ಧಾರವಾಡ ಜಿಲ್ಲೆಯಲ್ಲಿ 13.53 ಲಕ್ಷ ಮತದಾರರು ದಾಖಲು

KannadaprabhaNewsNetwork |  
Published : Sep 10, 2026, 01:45 AM IST
ಗೀತಾ ಸಿ.ಡಿ., ಅಪರ ಜಿಲ್ಲಾಧಿಕಾರಿಗಳು | Kannada Prabha

ಸಾರಾಂಶ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 13,53,946 ಮತದಾರರು ಕರಡು ಪಟ್ಟಿಯಲ್ಲಿ ದಾಖಲಾಗಿದ್ದಾರೆ.

ಧಾರವಾಡ:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 13,53,946 ಮತದಾರರು ಕರಡು ಪಟ್ಟಿಯಲ್ಲಿ ದಾಖಲಾಗಿದ್ದಾರೆ.

ಬುಧವಾರ ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲೆಯಲ್ಲಿದ್ದ ಒಟ್ಟು 16,21,961 ಮತದಾರರ ಪೈಕಿ ಶೇ. 83.48 ರಷ್ಟು (13,53,946) ಮತದಾರರ ಮಾಹಿತಿ ಪರಿಶೀಲಿಸಿ ಕರಡು ಪಟ್ಟಿಗೆ ತರಲಾಗಿದೆ. ಮತದಾರರ ಪಟ್ಟಿಯ ಪರಿಶೀಲನೆ ಸಂದರ್ಭದಲ್ಲಿ ಗೈರು, ವಲಸೆ, ಮರಣ, ದ್ವಿಪ್ರತಿ, ಇತರೆ ವರ್ಗಕ್ಕೆ ಸೇರಿದ ಒಟ್ಟು 2,68,015 ಮತದಾರರನ್ನು ಗುರುತಿಸಲಾಗಿದೆ. ಈ ಪೈಕಿ ನವಲಗುಂದದಲ್ಲಿ 22,628, ಕುಂದಗೋಳದಲ್ಲಿ 19,078, ಧಾರವಾಡದಲ್ಲಿ 32,007, ಹುಬ್ಬಳ್ಳಿ-ಧಾರವಾಡ ಪೂರ್ವದಲ್ಲಿ 47,034, ಹುಬ್ಬಳ್ಳಿ-ಧಾರವಾಡ ಕೇಂದ್ರದಲ್ಲಿ 65,844, ಹುಬ್ಬಳ್ಳಿ-ಧಾರವಾಡ ಪಶ್ಚಿಮದಲ್ಲಿ 64,623 ಹಾಗೂ ಕಲಘಟಗಿಯಲ್ಲಿ 16,801 ಮತದಾರರು ಸೇರಿದ್ದಾರೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಸ್ತುತ 1,665 ಮತಗಟ್ಟೆಗಳಿದ್ದು, ಚುನಾವಣಾ ಆಯೋಗದ ಅನುಮೋದನೆಯಂತೆ ಒಟ್ಟು 1,707 ಮತಗಟ್ಟೆ ಹೊಂದಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆ. 29 ಮತ್ತು 30ರಂದು ನಡೆದ ವಿಶೇಷ ಅಭಿಯಾನದಲ್ಲಿ ಹೊಸ ಮತದಾರರ ನೋಂದಣಿ ಸೇರಿದಂತೆ ವಿವಿಧ ಸೇವೆಗಳಿಗಾಗಿ ಒಟ್ಟು 1,431 ಅರ್ಜಿ ಸ್ವೀಕರಿಸಲಾಗಿದೆ. ಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಸೇರಿದಂತೆ ಅಗತ್ಯ ಸೇವೆಗಳಿಗೆ ಚುನಾವಣಾ ಆಯೋಗದ ವೆಬ್‌ಸೈಟ್‌ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಹೆಸರು ಇಲ್ಲದಿದ್ದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಹಾಗೆಯೇ ಕರಡು ಪಟ್ಟಿಯಲ್ಲಿರುವ ತಪ್ಪುಗಳಿದ್ದಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 33,987 ನಿಯಮಬಾಹಿರ ಮತ್ತು 13,950 ಮ್ಯಾಪಿಂಗ್ ಆಗದ ಮತದಾರರನ್ನು ಗುರುತಿಸಲ್ಪಟ್ಟಿದ್ದು, ಒಟ್ಟು 47,937 ನೋಟಿಸ್‌ ಸಿದ್ಧಪಡಿಸಲಾಗಿದೆ. ಈ ಪೈಕಿ 32,296 ನೋಟಿಸ್‌ ವಿತರಿಸಿದ್ದು 2,587 ವಿಚಾರಣೆಗಳು ನಡೆದಿದೆ. ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಹೆಚ್ಚುವರಿ ಜವಾಬ್ದಾರಿಗಳಿಗೆ ನಿಯೋಜಿಸಲಾಗಿದೆ. ಮತದಾರರ ಪಟ್ಟಿಯಲ್ಲಿನ ಯಾವುದೇ ತಪ್ಪು, ಬದಲಾವಣೆಯನ್ನು ನಿಯಮಾನುಸಾರ ಪರಿಶೀಲಿಸಿ, ಅರ್ಹ ಮತದಾರರ ಹಕ್ಕುಗಳು ಕಾಪಾಡುವುದು ಈ ಪ್ರಕ್ರಿಯೆ ಉದ್ದೇಶ ಎಂದು ತಿಳಿಸಿದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಲು ಸಹಕಾರ ನೀಡಿದ್ದು, ಅ. 22ರ ವರೆಗೆ ಸಹಕಾರ ನೀಡಲು ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುಮತಿ ಇಲ್ಲದೆ ನಡೆಸಿದ್ದ ಜಾನಪದ ವಿವಿ 8 ಪಿಜಿ ಕೋರ್ಸ್ ರದ್ದು!
ಕಬ್ಬಿಗೆ ಲಾಭದಾಯಕ ದರ ನಿಗದಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ: ರುದ್ರಪ್ಪ ಲಮಾಣಿ