ದಂಡಿನಶಿವರ ಹೋಬಳಿ ಅಭಿವೃದ್ಧಿಗೆ 12 ಕೋಟಿ ಮೀಸಲು: ಶಾಸಕ ಕೃಷ್ಣಪ್ಪ

KannadaprabhaNewsNetwork |  
Published : Jul 27, 2025, 12:00 AM IST
25 ಟಿವಿಕೆ 1 – ತುರುವೇಕೆರೆ ಪಟ್ಟಣದ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲೂಕು ವೀರಶೈವ ಲಿಂಗಾಯಿತ ನೌಕರರ ಸಮಾವೇಶದಲ್ಲಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

2024- 25ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ 85ಕ್ಕೂ ಮೇಲ್ಪಟ್ಟು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು, ನಿವೃತ್ತ ನೌಕರರು ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಆಯ್ಕೆಯಾದ ಸಮಾಜದ ನೌಕರ ಬಂಧುಗಳನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ವೀರಶೈವ ಲಿಂಗಾಯತ ಸಮುದಾಯದವರು ಹೆಚ್ಚಿರುವ ದಂಡಿನಶಿವರ ಹೋಬಳಿಯ ಅಭಿವೃದ್ಧಿಗೆ ಸುಮಾರು 12 ಕೋಟಿ ರು. ಗಳನ್ನು ಮೀಸಲಿಟ್ಟಿರುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಪಟ್ಟಣದ ಗುರು ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಹಾಗೂ ಶಿವಬಸವ ನೌಕರರ ಸೌಹಾರ್ದ ಸಹಕಾರ ಸಂಘದ ವತಿಯಿಂದ ತಾಲೂಕು ವೀರಶೈವ ಲಿಂಗಾಯತ ನೌಕರರ ಸಮಾವೇಶ, ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೌಕರರ ಸನ್ಮಾನ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ತಾವು ಸುಮಾರು 15 ವರ್ಷಗಳ ಕಾಲ ಶಾಸಕರಾಗಿದ್ದಾಗ ವಿವಿಧ ಕಾರಣಕ್ಕೆ ದಂಡಿನಶಿವರ ಹೋಬಳಿಗೆ ಹೆಚ್ಚಿನ ಅನುದಾನ ನೀಡಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಸುಮಾರು 12 ಕೋಟಿಯಷ್ಟು ಅನುದಾನವನ್ನು ದಂಡಿನಶಿವರ ಹೋಬಳಿಗೆ ನೀಡಿದ್ದೇನೆ ಎಂದರು. ಪಟ್ಟಣದ ಗುರುಸಿದ್ಧರಾಮೇಶ್ವರ ಸಮುದಾಯ ಭವನದ ಮುಂಭಾಗಕ್ಕೆ ಸುಮಾರು 15 ಲಕ್ಷ ರು. ವೆಚ್ಚದಲ್ಲಿ ಹೈಮಾಸ್ಟ್ ದೀಪ ಹಾಗೂ ಸುಸಜ್ಜಿತ ಶೌಚಾಲಯಕ್ಕೆ 20 ಲಕ್ಷ ರು. ಸೇರಿ ಒಟ್ಟು 35 ಲಕ್ಷ ರು. ಅನುದಾನ ನೀಡುವ ಮೂಲಕ ನಿಮ್ಮ ಸಮಾಜದ ಅಭಿವೃದ್ಧಿಗೆ ಶ್ರಮಿಸುವೆ ಎಂದರು.

ಈ ಸಂದರ್ಭದಲ್ಲಿ 2024- 25ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ 85ಕ್ಕೂ ಮೇಲ್ಪಟ್ಟು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು, ನಿವೃತ್ತ ನೌಕರರು ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಆಯ್ಕೆಯಾದ ಸಮಾಜದ ನೌಕರ ಬಂಧುಗಳನ್ನು ಸನ್ಮಾನಿಸಲಾಯಿತು.

ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದ ಗೋಡೇಕೆರೆ ಮಠದ ಚರ ಪಟ್ಟಾಧ್ಯಕ್ಷರಾದ ಶ್ರೀ ಮೃತ್ಯುಂಜಯ ದೇಶಿಕೇಂದ್ರ ಸ್ವಾಮೀಜಿ, ನೊಣವಿನಕೆರೆ ಕಾಡಸಿದ್ಧೇಶ್ವರ ಮಠದ ಕಿರಿಯ ಸ್ವಾಮೀಜಿ, ಅಭಿನವ ಕಾಡಸಿದ್ಧೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಅಧ್ಯಕ್ಷ ಪರಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕೆವಿಎಲ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಸೋಮಶೇಖರ್, ನಿರ್ದೇಶಕರಾದ ಗಂಗಪ್ಪ ಎಸ್.ಹೊಂಬಾಳ, ಬಿಜೆಪಿ ಅಧ್ಯಕ್ಷ ಮೃತ್ಯುಂಜಯ, ವೀರಶೈವ ಲಿಂಗಾಯತ ಸಂಘ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ವೆಂಕಟಾಪುರ ಯೋಗೀಶ್, ಬಿಇಒ ಸೋಮಶೇಖರ್, ಡಯಟ್ ಉಪನ್ಯಾಸಕ ಯೋಗಾನಂದ್, ಪಟ್ಟಣ ಪಂಚಾಯಿತಿ ಸದಸ್ಯರಾದ ಯಜಮಾನ್ ಮಹೇಶ್, ಆಶಾ ರಾಜಶೇಖರ್, ವಕೀಲ ನಾಗೇಶ್, ಮುಖಂಡರಾದ ಅರಳೀಕೆರೆ ಶಿವಯ್ಯ, ಯಡಗಿಹಳ್ಳಿ ವಿಶ್ವನಾಥ್, ವೀರೇಂದ್ರ ಪಾಟೀಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಷಣ್ಮಖಪ್ಪ, ಸಿ.ಬಿ.ಸಿದ್ದರಾಮಯ್ಯ, ಪ್ರದೀಪ್, ಎಂ.ಬಿ.ಲೋಕೇಶ್, ತ್ರಿಣೇಶ್, ಪೂಜಾ, ಜಯಕುಮಾರ ಸ್ವಾಮಿ ಶಿವಬಸವಯ್ಯ ಸೇರಿ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ