ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಕಬ್ಬು ಬೆಳೆಗಾರರಿಗೆ ಟನ್ ಕಬ್ಬಿಗೆ ಸರ್ಕಾರ ₹50 ಪ್ರೋತ್ಸಾಹ ಧನ ಹಾಗೂ ಕಾರ್ಖಾನೆಯವರು ₹50 ಸೇರಿಸಿ ಒಟ್ಟು ₹100 ಗಳನ್ನು ಪಾವತಿ ಮಾಡುವಂತೆ ಘೋಷಣೆ ಮಾಡಿದ್ದರೂ ಈವರೆಗೂ ಹಣ ಪಾವತಿಸದೆ ಸಕ್ಕರೆ ಕಾರ್ಖಾನೆಗಳು ಮೀನಮೇಷ ಎಣಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
ತಕ್ಷಣ ಕಬ್ಬು ಬೆಳೆಗಾರರಿಗೆ ಟನ್ ಕಬ್ಬಿಗೆ ₹100 ಪಾವತಿಸಬೇಕು. ನಂತರ ಪ್ರಸಕ್ತ ಸಾಲಿನಲ್ಲಿ ಕಬ್ಬು ಅರೆಯುವ ಕಾರ್ಯವನ್ನು ಪ್ರಾರಂಭಿಸಬೇಕು. ಕೆ.ಎಂ.ದೊಡ್ಡಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಸೇರಿದಂತೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು ಹಣ ಸಂದಾಯ ಮಾಡಬೇಕು. ರೈತರಿಗೆ ಪ್ರೋತ್ಸಾಹ ಧನ ಟನ್ ಕಬ್ಬಿಗೆ ₹100 ತಕ್ಷಣ ಪಾವತಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಉತ್ಪಾದನಾ ವೆಚ್ಚ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಡೀಸೆಲ್- ಪೆಟ್ರೋಲ್, ರಾಸಾಯನಿಕ ಗೊಬ್ಬರ ಮುಂತಾದವುಗಳ ಬೆಲೆಗಳು ಹೆಚ್ಚಿಸಿರುವ ಕಾರಣ ಕೃಷಿ ಉತ್ಪಾದನಾ ವೆಚ್ಚವೂ ಹೆಚ್ಚಾಗುತ್ತಿದೆ. ರೈತ ಸಾಲದ ಸುಳಿಯಲ್ಲಿ ಸಿಲುಕಿದ್ದು ರೈತರ ಆರ್ಥಿಕ ಸ್ಥಿತಿ ಪೂರ್ಣ ಹದಗೆಟ್ಟಿದೆ. ರೈತರು ಕೃಷಿಯಿಂದ ವಿಮುಖರಾಗುವತ್ತ ಸಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕಳೆದ ಸಾಲಿನ ₹50 ಪಾವತಿ ಮಾಡುವವರೆಗೆ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು, ಕಬ್ಬು ಅರೆಯಲು ಅವಕಾಶ ನೀಡುವುದಿಲ್ಲ ಎಂದು ರೈತ ಸಂಘದ ಮೂಲಕ ಎಚ್ಚರಿಕೆ ನೀಡಿದ್ದಾರೆ.