13 ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

KannadaprabhaNewsNetwork | Published : Apr 12, 2024 1:07 AM

ಸಾರಾಂಶ

ಬಿರುನಾಣಿಯಲ್ಲಿ ಬಿಜೆಪಿ ಪ್ರಮುಖರ ಸಹಿತ 13 ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಬುಧವಾರ ಸೇರ್ಪಡೆಗೊಂಡರು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಬಿರುನಾಣಿಯಲ್ಲಿ ಬಿಜೆಪಿ ಪ್ರಮುಖರು ಸೇರಿ 13 ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬುಧುವಾರ ಸೇರ್ಪಡೆಗೊಂಡರು.

ಬಿರುನಾಣಿ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ,ಬಿರುನಾಣಿ ಬಿಜೆಪಿ ಬೂತ್ ಮಾಜಿ ಅಧ್ಯಕ್ಷ ಕರ್ತಮಾಡ ಮಿಲನ್ ಮೇದಪ್ಪ, ಬಿರುನಾಣಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ, ಅಣ್ಣೀರ ಪ್ರವೀಣ್,ಚೋನೀರ ಜೀವನ್, ಕರ್ತಮಾಡ ಬಿಪಿನ್, ಅಣ್ಣೀರ ಗಪ್ಪಣ್ಣ, ಚಂಗಣಮಾಡ ಜೀವನ್, ತೊತ್ತೆರ ರಾಜ, ಬೀರುಗ ಗ್ರಾಮದ ಅಣ್ಣಳಮಾಡ ಗಿರೀಶ್, ಕೆ.ಸಿ.ಗಪ್ಪು, ಆಂಟನಿ, ಕರ್ತಮಾಡ ರೋಹಿತ್, ಬೊಟ್ಟಂಗಡ ರೀಟಾ ಕಾಂಗ್ರೆಸ್ ಸೇರ್ಪಡೆಗೊಂಡರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಸಕ್ರಮೀಕರಣ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ, ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣ ಮಾಡ ಪ್ರೀತಮ್, ಬುಟ್ಟಿಯಂಡ ತಂಬಿ ನಾಣಯ್ಯ, ಬೊಳ್ಳೇರ ಅಪ್ಪುಟ ಪೊನ್ನಪ್ಪ ಮತ್ತಿತರರು ಹಾಜರಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಪ್ರಚಾರ:

ಕೇಂದ್ರದ ಬಿಜೆಪಿ ಸರ್ಕಾರ ಪೊಳ್ಳು ಭರವಸೆಗಳನ್ನು ನೀಡಿ ಧರ್ಮ ಧರ್ಮಗಳ ನಡುವೆ ಜಾತಿ ಜಾತಿಗಳ ನಡುವೆ ಸಮುದಾಯಗಳ ನಡುವೆ ಬೆಂಕಿ ಹಚ್ಚಿರುವ ಕೆಲಸವನ್ನು ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅಭಿಪ್ರಾಯ ಪಟ್ಟರು.

ಅವರು ಬುಧವಾರ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.ಕೇಂದ್ರದ ಬಿಜೆಪಿ ಸರ್ಕಾರ ಪೊಳ್ಳು ಭರವಸೆಯನ್ನು ನೀಡುತ್ತಾ ಸಮುದಾಯಗಳ ನಡುವೆ ವಿಷಬೀಜ ಬಿತ್ತುವುದರಲ್ಲೇ ಕಾಲ ಕಳೆದಿದೆ. ಕೊಡಗು-ಮೈಸೂರು ಬಿಜೆಪಿ ಸಂಸದರು ಕೊಡಗು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಬಹುದಾಗಿತ್ತು. ಆದರೆ ಕಳೆದ 10 ವರ್ಷದಲ್ಲಿ ಬಿಜೆಪಿ ಸಂಸದ ಕೊಡಗು ಜಿಲ್ಲೆಯನ್ನು ಕಿಂಚಿತ್ತೂ ಅಭಿವೃದ್ದಿ ಪಡಿಸಿಲ್ಲ ಎಂದು ದೂರಿದರು.

ಈ ಸಂದರ್ಭ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ, ಶನಿವಾರಸಂತೆ ಪಟ್ಟಣದಲ್ಲಿ ಅಭ್ಯರ್ಥಿ ಲಕ್ಷ್ಮಣ್ ಗೌಡ ಪರವಾಗಿ ಮತಯಾಚಿಸಿದರು. ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಟಿ.ಪಿ.ರಮೇಶ್, ಎಚ್.ಎಸ್.ಚಂದ್ರಮೌಳಿ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಜಿ.ಪಂ.ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಮಾತನಾಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರು, ಪಕ್ಷದ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭ ಲಕ್ಷ್ಮಣ್ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು.

Share this article