ಭಾರತ್ ಬೀಡಿ ವರ್ಕ್ಸ್ ಸಂಸ್ಥಾಪಕರ 113ನೇ ಜನ್ಮ ದಿನಾಚರಣೆ

KannadaprabhaNewsNetwork |  
Published : Feb 10, 2026, 03:00 AM IST
 ಭಾರತ್ ಬೀಡಿ ವರ್ಕ್ಸ್ ಸಂಸ್ಥಾಪಕರ 113ನೇ ಜನ್ಮದಿನವನ್ನು ಆಚರಿಸಲಾಯಿತು. | Kannada Prabha

ಸಾರಾಂಶ

30 ಮಾರ್ಕಿನ ಬೀಡಿಗಳ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಮಂಜುನಾಥ ಪೈ ಅವರ 113ನೇ ಜನ್ಮ ದಿನವನ್ನು ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು.

ಮಂಗಳೂರು: ಪ್ರಖ್ಯಾತ 30 ಮಾರ್ಕಿನ ಬೀಡಿಗಳ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಮಂಜುನಾಥ ಪೈ ಅವರ 113ನೇ ಜನ್ಮ ದಿನವನ್ನು ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು.

ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಸುಬ್ರಾಯ ಎಂ. ಪೈ ಅವರು ಸಂಸ್ಥೆಯು ನಡೆದು ಬಂದ ದಾರಿ, ಸಂಸ್ಥಾಪಕರು ಸಮಾಜಕ್ಕೆ ನೀಡಿದ ಕೊಡುಗೆ, ಅವರ ದೂರದೃಷ್ಟಿಯ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳು ತಮ್ಮ ಅನಿಸಿಕೆಯನ್ನು ಹೇಳಿದರು. ರಮೇಶ್ ಪೈ ನಿಪ್ಪಾಣಿ ಅವರು ಸಂಸ್ಥಾಪಕರ ಬಗ್ಗೆ ಮಾತನಾಡಿದರು.

ಲೆಕ್ಕ ಪರಿಶೋಧಕ ಸಿ.ಎ. ಶಿವಾನಂದ ಪೈ ಅವರು ಸಂಸ್ಥೆ ನಡೆದು ಬಂದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ನಿರ್ದೇಶಕರಾದ ನಾಗೇಂದ್ರ ಡಿ. ಪೈ, ಆನಂದ ಜಿ. ಪೈ, ವೆಂಕಟೇಶ ಎಂ. ಪೈ ಹಾಗೂ ರಫ್ತು ಮಾರುಕಟ್ಟೆ ವಿಭಾಗದ ಆಡಳಿತ ಅಧಿಕಾರಿ ಅಭಿಷೇಕ್ ಎನ್. ಪೈ ಇದ್ದರು. ಸಂಸ್ಥೆಯ ನಿರ್ದೇಶಕ ಸುಧೀರ್ ಎಂ.ಪೈ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

80 ಶಾಸಕರ ಬೆಂಬಲ ಇದೆ ಎಂಬುದು ಪ್ರಶ್ನೆಯಲ್ಲ: ಸತೀಶ್‌
ನಮ್ಮ ಪ್ರಚೋದಿಸಬೇಡಿ- ಡಿಕೆ ಸಿಎಂ ಮಾಡಿ ಅಂತ 90 ಶಾಸಕರು ಕೇಳಿದ್ದೇವೆ : ಯತೀಂದ್ರಗೆ ಇಕ್ಬಾಲ್‌