3.2 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Nov 26, 2025, 01:15 AM IST
56 | Kannada Prabha

ಸಾರಾಂಶ

ತಾಲೂಕಿನ ದೇಬೂರು ಗ್ರಾಮದಲ್ಲಿ 20 ಲಕ್ಷ ವೆಚ್ಚದ ಗ್ರಾಪಂ ಕಟ್ಟಡ, 25 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ, ಮೂರು ಕೋಟಿ ವೆಚ್ಚದಲ್ಲಿ ಹುಲ್ಲಹಳ್ಳಿ ಮುಖ್ಯರಸ್ತೆಯ ಮರು ಡಾಂಬರೀಕರಣ,

ಕನ್ನಡಪ್ರಭ ವಾರ್ತೆ ನಂಜನಗೂಡು ಪ್ರಗತಿಪಥ ರಸ್ತೆ ಯೋಜನೆಯಡಿ ಕ್ಷೇತ್ರಕ್ಕೆ 10 ಕೋಟಿ ವಿಶೇಷ ಅನುದಾನ ಬಂದಿದ್ದು, ಆ ಅನುದಾನದಲ್ಲಿ 3.2 ಕೋಟಿ ವೆಚ್ಚದಲ್ಲಿ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು. ಪಟ್ಟಮದ ಎಪಿಎಂಸಿ ಜಾನುವಾರು ಮಾರುಕಟ್ಟೆ ಆವರಣದಲ್ಲಿ ಕಾಂಪೌಂಡ್ ನಿರ್ಮಾಣ, ತಾಲೂಕಿನ ದೇಬೂರು, ಕರಳಾಪುರ, ಹರತಲೆ ಗ್ರಾಮಗಳಲ್ಲಿ ಮುಖ್ಯ ರಸ್ತೆ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.ನಂಜನಗೂಡು ಕ್ಷೇತ್ರಕ್ಕೆ ಕಳೆದ ಎರಡುವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಿಂದ ಹೆಚ್ಚಿನ ಅನುದಾನವನ್ನು ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದರು.ತಾಲೂಕಿನ ದೇಬೂರು ಗ್ರಾಮದಲ್ಲಿ 20 ಲಕ್ಷ ವೆಚ್ಚದ ಗ್ರಾಪಂ ಕಟ್ಟಡ, 25 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ, ಮೂರು ಕೋಟಿ ವೆಚ್ಚದಲ್ಲಿ ಹುಲ್ಲಹಳ್ಳಿ ಮುಖ್ಯರಸ್ತೆಯ ಮರು ಡಾಂಬರೀಕರಣ, ಎಸ್ಇಪಿ ಯೋಜನೆಯಡಿ 30 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಸೇರಿದಂತೆ ಸುಮಾರು 4.77 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದರು.ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಮಹೇಶ್, ಸಿ.ಎಂ. ಶಂಕರ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜು, ಕಳಲೆ ಗ್ರಾಮ ಅಧ್ಯಕ್ಷ ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದ್ದುಮಾದಶೆಟ್ಟಿ, ಮಾಜಿ ಪುರಸಭಾ ಸದಸ್ಯರಾದ ಪ್ರದೀಪ್, ಮುಖಂಡರಾದ ಗೋವಿಂದರಾಜು, ಸಿದ್ದಿಕ್, ಅಶೋಕ್, ಚಂದ್ರು, ಮಾದಪ್ಪ, ಪರಶಿವಮೂರ್ತಿ, ಬೀರೇಶ್, ಪಾಂಡು, ಜಯಮಾಲಾ ಬೀರೇಗೌಡ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಗ್ರಾಮಾಂತರ ಯುವ ಅಧ್ಯಕ್ಷ ಮಹೇಶ್, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಇಓ ಜರಾಲ್ಡ್ ರಾಜೇಶ್, ಜಿಪಂ ಇಲಾಖೆ ಎಇಇ ರಾಜು, ಎಇ ಈರಯ್ಯ, ದೇಬೂರು ಗ್ರಾಪಂ ಪಿಡಿಒ ಬಸವರಾಜು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುವೆಂಪು ಸದ್ಭಾವನಾ ಪ್ರಶಸ್ತಿಗೆ ಭಾಜನರಾದ ಶ್ರೀ ಶ್ಯಾಮ್ ಸುಂದರ್ ಹೆಗ್ಡೆ
ಕಿಡ್ನಾಪ್‌ ಆದ 1094 ಮಕ್ಕಳು ಇನ್ನೂ ಪತ್ತೆಯಾಗಿಲ್ಲ!