ಜಿಲ್ಲೆಯಲ್ಲಿ ದಾಖಲಾಗಿರುವ 129 ಪ್ರಕರಣಗಳಲ್ಲಿ 4 ಪ್ರಕರಣಗಳು ತಿರಸ್ಕೃತಗೊಂಡಿದ್ದರೆ, 113 ಪ್ರಕರಣಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹5.65 ಕೋಟಿ ಪರಿಹಾರ ನೀಡಲಾಗಿದೆ.
ಹಾವೇರಿ: ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್‌ನಿಂದ 2025ರ ಮಾರ್ಚ್ 31ರ ವರೆಗೆ ಒಂದು ವರ್ಷದಲ್ಲಿ 129 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯಲ್ಲಿ ದಾಖಲಾಗಿರುವ 129 ಪ್ರಕರಣಗಳಲ್ಲಿ 4 ಪ್ರಕರಣಗಳು ತಿರಸ್ಕೃತಗೊಂಡಿದ್ದರೆ, 113 ಪ್ರಕರಣಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹5.65 ಕೋಟಿ ಪರಿಹಾರ ನೀಡಲಾಗಿದೆ. ಎಫ್‌ಎಸ್‌ಎಲ್ ವರದಿ, ಮತ್ತಿತರ ಕಾರಣದಿಂದ ಉಳಿದ ಪ್ರಕರಣಗಳ ಪರಿಹಾರ ಬಾಕಿ ಉಳಿದಿದ್ದು, ಶೀಘ್ರದಲ್ಲಿ ಪರಿಹಾರ ನೀಡಲಾಗುವುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕೆ. ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಆತ್ಮಸ್ಥೈರ್ಯ ತುಂಬುವ ಕೆಲಸ: ನಿರೀಕ್ಷಿತ ಮಟ್ಟದಲ್ಲಿ ಫಸಲು ಬಾರದೆ, ಬೆಲೆಯೂ ಸಿಗದೆ ಹತಾಶೆಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಖೇದನೀಯ. ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನಾವೂ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ರೈತರು ಆತ್ಮಹತ್ಯೆಯಂತಹ ಕೆಲಸಕ್ಕೆ ಮುಂದಾಗಬಾರದು ಎಂದು ರೈತ ಸಂಘ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ತಿಳಿಸಿದರು.ವಿವಿಧ ಕಾಮಗಾರಿಗಳಿಗೆ ರುದ್ರಪ್ಪ ಲಮಾಣಿ ಚಾಲನೆ
ಹಾವೇರಿ: ಶಾಸಕರು ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಂಗಳವಾರ ನಗರಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.ನೂತನ ಕಾರ್ಮಿಕ ಕಚೇರಿ ಸಂಕೀರ್ಣ(ಕಾರ್ಮಿಕ ಭವನ)ದ ಕಾಮಗಾರಿಯ ಭೂಮಿಪೂಜೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಾಲಕಿಯರ ಕ್ರೀಡಾ ವಸತಿನಿಲಯ ಹೊಸ ಕಟ್ಟಡದ ಉದ್ಘಾಟನೆ, ವನ ಮಹೋತ್ಸವ ಕಾರ್ಯಕ್ರಮ, ಮಹಿಳಾ ಪ್ರಥಮದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿ, ಯೋಗ ಹಾಲ್, ಶೌಚಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ನೂತನ ಕಟ್ಟಡದ ಉದ್ಘಾಟನೆ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಶಂಕುಸ್ಥಾಪನೆ ನೆರವೇರಿಸಿದರು.ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಕಾರ್ಮಿಕ ಇಲಾಖೆ ಬೆಳಗಾವಿ ಪ್ರಾದೇಶಿಕ ಕಚೇರಿ ಉಪ ಕಾರ್ಮಿಕ ಆಯುಕ್ತ ಅಮರೇಂದ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ್ ಬೆಂಗಾಲಿ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶಕುಮಾರ್ ಎಸ್.ಎಚ್., ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ.ಎಚ್. ಇತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.