ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಶರಣರ ಗ್ರಾಮ ಸಾಸಲು ಗ್ರಾಮದ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲದ ಹುಂಡಿ ಎಣಿಕೆ ಕಾರ್ಯ ಬುಧವಾರ ನಡೆಯಿತು.ಕಾರ್ತಿಕ ಮಾಸದ 3ನೇ ವಾರದ 7 ದಿನಗಳ ಎಣಿಕೆ ಹಣ ಕಾರ್ಯವನ್ನು ಮುಜರಾಯಿ ಅಧಿಕಾರಿ ತಹಸೀಲ್ದಾರ್ ಅಶೋಕ್ ಮಾರ್ಗದರ್ಶನದಲ್ಲಿ ಉಪ ತಹಸೀಲ್ದಾರ್ ವೀಣಾ ನೇತೃತ್ವದಲ್ಲಿ ಹುಂಡಿ ಎಣಿಕೆ ನಡೆದು ಎರಡು ದೇಗುಲಗಳಿಂದ ಒಟ್ಟು 11,23,318 ರು. ಸಂಗ್ರಹವಾಗಿತ್ತು. ಇದರ ಜೊತೆ 3 ಗ್ರಾಂ ಚಿನ್ನದ ಉಂಗುರು ಹಾಗೂ 300 ಗ್ರಾಂ ಬೆಳ್ಳಿ ಹರಿಕೆ ಕಾಣಿಕೆ ರೂಪದಲ್ಲಿ ಭಕ್ತರು ಹುಂಡಿಯಲ್ಲಿ ಹಾಕಿದ್ದರು.
ಸೋಮೇಶ್ವರ ಹಾಗೂ ಶಂಭುಲಿಂಗೇಶ್ವರ ದೇಗುಲದಲ್ಲಿರುವ ಒಟ್ಟು 22 ಹುಂಡಿಗಳನ್ನು ಬೆಳಗ್ಗಿನಿಂದ ಸಂಜೆವರೆಗೆ ಕಿಕ್ಕೇರಿ ಪೊಲೀಸರ ಸರ್ಪಗಾವಲಿನಲ್ಲಿ ಎಣಿಕೆ ಮಾಡಲಾಯಿತು. ಕಾಣಿಕೆ ಹಣವನ್ನು ಕೆ.ಆರ್.ಪೇಟೆ ಬ್ಯಾಂಕ್ ಆಫ್ ಬರೋಡಾದ ದೇಗುಲದ ಮುಜರಾಯಿ ಖಾತೆಗೆ ಜಮಾ ಮಾಡಲಾಯಿತು.ಈ ವೇಳೆ ರಾಜಸ್ವ ನಿರೀಕ್ಷಕ ಡಿ.ಆರ್.ನರೇಂದ್ರ, ಗ್ರಾಮ ಆಡಳಿತಾಧಿಕಾರಿ ಬಿ.ಎಂ.ಪ್ರಸನ್ನ, ಸೋಮಾಚಾರ್, ತಿಪ್ಪೇಶ್, ಸುನೀಲ್ ಗಾಣಿಗೇರ್, ಹರ್ಷಿತಾ, ವನಜಾಕ್ಷಿ, ಮುಜರಾಯಿ ಸಹಾಯಕಿ ಪೂರ್ಣಿಮಾ, ಗ್ರಾಮ ಸಹಾಯಕರು, ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ, ಗ್ರಾಮ ಮುಖಂಡರು ಭಾಗವಹಿಸಿದ್ದರು.
ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಭವನ ಉದ್ಘಾಟನೆಕಿಕ್ಕೇರಿ:ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಕಾರ ಭವನ ನ.22 ರಂದು ಉದ್ಘಾಟನೆಯಾಗಲಿದೆ.
ಸಂಘದ ಅಧ್ಯಕ್ಷ ಕಾಯಿ ಸುರೇಶ್ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಭಾವಚಿತ್ರ ಅನಾವರಣ ಮಾಡುವರು.ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಜೆ.ಸಿ.ಚಂದ್ರಶೇಖರ್, ಶಾಸಕರಾದ ಎಚ್.ಟಿ.ಮಂಜು, ಸಿ.ಎನ್.ಬಾಲಕೃಷ್ಣ, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಕೆಪಿಸಿಸಿ ಸದಸ್ಯ ಸುರೇಶ್, ಜಿಪಂ ಮಾಜಿ ಉಪಾಧ್ಯಕ್ಷಕೆ.ಎಸ್. ಪ್ರಭಾಕರ್, ಆರ್‌ಟಿಒ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್, ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಸಿ.ಎನ್. ಪುಟ್ಟಸ್ವಾಮಿಗೌಡ, ಜೆಡಿಎಸ್ ಹೋಬಳಿ ಅಧ್ಯಕ್ಷ ಕಾಯಿ ಮಂಜೇಗೌಡ, ಗ್ರಾಪಂ ಅಧ್ಯಕ್ಷಕೆ.ಜಿ. ಪುಟ್ಟರಾಜು, ಟಿಎಪಿಪಿಸಿಎಂಎಸ್ ತಾಲೂಕು ಅಧ್ಯಕ್ಷ ಬಿ.ಎಲ್. ದೇವರಾಜು, ಎಂಡಿಸಿಸಿ ಬ್ಯಾಂಕ್‌ಅಧ್ಯಕ್ಷ ಜೋಗಿಗೌಡ, ಉಪಾಧ್ಯಕ್ಷ ಎಚ್.ಕೆ.ಅಶೋಕ್, ಸಂಘಗಳ ಉಪನಿಬಂಧಕ ಎಚ್.ಬಿ. ಭರತ್‌ಕುಮಾರ್, ಜಿಪಂ ಮಾಜಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜು ಮತ್ತಿತರರು ಭಾಗವಹಿಸಲಿದ್ದಾರೆ.