ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಲೂಕು ಕ್ರೀಡಾಂಗಣವನ್ನು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶುಕ್ರವಾರ ಪರಿಶೀಲಿಸಿ ನಂತರ ಮಾತನಾಡಿದ ಅವರು, ಸಮಾವೇಶದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು, ಇತರೆ ಇಲಾಖೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
ಫಲಾನುಭವಿಗಳಿಗೆ, ಜನಪ್ರತಿನಿಧಿಗಳಿಗೆ, ಸಾರ್ವಜನಿಕರಿಗೆ ಕುಳಿತುಕೊಳ್ಳಲು ಪ್ರತ್ಯೇಕವಾಗಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ಕುಡಿಯುವ ನೀರು, ಮಜ್ಜಿಗೆಯನ್ನು ಕುಳಿತ ಸ್ಥಳಕ್ಕೆ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಫಲಾನುಭವಿಗಳಿಗೆ ಕರೆತರಲು ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು, ಸಮಾವೇಶ ಮುಗಿದ ನಂತರ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.ಪಟ್ಟಣಕ್ಕೆ ಜನರು ಬಸ್ ಗಳ ಮೂಲಕ ಆಗಮಿಸುವುದರಿಂದ ಪಟ್ಟಣದ ಪೇಟೆಬೀದಿಯಲ್ಲಿ ಸಂಚಾರಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಏಕ ಮುಖ ಸಂಚಾರ ಕೈಗೊಂಡು ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದರು.
ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.ತಹಸೀಲ್ದಾರ್ ಸೋಮಶೇಖರ್, ತಾಪಂ ಇಒ ಎಲ್.ಸಂದೀಪ್, ಟಿಎಚ್ಓ ರವೀಂದ್ರ ಬಿ.ಗೌಡ, ಬಿಇಒ ಸಿ.ಎಚ್.ಕಾಳಿರಯ್ಯ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ಸಿಪಿಐ ಪ್ರಸಾದ್, ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ, ಸದಸ್ಯ ಮನೋಜ್ ಕುಮಾರ್, ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ ಇದ್ದರು.