ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರು ಜನ್ಮದಿನದಂತೆ ಈ ಸಪ್ತಾಹ ಉದ್ಘಾಟನೆ ಸಹ ನಡೆಯುತ್ತದೆ. ಈ ಬಾರಿ ಶಿವಮೊಗ್ಗದಲ್ಲಿ ಉದ್ಘಾಟನೆ ನಡೆಯುವುದು ವಿಶೇಷ. ಕುವೆಂಪು ರಂಗಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ರಾಜ್ಯ ಸಹಕಾರಿ ಸಚಿವ ರಾಜಣ್ಣ ಸಪ್ತಾಹ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭಾಗಿಯಾಗಲಿದ್ದಾರೆ. ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಡಿ.ಟಿ. ದೇವೇಗೌಡ ವಹಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಸಹಕಾರ ಯೂನಿಯನ್ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಹಭಾಗಿತ್ವವನ್ನು ಡಿಸಿಸಿ ಬ್ಯಾಂಕ್, ಹಾಲು ಉತ್ಪಾದಕರ ಒಕ್ಕೂಟ ಸೇರಿದಂತೆ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳು ಜೊತೆಯಾಗಿ ವಹಿಸಲಿವೆ. ಉದ್ಘಾಟನೆಯ ದಿನ ಬೆಳಗ್ಗೆ 9.30ಕ್ಕೆ ಸಹಕಾರಿ ಸಂಘಗಳು ಮತ್ತು ಇತ್ತೀಚಿನ ಬೆಳವಣಿಗೆಳು ವಿಷಯದ ಮೇಲೆ ವಿಚಾರ ಸಂಕಿರಣ ನಡೆಯಲಿದೆ ಎಂದು ವಿವರಿಸಿದರು.ಒಂದೊಂದು ಜಿಲ್ಲೆಯಲ್ಲಿ ಸಪ್ತಾಹ ಕಾರ್ಯಕ್ರಮ:
ಕುವೆಂಪು ರಂಗಮಂದಿರದಲ್ಲಿ ಉದ್ಘಾಟನೆಯ ದಿನದಂದು ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸಿದ ಉತ್ಪಾದಕ ವಸ್ತುಗಳ ವಸ್ತು ಪ್ರದರ್ಶನ ಕೂಡ ನಡೆಯಲಿದೆ. ಜೊತೆಗೆ ಇನ್ನಿತರ ಸಂಸ್ಥೆಗಳ ಸ್ಟಾಲ್ ಗಳು ಇರಲಿದೆ. ನ.20ರಂದು ವಿಜಯಪುರದಲ್ಲಿ ಸಮಾರೋಪ ನಡೆಯಲಿದೆ ಎಂದರು.
- - - -ಫೋಟೋ:
ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥ ಗೌಡ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.