ಮೂಡಿಗೆರೆ ಕ್ಷೇತ್ರಕ್ಕೆ ₹10 ಕೋಟಿ ಅನುದಾನ: ನಯನಾ ಮೋಟಮ್ಮ

KannadaprabhaNewsNetwork |  
Published : Nov 28, 2025, 01:06 AM IST
ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರುಮಳೆ ಹಾನಿಯಿಂದ ಹಾಳಾದ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಸರ್ಕಾರ ಕ್ಷೇತ್ರಕ್ಕೆ ₹10 ಕೋಟಿ ಅನುದಾನ ನೀಡಿದೆ. ಈ ಪೈಕಿ ಒಂದು ಕೋಟಿ ಅನುದಾನವನ್ನು ಅಂಬಳೆ ವ್ಯಾಪ್ತಿಯಲ್ಲಿ ವಿನಿಯೋಗಿಸಲಾಗುತ್ತಿದೆ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.

ಅಂಬಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮಳೆ ಹಾನಿಯಿಂದ ಹಾಳಾದ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಸರ್ಕಾರ ಕ್ಷೇತ್ರಕ್ಕೆ ₹10 ಕೋಟಿ ಅನುದಾನ ನೀಡಿದೆ. ಈ ಪೈಕಿ ಒಂದು ಕೋಟಿ ಅನುದಾನವನ್ನು ಅಂಬಳೆ ವ್ಯಾಪ್ತಿಯಲ್ಲಿ ವಿನಿಯೋಗಿಸಲಾಗುತ್ತಿದೆ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.ತಾಲೂಕಿನ ಅಂಬಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ವಿಶೇಷವಾಗಿ ಅಂಬಳೆ ಗ್ರಾಪಂ ವ್ಯಾಪ್ತಿಯ ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.ಪ್ರಸ್ತುತ ಅಂಬಳೆ ಹೋಬಳಿಯಲ್ಲಿ ನಾಲ್ಕು ಪಂಚಾಯಿತಿಗಳಲ್ಲಿ 20 ಬೂತ್‌ಗಳಿದ್ದು ಅನುದಾನ ಸಮಾನವಾಗಿ ಹಂಚಿಕೆ ಗೊಳಿಸಿದೆ. ಗ್ರಾಮದ ಹದಿನೈದು ಅಭಿವೃದ್ಧಿ ಕಾಮಗಾರಿಗಳಿಗೆ ಅಂಬಳೆಯಲ್ಲಿ ಸಾಂಕೇತಿಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಗಿದೆ ಎಂದರು.ಕ್ಷೇತ್ರದ ಮಲೆನಾಡು ಭಾಗದಲ್ಲಿ ಮಳೆ ಇಳಿಕೆಯಾಗಿದೆ. ಇದೀಗ ರಸ್ತೆ ಕಾಮಗಾರಿ ಕೆಲಸ ಆರಂಭಿಸಲು ಮುಂದಾಗಿದ್ದೇವೆ. ಕಾಮಗಾರಿ ಗುತ್ತಿಗೆದಾರರಿಗೂ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸೂಚಿಸಲಾಗಿದ್ದು ಕೆಲವೇ ತಿಂಗಳುಗಳಲ್ಲಿ ಉತ್ತಮ ರಸ್ತೆ ನಿರ್ಮಿಸಿ ಸಾರ್ವಜನಿಕರಿಗೆ ಅರ್ಪಿಸುತ್ತೇವೆ ಎಂದು ಹೇಳಿದರು.ಮಳೆಹಾನಿಯಿಂದ ಮಲೆನಾಡು ಮತ್ತು ಅರೆ ಮಲೆನಾಡಿಗೆ ಸಾಕಷ್ಟು ಹಾನಿ ಸಂಭವಿಸಿದೆ. ಕ್ಷೇತ್ರವಾರು ಬಹುತೇಕ ಕಾಮ ಗಾರಿಗೆ ಚಾಲನೆ ನೀಡಲಾಗಿದೆ. ಅಂಬಳೆ ಗ್ರಾಮವೇ ಕೊನೆ ಅಭಿವೃದ್ದಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಪೂರ್ಣಗೊಳಿ ಸಲಾಗಿದೆ ಎಂದು ತಿಳಿಸಿದರು.ಈಗಾಗಲೇ ಎಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಂದಿನ ಮಳೆವರೆಗೂ ಕಾಯದೇ ಶೀಘ್ರದಲ್ಲೇ ಕಾಮ ಗಾರಿ ಪೂರೈಸಲು ಸೂಚಿಸಿದ್ದೇನೆ. ಅಲ್ಲದೇ ಸದ್ಯದಲ್ಲೇ ಅಧಿವೇಶನ ಆರಂಭ ಗೊಳ್ಳುವ ಕಾರಣ 2 ತಿಂಗಳಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ ಪೂರ್ಣಗೊಳ್ಳಬೇಕಿದೆ ಎಂದು ಹೇಳಿದರು.ಮುಂಬರುವ ಅಭಿವೃದ್ಧಿಗೆ ಕಾಮಗಾರಿ ಸರ್ಕಾರ ₹೫೦ ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು ಅಧಿವೇಶನದ ನಂತರ ಚಾಲನೆ ನೀಡುವ ಮೂಲಕ ಏಪ್ರಿಲ್ ಅಥವಾ ಮೇ ಒಳಗೆ ಎಲ್ಲಾ ಕಾಮಗಾರಿ ಪೂರೈಸುವ ಆಲೋಚನೆಯಿದೆ ಎಂದರು.ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಬಸವರಾಜ್ ಮಾತನಾಡಿ, ಅಂಬಳೆ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕರು ಸಮುದಾಯ ಭವನ, ದೇವಸ್ಥಾನ ಜೀರ್ಣೋದ್ದಾರ, ಶಾಲೆ ಹಾಗೂ ಶೌಚಾಲಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಗೊಳಿಸಿದ್ದಾರೆ. ವಿಶೇಷವಾಗಿ ಅಂಬಳೆ ಗ್ರಾಮಕ್ಕೆ ₹4 ಕೋಟಿ ಅನುದಾನ ವ್ಯಯಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಂಬಳೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ವಿಜಯ್‌ಕುಮಾರ್, ಆಲ್ದೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿರೂಪಾಕ್ಷ, ಗ್ರಾಪಂ ಮಾಜಿ ಅಧ್ಯಕ್ಷ ದೊಡ್ಡೇಗೌಡ, ಸ್ಥಳೀಯರಾದ ಮೋಹನ್, ದಾಸೇಗೌಡ, ಸಂತೋಷ್, ಓಂಪ್ರಕಾಶ್ ಉಪಸ್ಥಿತರಿದ್ದರು. 27 ಕೆಸಿಕೆಎಂ 2ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

PREV

Recommended Stories

ನಕಲಿ ಔಷಧ ಮಾರಿದರೆ ಬೇಲ್‌ ನಿರಾಕರಿಸುವ ಬಿಲ್‌ ಮಂಡನೆ
ರೈತರಿಗೆ ಹೆಚ್ಚುವರಿ ಬೆಳೆ ಪರಿಹಾರಕ್ಕೆ ಚಾಲನೆ