ಕನ್ನಡಪ್ರಭ ವಾರ್ತೆ ಮಂಡ್ಯ
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಶ್ರೀ ರಂಗನಾಥ ಸ್ವಾಮಿ ದೇವಾಲಯವನ್ನು ಕೇಂದ್ರವಾಗಿರಿಸಿಕೊಂಡು ಇದರ ಸುತ್ತಲಿನ 5.5 ಕಿ.ಮೀ.ನಲ್ಲಿ ಬರುವ ಪ್ರವಾಸಿ ತಾಣಗಳಿಗೆ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.
ಇದರಲ್ಲಿ ಒಡೆಯರ್ ಅವರ ಜನ್ಮಸ್ಥಳ, ಪುರಾತನ ಗೇಟ್‌ಗಳ ಸಂರಕ್ಷಣೆ, ವಿವಿಧ ರೀತಿಯ ಸೂಚನಾ ಫಲಕಗಳು, ಪುರಾತನ ಕಾಲದಲ್ಲಿ ಯುದ್ಧದಲ್ಲಿ ಉಪಯೋಗಿಸುತ್ತಿದ್ದ ಶಸ್ತ್ರಾಸ್ತ್ರಗಳು, ಕಲ್ಯಾಣಿಗಳು, ಮಂಟಪಗಳು, ರಸ್ತೆಗಳು ಸೇರಿದಂತೆ ವಿವಿಧ ರೀತಿಯ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದರು.ಈ ಯೋಜನೆ ಸಂಪೂರ್ಣವಾಗಿ ಸಿದ್ಧವಾದ ನಂತರ ಶ್ರೀರಂಗಪಟ್ಟಣ ಶಾಸಕರೊಂದಿಗೆ ಸಭೆ ನಡೆಸಿ, ನಂತರ ಪ್ರಸ್ತಾವನೆಯನ್ನು ಸಲ್ಲಿಸಬೇಕಿದೆ. ಅಧಿಕಾರಿಗಳಿಗೆ ಸಿದ್ಧತೆ ನಡೆಸುವಂತೆ ತಿಳಿಸಿದರು.
ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಮಾತನಾಡಿ, ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಕೆಲವು ದುರಸ್ತಿ ಕಾಮಗಾರಿಗಳು ನಡೆಯಬೇಕಿದ್ದು, ಇದಕ್ಕೆ ಅನುದಾನ ಪುರಾತತ್ವ ಇಲಾಖೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ ದೇವಸ್ಥಾನದಿಂದ ಅನುದಾನ ಪಡೆದು ಕಾಮಗಾರಿ ನಡೆಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
28ಕೆಎಂಎನ್‌ಡಿ-4
ಮಾನವ ಸರಪಳಿಯಲ್ಲಿ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ:
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸುವ ಸಲುವಾಗಿ ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣದಲ್ಲಿ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.