ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಗ್ರಾಮದ ಗೋವಿಂದೇಗೌಡ (65) ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವ ದುರ್ವೈವಿಯಾಗಿದ್ದು, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರು ಸಮರ್ಪಕವಾಗಿ ನೀರು ಸರಬರಾಜು ಮಾಡಲು ವಿಫಲವಾಗಿರುವ ಹಿನ್ನೆಲೆ ಕೆಲವರಿಗೆ ವಾಂತಿ ಭೇದಿ ಕಾಣಿಸಿದೆ.
ತಕ್ಷಣವೇ ಗ್ರಾಮಸ್ಥರು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆ ತಂದಾಗ ತೀವ್ರ ನಿತ್ರಾಣನಾಗಿದ್ದ ಗೋವಿಂದೇಗೌಡ ಅಸ್ವಸ್ಥನಾದ ಹಿನ್ನೆಲೆ ಕುಟುಂಬದವರು ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ತಡ ರಾತ್ರಿ ಮೃತಪಟ್ಟಿದ್ದಾರೆ.ಘಟನೆಯ ಸುದ್ದಿ ತಿಳಿದ ತಾಲೂಕು ಆಸ್ಪತ್ರೆಯ ವೈದ್ಯರ ತಂಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಎಲ್ಲ ಜನರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಅಗತ್ಯವಿರುವವರನ್ನು ಸಾಲಿಗ್ರಾಮ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕಳುಹಿಸಿದ್ದಾರೆ.
ಶಾಸಕ ರವಿಶಂಕರ್ ಭೇಟಿ
ಗ್ರಾಮದಲ್ಲಿರುವ ನೀರಿನ ಓವರ್ ಹೆಡ್ ಟ್ಯಾಂಕ್ ಗಳು ಉತ್ತಮ ರೀತಿಯಲ್ಲಿ ಇಲ್ಲದ ಕಾರಣ ಗ್ರಾಮಕ್ಕೆ ಹೊಸದಾಗಿ ನೀರಿನ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.