ಪಾದಯಾತ್ರೆ ವೇಳೆ ವಿಜಯೇಂದ್ರ ಭೇಟಿಯಾದ 104 ವರ್ಷದ ಅಜ್ಜಿ

KannadaprabhaNewsNetwork |  
Published : Sep 08, 2026, 02:45 AM IST
ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಭಾಗಿಯಾಗಿ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹೂವಿನ ಹಾರ ಹಾಕಿ ಆಶೀರ್ವದಿಸಿದ ತಿಪಟೂರಿನ 104 ವರ್ಷದ ಶಿವಮ್ಮ. | Kannada Prabha

ಸಾರಾಂಶ

ತಿಪಟೂರು ಮೂಲದ ಶಿವಮ್ಮ ಅವರು ವಿಜಯೇಂದ್ರ ಅವರನ್ನು ಭೇಟಿಯಾಗಲು ನಿನ್ನೆಯಿಂದಲೇ ಕಾತರದಿಂದ ಕಾಯುತ್ತಿದ್ದರು ಎನ್ನಲಾಗಿದೆ. ಪಾದಯಾತ್ರೆ ಕಂಪ್ಲಿ ಹೊರವಲಯಕ್ಕೆ ಆಗಮಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಅವರು ವಿಜಯೇಂದ್ರ ಅವರನ್ನು ಕಂಡು ಹರ್ಷ ವ್ಯಕ್ತಪಡಿಸಿದರು.

ಕಂಪ್ಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಕಂಪ್ಲಿ ಹೊರವಲಯಕ್ಕೆ ಆಗಮಿಸಿದ ವೇಳೆ 104 ವರ್ಷದ ಶಿವಮ್ಮ ಅವರು ಸ್ವತಃ ಪಾದಯಾತ್ರೆ ನಡೆಯುತ್ತಿದ್ದ ಸ್ಥಳಕ್ಕೆ ಬಂದು ವಿಜಯೇಂದ್ರ ಅವರನ್ನು ಭೇಟಿಯಾಗಿ ಆಶೀರ್ವದಿಸಿದರು.ತಿಪಟೂರು ಮೂಲದ ಶಿವಮ್ಮ ಅವರು ವಿಜಯೇಂದ್ರ ಅವರನ್ನು ಭೇಟಿಯಾಗಲು ನಿನ್ನೆಯಿಂದಲೇ ಕಾತರದಿಂದ ಕಾಯುತ್ತಿದ್ದರು ಎನ್ನಲಾಗಿದೆ. ಪಾದಯಾತ್ರೆ ಕಂಪ್ಲಿ ಹೊರವಲಯಕ್ಕೆ ಆಗಮಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಅವರು ವಿಜಯೇಂದ್ರ ಅವರನ್ನು ಕಂಡು ಹರ್ಷ ವ್ಯಕ್ತಪಡಿಸಿದರು.ಬಳಿಕ ವಿಜಯೇಂದ್ರ ಅವರಿಗೆ ಹೂವಿನ ಹಾರ ಹಾಕಿದ ಶಿವಮ್ಮ, ‘ನೀವು ಮುಂದೆ ಮುಖ್ಯಮಂತ್ರಿ ಆಗಬೇಕು’ ಎಂದು ಹಾರೈಸಿ ಆಶೀರ್ವದಿಸಿದರು. ಅಜ್ಜಿಯ ಆಶೀರ್ವಾದ ಸ್ವೀಕರಿಸಿದ ವಿಜಯೇಂದ್ರ ಅವರು ಆತ್ಮೀಯವಾಗಿ ಮಾತನಾಡಿ, ಅವರ ಆರೋಗ್ಯ ವಿಚಾರಿಸಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಭಿಮಾನಿಯಾಗಿರುವ ಶಿವಮ್ಮ, ಇದೀಗ ಅವರ ಪುತ್ರ ವಿಜಯೇಂದ್ರ ಅವರನ್ನು ಭೇಟಿಯಾಗಿ ಆಶೀರ್ವದಿಸಿರುವುದು ಪಾದಯಾತ್ರೆಯಲ್ಲಿ ವಿಶೇಷ ಗಮನ ಸೆಳೆಯಿತು.104 ವರ್ಷದ ವಯಸ್ಸಿನಲ್ಲಿಯೂ ಶಿವಮ್ಮ ಅವರು ಸ್ವತಃ ಪಾದಯಾತ್ರೆ ಸ್ಥಳಕ್ಕೆ ಆಗಮಿಸಿ ವಿಜಯೇಂದ್ರ ಅವರನ್ನು ಭೇಟಿಯಾಗಿರುವುದು ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಗಮನ ಸೆಳೆಯಿತು. ಅಜ್ಜಿಯ ಅಭಿಮಾನ ಮತ್ತು ಹಾರೈಕೆಗೆ ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಸಿದ್ದರಾಮಯ್ಯ ಪ್ರಯತ್ನ: ಪ್ರತಾಪ ಸಿಂಹ

ಕಂಪ್ಲಿ: ಹಿಂದುಳಿದವರು ಹಾಗೂ ದಲಿತರ ಏಳಿಗೆಗಿಂತ ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಮ್ಮ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ ಸರ್ಕಾರವನ್ನು ಅಸ್ಥಿರಗೊಳಿಸಲು ವ್ಯವಸ್ಥಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದರು.ದೇವಸಮುದ್ರದ ಬಳಿ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಮತ್ತೆ ಅಹಿಂದ ಚಳವಳಿಗೆ ಒತ್ತು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ನಾಯಕತ್ವವನ್ನು ಅವರದೇ ಪಕ್ಷದ ಹಿರಿಯ ನಾಯಕರು ಪ್ರಶ್ನಿಸುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ನಿರೀಕ್ಷಿತ ಸಂಖ್ಯೆಯಲ್ಲಿ ಜನ ಸೇರಿರಲಿಲ್ಲ. ಅವರ ತವರು ಜಿಲ್ಲೆ ಮೈಸೂರಿನಲ್ಲೂ ಬೆಂಬಲ ಕಡಿಮೆಯಾಗಿದೆ. ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಶಾಸಕ ತನ್ವೀರ್ ಸೇಠ್ ಅವರಂತಹ ಹಿರಿಯ ನಾಯಕರನ್ನು ಕಾಂಗ್ರೆಸ್‌ನಲ್ಲಿ ಕಡೆಗಣಿಸಲಾಗಿದೆ ಎಂದರು.ಆರ್‌ಡಿಪಿಆರ್ ಇಲಾಖೆಯ 24 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದ ಕೆಪಿಎಸ್‌ಸಿ ಒಎಂಆರ್ ಶೀಟ್ ಅಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಈ ವಿಚಾರ ಬೆಳಕಿಗೆ ಬಂದ ಬಳಿಕ ಸಚಿವರು ಮೌನ ವಹಿಸಿರುವುದು ಯಾಕೆ ? ಎಂದು ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನದಲ್ಲಿ ಶರಣರ ತತ್ವಾದರ್ಶ ಅಳವಡಿಸಿಕೊಳ್ಳಿ: ಡಾ. ಅನ್ನದಾನೀಶ್ವರ ಶ್ರೀಗಳು
ಯಕ್ಷೋತ್ಸವ ತಾಳಮದ್ದಲೆ ಸ್ಪರ್ಧೆಯಲ್ಲಿ ೨೭ ತಂಡ ಭಾಗಿ