ಬೆಂ.ಗ್ರಾ. ಜಿಲ್ಲೆಯಲ್ಲಿ 11 ಬಾಲ ಕಾರ್ಮಿಕರ ರಕ್ಷಣೆ

KannadaprabhaNewsNetwork |  
Published : May 09, 2026, 01:45 AM IST
ಬೆಂ.ಗ್ರಾ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು 11 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಹೋಬಳಿ ವ್ಯಾಪ್ತಿಯ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಬಾಲ ಕಾರ್ಮಿಕರು ದುಡಿಮೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ 11 ಮಕ್ಕಳ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಹೋಬಳಿ ವ್ಯಾಪ್ತಿಯ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಬಾಲ ಕಾರ್ಮಿಕರು ದುಡಿಮೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ 11 ಮಕ್ಕಳ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ.

ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಹೊಸಕೋಟೆ ತಾಲೂಕಿನ ಕಾರ್ಮಿಕ ನಿರೀಕ್ಷಕರು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು ಜಂಟಿ ತಪಾಸಣೆ ಕೈಗೊಂಡು ರಕ್ಷಿಸಲಾಗಿದೆ.

ರಕ್ಷಿಸಿದ ಬಾಲ ಮತ್ತು ಕಿಶೋರ ಕಾರ್ಮಿಕನನ್ನು ಮಕ್ಕಳ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಮೌಖಿಕ ಆದೇಶದ ಮೇರೆಗೆ ದೇವನಹಳ್ಳಿ ತಾಲೂಕಿನ ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಗಿದೆ, ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕ್ರಮ ವಹಿಸಲಾಗಿದೆ.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ₹50 ಸಾವಿರದವರೆಗೂ ದಂಡ ವಿಧಿಸಲಾಗುತ್ತದೆ. 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಕೆಲಸಕ್ಕೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡಿ ಮಾಹಿತಿ ನೀಡಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬಾಲಕಾರ್ಮಿಕ ಯೋಜನೆ ಸೊಸೈಟಿಯ ಯೋಜನಾ ನಿರ್ದೇಶಕರಾದ ಗಣೇಶಮೂರ್ತಿ ಎ. ಎಸ್. ಹೊಸಕೋಟೆ ತಾಲೂಕಿನ ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್, ಇತರೆ ಸಿಬ್ಬಂದಿ ಇದ್ದರು.

7ಕೆಡಿಬಿಪಿ1- ಬೆಂ.ಗ್ರಾ. ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು 11 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಟ್ಟ ಮಾತಿನಂತೆ ನಡೆಯುವುದೇ ಕನ್ನಡದ ಸಂಸ್ಕೃತಿ: ಕುಂದೂರು ಅಶೋಕ್
ಕನ್ನಡ ಸಾಹಿತ್ಯ ಪರಿಷತ್‌ ಸ್ಥಾಪನೆ ಉದ್ದೇಶವೇ ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿ ಪ್ರಸಾರ: ರವಿ ದಳವಾಯಿ