ಕನ್ನಡಪ್ರಭ ವಾರ್ತೆ ಕಾಗವಾಡಚಿಕ್ಕೋಡಿ ಲೋಕಸಭಾ ಕ್ಷೇತ್ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತದಾರರು ಬೆಂಬಲ ವ್ಯಕ್ತಪಡಿಸಿದ್ದು, ನೂರಕ್ಕೆ ನೂರರಷ್ಟು ಅವರು ಗೆಲ್ಲಲಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿಶ್ವಾಸ ವ್ಯಕ್ತಪಡಿಸಿದರು.
ಕಳೆದೊಂದು ವರ್ಷದಲ್ಲಿ ಕಾಗವಾಡ ಮತಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳಾಗಿವೆ. ಅನುದಾನ ನೀಡುವಂತೆ ಕೋರಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೂರಾರು ಕೋಟಿ ಅನುದಾನ ನೀಡಿರುವುದರಿಂದ ಜನಪರ ಕಾರ್ಯಗಳು ನಡೆಯುತ್ತಿವೆ. ಹೀಗಾಗಿ, ಪ್ರತಿಯೊಂದು ಗ್ರಾಮಗಳಲ್ಲಿ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
---------------ಕೋಟ್...ರಾಜ್ಯ ಸರ್ಕಾರದ ಜನಪರ ಕೃಷಿ ಪರವಾದ ಆಡಳಿತವನ್ನು ಗಮನಿಸಿ ಜನರು ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.-ರಾಜು ಕಾಗೆ, ಕಾಗವಾಡ ಶಾಸಕ.