ರಾಮನಗರ: ರಾಮನೂರಿನಲ್ಲಿ ರಾಮೋತ್ಸವ ಯಶಸ್ವಿಯಾಗಿ ಇತಿಹಾಸ ಪುಟ ಸೇರಿದ ಬೆನ್ನ ಹಿಂದೆಯೇ ಇದೀಗ ಶಾಸಕ ಇಕ್ಬಾಲ್ ಹುಸೇನ್ ಮುಸ್ಲಿಂ ಸಮುದಾಯದ 125ಕ್ಕೂ ಹೆಚ್ಚು ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆಗೆ ಮುಂದಾಗಿದ್ದಾರೆ.
ಈಗಾಗಲೇ ಶಾಸಕರು ಜನಪ್ರತಿನಿಧಿಗಳು, ಸಮುದಾಯದ ಮುಖಂಡರು, ಧರ್ಮ ಗುರುಗಳೊಂದಿಗೆ ಎರಡು ಮೂರು ಸುತ್ತಿನ ಸಭೆಗಳನ್ನು ಆಯೋಜಿಸಿ ಸಮಾಲೋಚನೆ ನಡೆಸಿ ಜವಾಬ್ದಾರಿ ಹಂಚಿದ್ದಾರೆ. ಬೃಹತ್ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿ ಹೊಸ ದಾಖಲೆ ಬರೆಯಲಿದೆ. ಏಕೆಂದರೆ ಕರ್ನಾಟಕ ರಾಜ್ಯದಲ್ಲಿಯೇ ಮುಸ್ಲಿಂ ಸಮುದಾಯದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚಿನ ಸಂಖ್ಯೆಯ ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ರಾಮನಗರ ಸಾಕ್ಷಿಯಾಗಲಿದೆ.
ಮೊದಲು ರಾಮನಗರ ತಾಲೂಕಿಗೆ ಸೀಮಿತಗೊಳಿಸಿ 50 ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಲು ಉದ್ದೇಶಿಸಲಾಗಿತ್ತು. ಬೇರೆ ತಾಲೂಕುಗಳಿಂದಲೂ ಬಡ ಕುಟುಂಬಗಳ ವಧು - ವರರ ಮದುವೆಯ ಬಗ್ಗೆ ಮುಖಂಡರಿಂದ ಪ್ರಸ್ತಾಪ ಬಂದಿತು. ಹೀಗಾಗಿ ಬೃಹತ್ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶಾಸಕ ಇಕ್ಬಾಲ್ ಹುಸೇನ್ ರವರು ಆಯೋಜಿಸಲು ಕಾರಣ ಎನ್ನಲಾಗಿದೆ.ರಾಮನಗರ, ಕನಕಪುರ, ಹಾರೋಹಳ್ಳಿ, ಮಾಗಡಿ ಹಾಗೂ ಚನ್ನಪಟ್ಟಣ ತಾಲೂಕಿನ ಮುಸ್ಲಿಂ ಸಮುದಾಯದ 120 ಜೋಡಿಗಳು ಸರಳ ವಿವಾಹಕ್ಕೆ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ. ಕಾರ್ಯಕ್ರಮದ ವೇಳೆಗೆ 125 ರಿಂದ 150 ಜೋಡಿ ನವ ವಧು–ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡುವ ಸಾಧ್ಯತೆಗಳಿವೆ.
ಮದುವೆಯಲ್ಲಿ ಎಲ್ಲ ನವ ವಧುಗಳಿಗೆ ನಾಲ್ಕು ಜೊತೆ ಸೀರೆ, ವರರಿಗೆ ತಲಾ ಜುಬ್ಬಾ ಪೈಜಾಮ್, ಜಾಕೆಟ್ ಹಾಗೂ ಟೋಪಿ, ಮನೆಗೆ ಅಲ್ಮರಾ, ಪಲ್ಲಂಗ, ಗಾದಿ ಹಾಗೂ ಹೊದಿಕೆಗಳು, ದಿನಬಳಕೆಯ ಎಲ್ಲಾ ಪಾತ್ರೆಗಳನ್ನು ನೀಡುತ್ತಿರುವುದು ಗಮನಾರ್ಹ. ವಿವಾಹವಾಗುವ ಪ್ರತಿ ದಂಪತಿಗೆ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಳ ವಿವಾಹ ಪ್ರೋತ್ಸಾಹ ಧನ 50 ಸಾವಿರ ಮಂಜೂರಾತಿಗೆ ಸಂಘಟಕರು ಅಗತ್ಯ ದಾಖಲೆಗಳನ್ನು ಪಡೆದಿದ್ದಾರೆ.ಎಲ್ಲ ಜಾತಿ ಧರ್ಮದವರಿಂದ ಮೆಚ್ಚುಗೆ :
ಶಾಸಕ ಇಕ್ಬಾಲ್ ಹುಸೇನ್ ರವರು ರಾಮನಗರದಲ್ಲಿ ಪ್ರಥಮ ಬಾರಿಗೆ ಶ್ರೀ ರಾಮನ ಹೆಸರಿನಲ್ಲಿ ನಾಲ್ಕು ದಿನಗಳ ಕಾಲ ರಾಮೋತ್ಸವವನ್ನು ಅದ್ಧೂರಿಯಾಗಿ ಆಯೋಜನೆ ಮಾಡಿದ್ದರು. ಈಗ ತಮ್ಮ ಸ್ವಂತ ಖರ್ಚಿನಲ್ಲಿ ಮುಸ್ಲಿಂ ಸಮುದಾಯದ ಬೃಹತ್ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆ ಮಾಡಿರುವುದು ಎಲ್ಲ ಜಾತಿ - ಧರ್ಮದವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.ಶಾಸಕರ ಸರಳ ಸಾಮೂಹಿಕ ವಿವಾಹದ ಸೇವಾ ಕಾರ್ಯಕ್ಕೆ ಧರ್ಮಗುರುಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಸಹಕರಿಸಿ ಪ್ರೋತ್ಸಾಹಿದ್ದಾರೆ. ಈ ಕಾರ್ಯಕ್ರಮದ ಯಶಸ್ಸಿಗಾಗಿ ನೂರಾರು ಯುವಕರು ಸ್ವಯಂ ಸೇವಕರಾಗಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಶ್ರಮಿಸುತ್ತಿದ್ದಾರೆ.
ಬಾಕ್ಸ್ ...............ಸಾಮೂಹಿಕ ವಿವಾಹದಲ್ಲಿ ಹಲವು ಗಣ್ಯರು ಭಾಗಿ :
ಈ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ವಸತಿ ಇಲಾಖೆ ಸಚಿವ ಜಮೀರ್ ಅಹಮ್ಮದ್ ಖಾನ್ , ಪೌರಾಡಳಿತ ಇಲಾಖೆ ಸಚಿವ ರಹೀಂ ಖಾನ್ , ಸಂಸದ ಡಾ.ಸಿ.ಎನ್.ಮಂಜುನಾಥ್ , ವಿಧಾನ ಪರಿಷತ್ ಸದಸ್ಯರು ಆದ ಮುಖ್ಯ ಸಚೇತಕ ಸಲೀಂ ಅಹಮ್ಮದ್ , ಶಾಸಕರಾದ ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ತನ್ವೀರ್ ಸೇಠ್ , ರಿಜ್ವಾನ್ ಅರ್ಷದ್ , ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್.ರವಿ, ರಾಮೋಜಿಗೌಡ, ಸುಧಾಮ್ ದಾಸ್ , ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಜಿಲ್ಲಾಧ್ಯಕ್ಷ ಕೆ.ರಾಜು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ , ಬಿಎಂಐಸಿಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ), ರಾಮನಗರ ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.--------------------------
...ಕೋಟ್ ...ಮುಸ್ಲಿಂ ಸಮುದಾಯದ ವಧು ವರರ ಸರಳ ಸಾಮೂಹಿಕ ವಿವಾಹ ಕಾರ್ಯ ನೆರವೇರಿಸಬೇಕೆಂಬುದು ಬಹಳ ದಿನಗಳ ಆಲೋಚನೆಯಾಗಿತ್ತು. ಅದಕ್ಕೆ ಈಗ ಕಾಲ ಕೂಡಿ ಬಂದಿದೆ. ಇಂತಹ ಸರಳ ವಿವಾಹ ಇತರರಿಗೆ ಮಾದರಿಯಾಗುವುದಲ್ಲದೆ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ಬಗ್ಗೆ ಜನಜಾಗೃತಿ ಮೂಡಿಸಿದಂತಾಗುತ್ತದೆ.
- ಇಕ್ಬಾಲ್ ಹುಸೇನ್ , ಶಾಸಕರು, ರಾಮನಗರ ಕ್ಷೇತ್ರ.-------------------------
6ಕೆಆರ್ ಎಂಎನ್ 5,6.ಜೆಪಿಜಿ5.ರಾಮನಗರದ ಯಾರಬ್ ನಗರ ಬಡಾವಣೆಯಲ್ಲಿರುವ ಜಾಗವನ್ನು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕಾಗಿ ಸ್ವಚ್ಛಗೊಳಿಸುತ್ತಿರುವುದು.
6. ಇಕ್ಬಾಲ್ ಹುಸೇನ್ , ಶಾಸಕರು, ರಾಮನಗರ ಕ್ಷೇತ್ರ.-------------------------