ಮೆಗಾ ಲೋಕ ಅದಾಲತ್‌ನಲ್ಲಿ ೧೪೦ ಪ್ರಕರಣಗಳು ಇತ್ಯರ್ಥ

KannadaprabhaNewsNetwork |  
Published : Dec 12, 2023, 12:45 AM IST
11ಎಚ್ಎಸ್ಎನ್4 : ಚನ್ನರಾಯಪಟ್ಟಣದ ನ್ಯಾಯಾಲಯ ಸಂಕಿರ್ಣದಲ್ಲಿ ನಡೆದ ಲೋಕ ಆದಾಲತ್‌ನಲ್ಲಿ ನ್ಯಾಯಾಧೀಶರಾದ ದೇವಾನಂದ್‌ರವರು ಪ್ರಕರಣಗಳನ್ನು ವಾದಿ-ಪ್ರತಿವಾದಿ ಸಮಕ್ಷಣ ಇತ್ಯರ್ಥಗೊಳಿಸಿದರು. | Kannada Prabha

ಸಾರಾಂಶ

ಚನ್ನರಾಯಪಟ್ಟಣ ಪಟ್ಟಣದಲ್ಲಿನ ಕೋರ್ಟ್ ಸಂಕೀರ್ಣದಲ್ಲಿ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ೧೪೦ ಪ್ರಕರಣಗಳು ಇತ್ಯರ್ಥವಾಗಿವೆ. ಅವುಗಳಲ್ಲಿ ೫ ದಂಪತಿ ತಮ್ಮಲ್ಲಿನ ವೈಮನಸ್ಸು ದೂರ ಮಾಡಿಕೊಂಡು ಮತ್ತೆ ಒಂದಾಗಿ ಬಾಳ್ವೆ ನಡೆಸಲು ನಿರ್ಧರಿಸಿದ್ದಾರೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವಾನಂದ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದಲ್ಲಿನ ಕೋರ್ಟ್ ಸಂಕೀರ್ಣದಲ್ಲಿ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ೧೪೦ ಪ್ರಕರಣಗಳು ಇತ್ಯರ್ಥವಾಗಿವೆ. ಅವುಗಳಲ್ಲಿ ೫ ದಂಪತಿ ತಮ್ಮಲ್ಲಿನ ವೈಮನಸ್ಸು ದೂರ ಮಾಡಿಕೊಂಡು ಮತ್ತೆ ಒಂದಾಗಿ ಬಾಳ್ವೆ ನಡೆಸಲು ನಿರ್ಧರಿಸಿದ್ದಾರೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವಾನಂದ್ ತಿಳಿಸಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಚನ್ನರಾಯಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಮೆಗಾ ಲೋಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಟ್ಟಣದ ಎಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜೀ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿ ಇಬ್ಬರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಮೆಗಾ ಲೋಕ ಅದಾಲತ್‌ ಆಯೋಜಿಸಲಾಗಿದೆ.

ಮೆಗಾ ಲೋಕ ಅದಾಲತ್‌ನಲ್ಲಿ ಹೊಲ, ಮನೆ, ಬ್ಯಾಂಕು, ಅಪಘಾತ, ಚೆಕ್ ಬೌನ್ಸ್, ಜನನ, ಸಹಕಾರಿ, ಸಣ್ಣ ಪುಟ್ಟ ಗಲಾಟೆ, ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ವಿಚಾರಣೆ ಮಾಡುವದರ ಮೂಲಕ ಇಂದೇ ಅಂತಿಮ ನಿರ್ಣಯದ ಮೂಲಕ ರಾಜಿ ಮಾಡಲಾಗಿದೆ. ಅದಲ್ಲದೇ ಅಪಘಾತ ಪ್ರಕರಣ, ಜೀವನಾಂಶ ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದರು.

ಹಲವು ವರ್ಷಗಳ ಕಾಲ ಕಾನೂನು ಹೋರಾಟ ಮಾಡಿ ಒಬ್ಬರು ಗೆಲ್ಲುತ್ತಾರೆ, ಮತ್ತೊಬ್ಬರಿಗೆ ಸೋಲಾಗುತ್ತದೆ. ಆದರೆ ಅದಾಲತ್‌ನಲ್ಲಿ ಇಬ್ಬರಿಗೂ ತೃಪ್ತಿಯಾಗುವ ತೀರ್ಮಾನ ಮಾಡಲಾಗುತ್ತದೆ. ಲೋಕ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವಿದೆ. ಇಂದು ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ವಿವಿಧ ರೀತಿಯ ಸುಮಾರು ೫೫೯ಕ್ಕಿಂತ ಹೆಚ್ಚು ಪ್ರಕರಣಗಳನ್ನು ಲೋಕ ಅದಾಲತ್‌ಗಾಗಿ ತೆಗೆದುಕೊಂಡು ಅವುಗಳ ಪೈಕಿ ೧೪೦ ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಿ ಸುಮಾರು ೩.೭೦ ಕೋಟಿ ರುಪಾಯಿ ಮೊತ್ತವನ್ನು ಇತ್ಯರ್ಥ ಮಾಡಲಾಯಿತು ಎಂದರು.

ರಾಜೀ ಸಂಧಾನದಿಂದ ಕುಟುಂಬ ಜೀವನ ಸುಧಾರಿಸುತ್ತದೆ. ಪ್ರತಿಯೊಂದಕ್ಕೂ ವ್ಯಾಜ್ಯ ಮಾಡಿ ಕೋರ್ಟಿಗೆ ಬರುವುದು ಒಳ್ಳೆಯದಲ್ಲ, ವ್ಯಾಜ್ಯಗಳನ್ನು ದೂರಮಾಡಿ ಸುಖದಿಂದ ಬಾಳಬೇಕು ಎಂದು ದಾಂಪತ್ಯ ಕುಟುಂಬಕ್ಕೆ ಹಾಗೂ ವಾದಿ-ಪ್ರತಿವಾದಿಗಳಿಗೆ ತಿಳಿವಳಿಕೆ ನೀಡಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ