ಶಾಲೆಯನ್ನು ಮರೆಯಬಾರದು ಎಂಬ ದೃಷ್ಟಿಯಿಂದ ಇಂದು ನಿಮ್ಮಗಳ ಮುಂದೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನೀವು ಉನ್ನತ ವ್ಯಾಸಂಗ ಪಡೆದು ಶಾಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.ಸಂಸ್ಥೆ ಅಧ್ಯಕ್ಷ ಎಚ್.ಎಂ.ಆನಂದ್ ಕುಮಾರ್ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಶಾಲಾ ವಾಹನ ವ್ಯವಸ್ಥೆ, ನೋಟ್ ಪುಸ್ತಕಗಳು, ಸಮವಸ್ತ್ರಗಳನ್ನು ನೀಡುತ್ತಿದ್ದೇವೆ. ಇದನ್ನು ಸದ್ಬಳಕೆ ಮಾಡಿಕೊಂಡು ಉನ್ನತ ವ್ಯಾಸಂಗ ಪಡೆದುಕೊಳ್ಳಿ ಎಂದರು.
ಜೂ.23 ಮತ್ತು 24 ರಂದು ವಿದ್ಯುತ್ ನಿಲುಗಡೆಶ್ರೀರಂಗಪಟ್ಟಣ: ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ವಿದ್ಯುತ್ ಕಂಬ ಬದಲಿಸುವ ಉದ್ದೇಶದಿಂದ ಜೂ.23 ಮತ್ತು ಜೂ.24 ರಂದು ವಿದ್ಯುತ್ ನಿಲುಗಡೆಯಾಗಲಿದೆ ಎಂದು ಸೆಸ್ಕ್ ಎಇಇ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶ್ರೀರಂಗಪಟ್ಟಣ ಉಪ ವಿಭಾಗ ವ್ಯಾಪ್ತಿಯ ದರಸಗುಪ್ಪೆ ಶಾಖಾ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಬಲ್ಲೇನಹಳ್ಳಿ, ದರಸಗುಪ್ಪೆ ಹಾಗೂ ಕಿರಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಗ್ರಾಮಗಳು ಸೇರಿದಂತೆ ಪಾಂಡವಪುರ ವಾಟರ್ ಸಪ್ಪೆ ಸ್ಥಾವರಕ್ಕೆ ಅಂದು ಬೆಳಗ್ಗೆ 9 ರಿಂದ ಸಂಜೆ 5.30ರವರಗೆ ವಿದ್ಯುತ್ ಅಡಚಣೆ ಆಗಲಿದೆ. ಹಾಗಾಗಿ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಅವರು ಕೋರಿದ್ದಾರೆ.