ವಿಜಯನಗರ ಜಿಲ್ಲೆಗೆ ₹130 ಕೋಟಿ ಬೆಳೆ ಪರಿಹಾರ ಮೊತ್ತ ಸಂದಾಯ

KannadaprabhaNewsNetwork |  
Published : May 13, 2024, 12:01 AM IST
ಸ | Kannada Prabha

ಸಾರಾಂಶ

ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ.

ಹೊಸಪೇಟೆ: 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಠ ₹2000 ರವರೆಗೆ ಅರ್ಹತೆಯಂತೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತ ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿದಿದೆ.

ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದ್ದು, ವಿಜಯನಗರ ಜಿಲ್ಲೆಯಲ್ಲಿ ಈವರೆಗೂ ಹತ್ತು ಹಂತಗಳಲ್ಲಿ ಒಟ್ಟು 1,09,543 ರೈತರಿಗೆ ₹130 ಕೋಟಿ ಇನ್ಪುಟ್ ಸಬ್ಸಿಡಿಯನ್ನು ಜಮಾ ಮಾಡಲು ಅನುಮೋದನೆ ನೀಡಲಾಗಿದ್ದು, ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ.

ಬಾಕಿ ಉಳಿದ ಅರ್ಹ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಜಮಾ ಮಾಡಲಾಗುವುದು. ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು ಹಾಗೂ ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಸೀಲ್ದಾರರ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರಚುರಪಡಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ತಾಲೂಕು ಕಚೇರಿ, ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿ, ಕೂಡ್ಲಿಗಿ ತಾಲೂಕು ಕಚೇರಿ, ಕೊಟ್ಟೂರ ತಾಲೂಕು ಕಚೇರಿ, ಹಡಗಲಿ ತಾಲೂಕು ಕಚೇರಿ ಮತ್ತು ಹರಪನಹಳ್ಳಿ ತಾಲೂಕು ಕಚೇರಿಗಳಲ್ಲಿನ ಸಹಾಯವಾಣಿಗಳಿಗೆ ಕಚೇರಿ ಸಮಯದಲ್ಲಿ ರೈತರು ಫ್ರೂಟ್ಸ್ ಐಡಿ ಸಂಖ್ಯೆಯೊಂದಿಗೆ ಸಂಬಂಧಪಟ್ಟ ತಾಲೂಕು ಕಚೇರಿಯ ಸಹಾಯವಾಣಿಗೆ ಭೇಟಿ ನೀಡಿ ಬೆಳೆ ಪರಿಹಾರ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕುವಾರು ಮಾಹಿತಿ:

ಹೊಸಪೇಟೆ ತಾಲೂಕಿನ 3,880 ರೈತರಿಗೆ ₹3.45 ಕೋಟಿ, ಹಗರಿಬೊಮ್ಮನಹಳ್ಳಿ ತಾಲೂಕಿನ 15,813 ರೈತರಿಗೆ ₹19.24 ಕೋಟಿ, ಕೂಡ್ಲಿಗಿ ತಾಲೂಕಿನ 19,010 ರೈತರಿಗೆ ₹23.12 ಕೋಟಿ, ಕೊಟ್ಟೂರು ತಾಲೂಕಿನ 12,833 ರೈತರಿಗೆ ₹14.04 ಕೋಟಿ, ಹಡಗಲಿ ತಾಲೂಕಿನ 20,925 ರೈತರಿಗೆ ₹26.93 ಕೋಟಿ ಮತ್ತು ಹರಪನಹಳ್ಳಿ ತಾಲೂಕಿನ 37,082 ರೈತರಿಗೆ ₹42.28 ಕೋಟಿಯಂತೆ ಜಿಲ್ಲೆಯಲ್ಲಿ ತಾಲೂಕುವಾರು ಬೆಳೆ ಪರಿಹಾರ ಮೊತ್ತ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹೊಸಪೇಟೆ ತಾಲೂಕಿನ 3,880 ರೈತರಿಗೆ ₹3.45 ಕೋಟಿ, ಹಗರಿಬೊಮ್ಮನಹಳ್ಳಿ ತಾಲೂಕಿನ 15,813 ರೈತರಿಗೆ ₹19.24 ಕೋಟಿ, ಕೂಡ್ಲಿಗಿ ತಾಲೂಕಿನ 19,010 ರೈತರಿಗೆ ₹23.12 ಕೋಟಿ, ಕೊಟ್ಟೂರು ತಾಲೂಕಿನ 12,833 ರೈತರಿಗೆ ₹14.04 ಕೋಟಿ, ಹಡಗಲಿ ತಾಲೂಕಿನ 20,925 ರೈತರಿಗೆ ₹26.93 ಕೋಟಿ ಮತ್ತು ಹರಪನಹಳ್ಳಿ ತಾಲೂಕಿನ 37,082 ರೈತರಿಗೆ ₹42.28 ಕೋಟಿಯಂತೆ ಜಿಲ್ಲೆಯಲ್ಲಿ ತಾಲೂಕುವಾರು ಬೆಳೆ ಪರಿಹಾರ ಮೊತ್ತ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!