ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ

KannadaprabhaNewsNetwork |  
Published : Dec 16, 2025, 03:00 AM IST
ಸವದತ್ತಿಯ ಸುಕ್ಷೇತ್ರ ಯಲ್ಲಮ್ಮಾ ದೇವಸ್ಥಾನಕ್ಕೆ ವಿ.ಪ ಸದಸ್ಯರಾದ ಸಿ.ಟಿ.ರವಿ, ಕಾರ್ಕಳ ಶಾಸಕರಾದ ಸುನೀಲ ಕುಮಾರ, ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ ಯಲ್ಲಮ್ಮಾ ದೇವಿಯ ದರ್ಶನ ಪಡೆದರು. ವಿರುಪಾಕ್ಷ ಮಾಮನಿ, ಸುಭಾಷ ಪಾಟೀಲ ಮತ್ತು ಇತರರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಸವದತ್ತಿ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ₹ ೧೧೮ ಕೋಟಿ ಅನುದಾನ ನೀಡಲಾಗಿದ್ದು, ರಾಜ್ಯ ಸರ್ಕಾರ ದೇವಸ್ಥಾನದಲ್ಲಿ ಕೇಂದ್ರದ ಅನುದಾನದಲ್ಲಿ ಅತ್ಯವಶ್ಯಕ ಅಭಿವೃದ್ದಿ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ ಭಕ್ತರಿಗೆ ಅನುಕೂಲ ಕಲ್ಪಿಸುವಂತ ಕಾರ್ಯವನ್ನು ಮಾಡಬೇಕಿದೆ ಎಂದು ವಿ.ಪ ಸದಸ್ಯ ಸಿ.ಟಿ.ರವಿ ಹೇಳಿದರು.

ಕನ್ನಡಪ್ರಭ ವಾರ್ತೆ ಸವದತ್ತಿ

ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ₹ ೧೧೮ ಕೋಟಿ ಅನುದಾನ ನೀಡಲಾಗಿದ್ದು, ರಾಜ್ಯ ಸರ್ಕಾರ ದೇವಸ್ಥಾನದಲ್ಲಿ ಕೇಂದ್ರದ ಅನುದಾನದಲ್ಲಿ ಅತ್ಯವಶ್ಯಕ ಅಭಿವೃದ್ದಿ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ ಭಕ್ತರಿಗೆ ಅನುಕೂಲ ಕಲ್ಪಿಸುವಂತ ಕಾರ್ಯವನ್ನು ಮಾಡಬೇಕಿದೆ ಎಂದು ವಿ.ಪ ಸದಸ್ಯ ಸಿ.ಟಿ.ರವಿ ಹೇಳಿದರು.ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಶ್ರೀದೇವಿಯ ದರ್ಶನ ಪಡೆದು ನಂತರ ಬಿಜೆಪಿ ತಾಲೂಕು ಅಧ್ಯಕ್ಷ ವಿರುಪಾಕ್ಷ ಮಾಮನಿ ಅವರ ನಿವಾಸದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕೋಟ್ಯಂತರ ಭಕ್ತರು ಆಗಮಿಸುವ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿಗಳಾಗಬೇಕಿದ್ದು, ಕೇಂದ್ರ ಸರ್ಕಾರ ನೀಡಿದ ಅನುದಾನದಲ್ಲಿ ಇನ್ನೂ ಅಭಿವೃದ್ದಿ ಕೆಲಸಗಳು ಯಾಕೆ ಪ್ರಾರಂಭವಾಗಿಲ್ಲ ಎಂಬುದರ ಮಾಹಿತಿ ಪಡೆದು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡುತ್ತೇನೆ. ಕೇಂದ್ರ ಸರ್ಕಾರದ ಅನುದಾನದ ಜೊತೆಗೆ ರಾಜ್ಯ ಸರಕಾರದಿಂದಲೂ ಸಹ ಹೆಚ್ಚಿನ ಅನುದಾನ ಮಾದರಿ ಕ್ಷೇತ್ರವನ್ನಾಗಿಸಲು ಪ್ರಯತ್ನಿಸಬೇಕೆಂದರು.ದೇವಸ್ಥಾನದಲ್ಲಿ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ವಿರುಪಾಕ್ಷ ಮಾಮನಿ ಅವರು ವಿ.ಪ ಸದಸ್ಯ ಸಿ.ಟಿ.ರವಿ, ಕಾರ್ಕಳ ಶಾಸಕರಾದ ಸುನೀಲ ಕುಮಾರ, ಬೈರತಿ ಬಸವರಾಜರನ್ನು ಸನ್ಮಾನಿಸಿ ಗೌರವಿಸಿದರು. ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮುರುಗೇಶ ಪಾಟೀಲ, ಜಗದೀಶ ಕೌಜಗೇರಿ ರಾಜಶೇಖರ ಕಾರದಗಿ, ರಾಜು ನಿಡವಣಿ, ಪುರಸಭೆ ಸದಸ್ಯ ಅರ್ಜುನ ಅಮ್ಮೋಜಿ. ಅಶೋಕ ಪಾಟೀಲ, ಮಲ್ಲಿಕಾರ್ಜುನ ಬೀಳಗಿ, ಶ್ರೇಯಸ್ ಮಾಮನಿ, ರಾಜು ಲಮಾಣಿ, ರವಿ ಲಮಾಣಿ, ಬಸವರಾಜ ಹನಸಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ
ಶಕ್ತಿ ಯೋಜನೆ ಫಲಾನುಭವಿ ಸ್ತ್ರೀಯರಿಗೆ ಸ್ಮಾರ್ಟ್‌ಕಾರ್ಡ್‌