ಕೊಪ್ಪಳ ಜಿಲ್ಲೆಯಲ್ಲಿ 10.41 ಲಕ್ಷ ಮತದಾರರು

KannadaprabhaNewsNetwork |  
Published : Oct 16, 2026, 02:15 AM IST
ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ | Kannada Prabha

ಸಾರಾಂಶ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಕರಡು ಮತದಾರರ ಪಟ್ಟಿ ಪ್ರಕಟಣೆ ಹಾಗೂ ಪರಿಷ್ಕರಣೆ ಪ್ರಕ್ರಿಯೆ ಕುರಿತು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್ ಅಧ್ಯಕ್ಷತೆಯಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.

ಕೊಪ್ಪಳ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಕರಡು ಮತದಾರರ ಪಟ್ಟಿ ಪ್ರಕಟಣೆ ಹಾಗೂ ಪರಿಷ್ಕರಣೆ ಪ್ರಕ್ರಿಯೆ ಕುರಿತು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್ ಅಧ್ಯಕ್ಷತೆಯಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಮತದಾರರ ವಿವರಗಳು, ಮತಗಟ್ಟೆಗಳ ಸಂಖ್ಯೆ ಹಾಗೂ ಪರಿಷ್ಕರಣೆಯ ವೇಳಾಪಟ್ಟಿ ಕುರಿತು ಮಾಹಿತಿ ನೀಡಲಾಯಿತು.

ಜಿಲ್ಲೆಯ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 10,41,388 ಮತದಾರರಿದ್ದು, 5,19,142 ಪುರುಷರು, 5,22,189 ಮಹಿಳೆಯರು ಹಾಗೂ 57 ಇತರ ಮತದಾರರು ಇದ್ದಾರೆ. ಕುಷ್ಟಗಿ ಕ್ಷೇತ್ರದಲ್ಲಿ 282, ಕನಕಗಿರಿ 277, ಗಂಗಾವತಿ 240, ಯಲಬುರ್ಗಾ 259 ಹಾಗೂ ಕೊಪ್ಪಳ ಕ್ಷೇತ್ರದಲ್ಲಿ 294 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1,352 ಮತಗಟ್ಟೆಗಳಿವೆ.

ಆ. 24ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆ. 23ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಅ. 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮತದಾರರ ಪಟ್ಟಿಯಲ್ಲಿನ ದೋಷಗಳು ಹಾಗೂ ಮ್ಯಾಪಿಂಗ್ ಆಗದ 14,401 ಮತದಾರರಿಗೆ ನೀಡಲಾದ ನೋಟಿಸ್‌ಗಳು ಮತ್ತು ಅವುಗಳ ವಿಲೇವಾರಿ ಕುರಿತು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು.

ಜಿಲ್ಲೆಯಲ್ಲಿ ಎಸ್‌ಐಆರ್‌ ಕಾರ್ಯವನ್ನು ಶಿಸ್ತುಬದ್ಧವಾಗಿ ನಡೆಸಲಾಗಿದೆ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಚುನಾವಣಾ ತಹಸೀಲ್ದಾರ್ ರವಿಕುಮಾರ ವಸ್ತ್ರದ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ರಾಜು ಬಾಕಳೆ, ಕೃಷ್ಣಪ್ಪ ಎಂ. ಇಟ್ಟಂಗಿ, ಕೆ.ಎಸ್. ಮೈಲಾರಪ್ಪ, ಮಾರುತಿಗೌಡ ಪೊಲೀಸ್ ಪಾಟೀಲ, ಸೋಮನಗೌಡ ಹೊಗರನಾಳ, ಶರಣು ಶೆಟ್ಟರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಗಮಾಸ್ತಿ ಕ್ಷೇತ್ರದ ಮಹಿಳಾ ದಸರಾ ಜಿಲ್ಲೆಗೆ ಮಾದರಿ
ಅಗ್ನಿವೀರರಾಗಲು ಇಟಗಿಯಲ್ಲಿ ಉಚಿತ ತರಬೇತಿ ಶಿಬಿರ