ಬ್ಯಾಂಕ್ ಆಫ್ ಬರೋಡ ಬ್ಯಾಂಕಿನ 117ನೇ ಸಂಸ್ಥಾಪನಾ ದಿನಾಚರಣೆ

KannadaprabhaNewsNetwork |  
Published : Jul 21, 2024, 01:16 AM IST
58 | Kannada Prabha

ಸಾರಾಂಶ

ನಿರಂತರವಾಗಿ ಗ್ರಾಹಕರಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವುದು ಹೆಮ್ಮೆಯ ವಿಷಯ

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ

ಪಟ್ಟಣದ ಹುಣಸೂರು ಬೇಗೂರು ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕಿನ 117ನೇ ಸಂಸ್ಥಾಪನಾ ದಿನವನ್ನು ಶನಿವಾರ ಆಚರಿಸಿತು.

ಸಂಸ್ಥಾಪನಾ ದಿನದ ಅಂಗವಾಗಿ ಬ್ಯಾಂಕಿನ ವ್ಯವಸ್ಥಾಪಕ ಕಿಶೋರ್ ಕುಮಾರ್ ಮತ್ತು ಬ್ಯಾಂಕಿನ ಗ್ರಾಹಕರು ಒಟ್ಟಿಗೆ ಸೇರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬ್ಯಾಂಕಿನ ವ್ಯವಸ್ಥಾಪಕ ಕಿಶೋರ್ ಕುಮಾರ್ ಮಾತನಾಡಿ, ನಮ್ಮ ಬ್ಯಾಂಕ್ ಆಫ್ ಬರೋಡ 1908ರಲ್ಲಿ ಸ್ಥಾಪನೆಯಾಗಿದ್ದು, ಇಲ್ಲಿಯವರೆಗೂ ನಿರಂತರವಾಗಿ ಗ್ರಾಹಕರಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಶಾಖೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ರೈತರಿಗೆ ಬೆಳೆ ಸಾಲ, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ, ವಾಹನ ಸಾಲ ಗಳನ್ನು ನೀಡಲಾಗುತ್ತಿದೆ, ಗ್ರಾಹಕರಿಗೆ ಸಕಾಲದಲ್ಲಿ ಬ್ಯಾಂಕಿನ ಪರಿಪೂರ್ಣ ಮಾಹಿತಿಯನ್ನು ನೀಡಲಾಗುತ್ತಿತ್ತು, ಹೆಚ್ಚು ಹೆಚ್ಚು ಗ್ರಾಹಕರನ್ನು ಆಕರ್ಷಿಸುತ್ತಾ ಬಂದಿದೆ ಎಂದು ಅವರು ತಿಳಿಸಿದರು.

ಸಂಸ್ಥಾಪನಾ ದಿನದ ಅಂಗವಾಗಿ ಎಚ್.ಡಿ. ಕೋಟೆ ತಾಲೂಕು ಕಸಬಾ ಹೋಬಳಿ ಚಿತ್ತಧಾಮ ಮಾನಸಿಕ ಅಸ್ವಸ್ಥರ ಆಸ್ಪತ್ರೆಗೆ ಬ್ಯಾಂಕಿನ ವತಿಯಿಂದ 5 ಸಾವಿರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಹಕರಾದ ಗಣೇಶ್, ದಿನೇಶ್, ರಮೇಶ್, ಪಟ್ಟಣದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಂಕಪ್ಪ, ರವಿಗೌಡ, ವಿವೇಕ್, ಸಹಾಯಕ ವ್ಯವಸ್ಥಾಪಕ ರಾಜಶೇಖರ್, ಚಿರಂಜೀವಿ, ಶಿವರಾಮು, ಸಂದೀಪ್, ರಾಜ್, ಕಮಲ್ ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ