ಕನ್ನಡಪ್ರಭ ವಾರ್ತೆ ಮಂಡ್ಯ
ಮಾದರಿ ಸೋಲಾರ್ ಗ್ರಾಮ ಸ್ಪರ್ಧೆಗೆ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗುವುದು ಹಾಗೂ ಸ್ಪರ್ಧೆಯಲ್ಲಿ ಪರಿಣಾಮಕಾರಿಯಾಗಿ ಭಾಗವಹಿಸಲು ಅನುಕೂಲವಾಗುವಂತೆ ಹಲವು ಉತ್ತೇಜನ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.
ಆಯ್ಕೆಯಾದ ಗ್ರಾಮ ವ್ಯಾಪ್ತಿಯಲ್ಲಿರುವ ಮನೆಗಳಿಗೆ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿಯಡಿ ಹಾಗೂ ಇತರೆ ಜಕಾತಿಯ ಸ್ಥಾವರಗಳಿಗೆ ಗ್ರಾಹಕರಿಗೆ ಸೋಲಾರ್ ರೂಫ್ ಟಾಪ್‌ನ್ನು ಅಳವಡಿಸಲು ಪ್ರೋತ್ಸಾಹಿಸಲಾಗುವುದು.ರೈತ ಗ್ರಾಹಕರ ಕೃಷಿ ಪಂಪ್‌ಸೆಟ್‌ಗಳಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸಲು ಜನಜಾಗೃತಿ ಮೂಡಿಸುವುದು ಮತ್ತು ಕುಸುಮ್-ಸಿ ಯೋಜನೆಯಡಿಯಲ್ಲಿ ಸರ್ಕಾರಿ-ಖಾಸಗಿ ಜಾಗವನ್ನು ಪಡೆಯಲು ಸಹಾಯ ಮಾಡಲಾಗುವ್ಯದು. ಸರ್ಕಾರಿ ಕಚೇರಿ-ಕಟ್ಟಡಗಳ ಮೇಲೆ ಕುಡಿಯುವ ನೀರು ಮತ್ತು ಬೀದಿ ದೀಪಗಳಿಗೆ ಸೌರಶಕ್ತಿ ಅಳವಡಿಸುವುದು.
ಜಿಲ್ಲೆಯ ವ್ಯಾಪ್ತಿಯಲ್ಲಿ ಪಿಎಂ ಸೂರ್ಯ ಘರ್ ಮುಪ್ತ್ ಬಿಜಿಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಿತಿಯನ್ನು ರಚಿಸಲಾಗಿದ್ದು, ಜಿಲ್ಲಾಧಿಕಾರಿ ಅವರು ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಪಂಚಾಯತ್ ಸಿಇಒ, ತಹಸೀಲ್ದಾರರು, ಸೆಸ್ಕ್ ಎಂಜಿನಿಯರ್‌ಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.