ಪೌರಕಾರ್ಮಿಕರ ಮೇಲೆ ದೌರ್ಜನ್ಯ 15 ಪ್ರಕರಣ ದಾಖಲು: ಡಿಸಿ ವಿದ್ಯಾಕುಮಾರಿ

KannadaprabhaNewsNetwork |  
Published : Mar 16, 2024, 01:47 AM IST
ಡಿಸಿ15 | Kannada Prabha

ಸಾರಾಂಶ

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಹಾಗೂ ದೌರ್ಜನ್ಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪೌರಕಾರ್ಮಿಕ ಸೌಲಭ್ಯಗಳು, ಕಾನೂನುಗಳ ಬಗ್ಗೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಣಿಪಾಲಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಪೌರಕಾರ್ಮಿಕರ ಮೇಲೆ ನಡೆದ ಒಟ್ಟು 15 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 11 ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ. ಉಳಿದ ಪ್ರಕರಣಗಳಲ್ಲಿ ಶೀಘ್ರವಾಗಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಹಾಗೂ ದೌರ್ಜನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪೌರಕಾರ್ಮಿಕರಿಗೆ ಆದ್ಯತೆಯ ಮೇರೆಗೆ ಗೃಹಭಾಗ್ಯ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸುವುದನ್ನು ಪ್ರಸಕ್ತ ಸಾಲಿನಲ್ಲಿ ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಳ್ಳಬೇಕು ಎಂದವರು ಸೂಚಿಸಿದರು.ಪೌರ ಕಾರ್ಮಿಕರಿಗೆ ಅತ್ಯುತ್ತಮ ಗುಣಮಟ್ಟದ ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು. ಕಾಲಕಾಲಕ್ಕೆ ಅವರುಗಳ ಸಾಮಾನ್ಯ ಆರೋಗ್ಯ ತಪಾಸಣೆಗಳನ್ನು ಮಾಡಿಸಬೇಕು ಹಾಗೂ ಅವರಿಗೆ ಉತ್ತಮ ಉಪಾಹಾರಗಳನ್ನು ನೀಡಬೇಕು ಎಂದರು.* ಸ್ಕ್ಯಾವೆಂಜಿಂಗ್ ನಿಷೇಧಮನುಷ್ಯರ ಮೂಲಕ ಮಲತ್ಯಾಜ್ಯ ನಿರ್ವಹಣೆ (ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್)ಯ ಚಟುವಟಿಕೆ ನಡೆಸುವುದು ಕಾನೂನುಬಾಹಿರವಾಗಿದ್ದು, ಇದನ್ನು ಉಲ್ಲಂಘಸಿದ್ದಲ್ಲಿ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮಕೈಗೊಳ್ಳಲಾಗುವುದು. ಅಂತಹ ಪ್ರಕರಣಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ ನಿಷೇಧ ಹಾಗೂ ಪುನರ್ವಸತಿ ಕಾಯ್ದೆಯಡಿ 2 ವರ್ಷ ಜೈಲು ಹಾಗೂ 1 ಲಕ್ಷ ರು. ದಂಡ ವಿಧಿಸಲು ಅವಕಾಶ ಇದೆ.ಇಂತಹ ಪ್ರಕರಣ ಕಂಡು ಬಂದಲ್ಲಿ ತಕ್ಷಣ ನಗರ ಸ್ಥಳೀಯಾಡಳಿತ ಸಂಸ್ಥೆ ಅಥವಾ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಬೇಕು, ಅಧಿಕಾರಿಗಳು ತುರ್ತಾಗಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದರು.ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಅಥವಾ ಮೃತರಾದ ಸ್ಕ್ಯಾವೆಂಜರ್‌ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ ಸೇರಿದಂತೆ ಸರ್ಕಾರಿಂದ ಕಲ್ಯಾಣ ಹಾಗೂ ಪುರ್ನವಸತಿ ಯೋಜನೆಗಳಿವೆ. ಅಂಥವರಿದ್ದರೇ ಈ ಸೌಲಭ್ಯಗಳನ್ನು ಅವರಿಗೆ ತಲುಪಿಸಬೇಕು ಎಂದವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ