ಗದಗ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸೆಪ್ಟೆಂಬರ್ ಮಾಹೆಯವರೆಗೆ ತಲಾ ₹2,000ಗಳಂತೆ ತಾಲೂಕಿನ 79125 ಫಲಾನುಭವಿಗಳಿಗೆ ₹15.82 ಕೋಟಿ ಮೊತ್ತವನ್ನು ಪಾವತಿ ಮಾಡಲಾಗಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಸಭೆಯ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.ನಗರದ ಜಿಪಂ ವಿ.ಸಿ. ಹಾಲ್‌ದಲ್ಲಿ ಬುಧವಾರ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಿತಿ ಸದಸ್ಯ ಕೃಷ್ಣಗೌಡ ಎಚ್. ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಪಾವತಿಯಲ್ಲಿ ವಿಳಂಬವಾದರೂ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಬದ್ಧತೆ ಸರ್ಕಾರದ್ದಾಗಿದೆ. ಗ್ಯಾರಂಟಿಗಳ ಮೂಲಕ ರಾಜ್ಯದ ಬಡವರ ಆರ್ಥಿಕಾಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸದಾ ಸನ್ನದ್ಧ ಎನ್ನುವುದನ್ನು ಈಗಾಗಲೇ ಸಾಬೀತುಪಡಿಸಿದೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಎಂ.ಎಸ್. ರಮೇಶ ಮಾತನಾಡಿದರು.ಈ ವೇಳೆ ಶಕ್ತಿ ಹಾಗೂ ಯುವ ನಿಧಿ ಯೋಜನೆ ಪ್ರಗತಿ ಪರಿಶೀಲನೆ ಜರುಗಿತು. ಸಮಿತಿಯ ಸದಸ್ಯರಾದ ಶಂಭು ಕಾಳೆ, ಮೀನಾಕ್ಷಿ ಬೆನಕಣ್ಣವರ, ಸಾವಿತ್ರಿ ಹೂಗಾರ, ದಯಾನಂದ ಪವಾರ, ಸಂಗು ಕರೆಕಲಮಟ್ಟಿ, ಎನ್.ಬಿ. ದೇಸಾಯಿ, ಸಂಗಮೇಶ ಎಂ. ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇವರಡ್ಡಿ ತಿರ್ಲಾಪುರ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ, ತಾಪಂ ಕಾರ್ಯನಿರ್ವಹಣಾಧಿಕಾರಿ ಮಲ್ಲಯ್ಯ ಕೊರವನವರ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ.ವಿ. ಸೇರಿದಂತೆ ಗ್ಯಾರಂಟಿ ಯೋಜನೆಯ ಅಧಿಕಾರಿಗಳು ಇದ್ದರು.