ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಚಿಂತನಾ ಹಾಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೆನರಾ ಬ್ಯಾಂಕ್‌ನಲ್ಲಿದ್ದ ₹ 53.26 ಕೋಟಿ ಮೌಲ್ಯದ 58.97 ಕೆ.ಜಿ ಚಿನ್ನಾಭರಣ ಹಾಗೂ ₹ 5.20 ಲಕ್ಷ ಸೇರಿ ಒಟ್ಟು ₹ 53.31 ಕೋಟಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣದಲ್ಲಿ ಒಟ್ಟು 15 ಆರೋಪಿಗಳನ್ನು ಬಂಧಿಸಿದ್ದು, ಒಟ್ಟು 39 ಕೆಜಿ ಬಂಗಾರದ ಗಟ್ಟಿ ಹಾಗೂ ಆಭರಣಗಳನ್ನು ಮತ್ತು ₹ 1.16 ಕೋಟಿ ನಗದು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳು ಸೇರಿ ಒಟ್ಟು ₹ 39.26 ಕೋಟಿ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.ನ್ಯಾಯಾಧೀಶರ ಮನೆ ಕಳ್ಳತನ ಪ್ರಕರಣ:
ಆ.8ರಂದು ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಬಾಡಿಗೆ ಮನೆಯ ಬೀಗ ಮುರಿದು ₹ 30.14 ಲಕ್ಷ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಮೂವರು ಆರೋಪಿಗಳಾದ ಸುನೀಲ ರಜಪೂತ, ಚೇತನ ಲಮಾಣಿ, ರಾಹುಲ ಲಮಾಣಿಯನ್ನು ಬಂಧಿಸಲಾಗಿದೆ. ಬಂಧಿತರಿಂದ 250 ಗ್ರಾಂ ಚಿನ್ನಾಭರಣ, 50 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ 2 ಕಾರ್, 2 ಬೈಕ್, 4 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಉತ್ತರ ವಲಯ ಐಜಿಪಿ ಚೇತನ್‌ಸಿಂಗ್ ರಾಠೋಡ, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.