ತತ್ವಂ ಅಸಿ ಚಾರಿಟೇಬಲ್ ಟ್ರಸ್ಟ್ ಒಂದು ನೋಂದಾಯಿತ ಸಂಸ್ಥೆಯಾಗಿದ್ದು ಸಾಮಾಜಿಕ ಕಳಕಳಿಯಿಂದ ಕಳೆದ ನಾಲ್ಕು ವರ್ಷಗಳಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದೆ.
ಕನ್ನಡಪ್ರಭ ವಾರ್ತೆ ಶ್ರೀಮಂಗಲ
ಕಕ್ಕಡ ಪದ್''ನೆಟ್ಟ್ ಆಗಸ್ಟ್ 3 ರಂದು ನಡೆಯುವ ಪ್ರಯುಕ್ತ ಪೊನ್ನಂಪೇಟೆಯಿಂದ ಬೆಕ್ಕೆಸೊಡ್ಲೊರು ವರೆಗೆ 10 ಕಿ.ಮೀ. ಮ್ಯಾರಥಾನ್ ಸ್ಪರ್ಧೆಯನ್ನು ತತ್ವಂ ಅಸಿ ಚಾರಿಟೇಬಲ್ ಟ್ರಸ್ಟ್ ಹಾಗೂ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ನಡೆಸಲಾಗುವುದು ಎಂದು ತತ್ವಂ ಅಸಿ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ , ಉಳುವಂಗಡ ಲೋಹಿತ್ ಭೀಮಯ್ಯ ಅವರು ತಿಳಿಸಿದರು.ಪೊನ್ನಂಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದ ಇವರು, ತತ್ವಂ ಅಸಿ ಚಾರಿಟೇಬಲ್ ಟ್ರಸ್ಟ್ ಒಂದು ನೋಂದಾಯಿತ ಸಂಸ್ಥೆಯಾಗಿದ್ದು ಸಾಮಾಜಿಕ ಕಳಕಳಿಯಿಂದ ಕಳೆದ ನಾಲ್ಕು ವರ್ಷಗಳಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಸುಮಾರು 25 ಬಡ ಕುಟುಂಬಗಳಿಗೆ ಕಳೆದ 4 ವರ್ಷದಿಂದ ಪ್ರತಿ ತಿಂಗಳು ದಿನಸಿ ಪದಾರ್ಥವನ್ನು ನೀಡುತ್ತಾ ಬರುತ್ತಿದೆ. ಅಲ್ಲದೆ ಸಾಕಷ್ಟು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವುಗಳನ್ನು ದಾನಿಗಳ ಸಹಕಾರದಿಂದ ನೀಡುತ್ತಾ ಬರುತ್ತಿದೆ. ಅಲ್ಲದೆ ರೋಗಿಗಳಿಗೆ ಶ್ರೀ ಸತ್ಯಸಾಯಿ ಆಸ್ಪತ್ರೆ ಯೊಂದಿಗೆ ಸಂಪರ್ಕವನ್ನು ಇಟ್ಟುಕೊಂಡು ವೈದ್ಯಕೀಯ ನೆರವನ್ನು ಸಹ ಟ್ರಸ್ಟ್ ವತಿಯಿಂದ ಮಾಡಿಕೊಂಡು ಬರಲಾಗುತ್ತಿದೆ ಎಂದು ಮಾಹಿತಿಯನ್ನು ನೀಡಿದರು.
ಇದರ ಮುಂದುವರಿದ ಭಾಗವಾಗಿ ಟ್ರಸ್ಟ್ ನ ವತಿಯಿಂದ ಜನಸಾಮಾನ್ಯರಲ್ಲಿ ಆರೋಗ್ಯದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಕಿರಿಯರಿಂದ ಹಿರಿಯರವರೆಗೆ ಮ್ಯಾರಥಾನ್ ಓಟದ ಸ್ಪರ್ಧೆಯನ್ನು ಆಗಸ್ಟ್ 3 ರಂದು ಬೆಳಗ್ಗೆ 7.30 ಕ್ಕೆ ಪೊನ್ನಂಪೇಟೆಯಿಂದ
ಬೆಕ್ಕೆಸೊಡ್ಲೂರುವರೆಗೆ 10 ಕಿ.ಮೀ.ಫ್ಯಾಮಿಲಿ ರನ್. ಈ ಸ್ಪರ್ಧೆ ಟ್ರಸ್ಟ್ ನ ಕಾರ್ಯಕ್ರಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜನೆ ಮಾಡಲಾಗಿದೆ. ಹಾಗೆಯೇ 3 ಕಿ. ಮೀ. 16 ವರ್ಷದ ಒಳಗೆ ಇರುವ ಹುಡುಗರು ಮತ್ತು ಹುಡುಗಿಯರಿಗೆ 5 ಕಿ.ಮೀ 35 ವರ್ಷಕ್ಕೆ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಹಾಗೂ10 ಕಿ.ಮೀ ಮುಕ್ತ ಓಟದ ಸ್ಪರ್ಧೆ ಪುರುಷ ಹಾಗೂ ಮಹಿಳೆಯರಿಗೆ ಮ್ಯಾರಥಾನ್ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.ಪ್ರತಿ ವಿಭಾಗದಲ್ಲೂ ಪ್ರಥಮ ದ್ವಿತೀಯ ಹಾಗೂ ತೃತೀಯ ನಗದು ಬಹುಮಾನದೊಂದಿಗೆ ವಿಶೇಷ ಬಹುಮಾನವನ್ನು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕ ಚೊಟ್ಟೆಕ್''''''''ಮಾಡ ರಾಜೀವ್ ಬೋಪಯ್ಯ, ನಿರ್ದೇಶಕ ಮಲ್ಲಮಾಡ ಪ್ರಭು ಪೂಣಚ್ಚ, ತತ್ವಂ ಅಸಿ ಟ್ರಸ್ಟ್ ನ ಕೊಣಿಯಂಡ ಮಂಜು ಮಾದಯ್ಯ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.