ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ 11 ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತೀಯ ಮೂಲದ ಯೋಗ ವಿಶ್ವದಾದ್ಯಂತ ಪಸರಿಸಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯಸ್ಸು ಹೆಚ್ಚಾಗಲಿದೆ. ಇದರಿಂದ ಕ್ರಿಯಾಶೀಲತೆ ಮತ್ತು ಚಲನಶೀಲತೆಯಿಂದ ಬದುಕು ನಡೆಸಲು ಸಹಕಾರಿಯಾಗಲಿದೆ. ಜೊತೆಗೆ ಮಾನಸಿಕವಾಗಿಯೂ ಸಹ ಸದೃಢರಾಗಿರಬಹುದು ಎಂದು ಡಾ.ಮಂತರ್ ಗೌಡ ಅವರು ಅಭಿಪ್ರಾಯಪಟ್ಟರು.ಉತ್ತಮ ಆರೋಗ್ಯ:
ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಅವರು ಮಾತನಾಡಿ ಯೋಗ/ ವ್ಯಾಯಾಮ ಮಾಡುವುದರಿಂದ ಪ್ರತಿನಿತ್ಯ ಚಟುವಟಿಕೆಯಿಂದ ಇರಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಮಾಡುವುದು ಅತ್ಯಗತ್ಯ ಎಂದರು.
ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಮಾತನಾಡಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಲವು ದಿನಗಳಿಂದ ಯೋಗ ಪೂರ್ವಾಭ್ಯಾಸ ನಡೆಸಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.
ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಯೋಗಾಭ್ಯಾಸ ಶಿಕ್ಷಣ ನೀಡಿದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉರ್ದ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.