ಆಟೋ ಚಾಲಕರ ಸಮಸ್ಯೆ ಪರಿಹಾರಕ್ಕೆ 15 ದಿನ ಗಡುವು

KannadaprabhaNewsNetwork |  
Published : Sep 30, 2026, 02:15 AM IST
ಸಾಂದರ್ಭಿಕ ಚಿತ್ರ. | Kannada Prabha

ಸಾರಾಂಶ

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ವಿಶ್ವನಾಥ್ ಎಸ್. ಗೌಡ, ಜಿಲ್ಲೆಯಲ್ಲಿ 7,000ಕ್ಕೂ ಅಧಿಕ ಆಟೋ ಚಾಲಕ- ಮಾಲೀಕರು ಹಲವು ತಿಂಗಳುಗಳಿಂದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕುರಿತು ಜಿಲ್ಲಾಡಳಿತ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು.

ಕಾರವಾರ: ಸಾರಿಗೆ, ಪರ್ಮಿಟ್ ಹಾಗೂ ಇಂಧನ ಪೂರೈಕೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಆಟೋರಿಕ್ಷಾ ಚಾಲಕ- ಮಾಲೀಕರ ಕ್ಷೇಮಾಭಿವೃದ್ಧಿ ಸಂಘವು ಜಿಲ್ಲಾಡಳಿತಕ್ಕೆ 15 ದಿನಗಳ ಅಂತಿಮ ಗಡುವು ನೀಡಿದೆ.

ಈ ಅವಧಿಯಲ್ಲಿ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸುವುದರ ಜತೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಸಂಘದ ಪದಾಧಿಕಾರಿಗಳು ಎಚ್ಚರಿಸಿದ್ದಾರೆ.ಕಾರವಾರದಲ್ಲಿ ಮಂಗಳವಾರ ಈ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ವಿಶ್ವನಾಥ್ ಎಸ್. ಗೌಡ, ಜಿಲ್ಲೆಯಲ್ಲಿ 7,000ಕ್ಕೂ ಅಧಿಕ ಆಟೋ ಚಾಲಕ- ಮಾಲೀಕರು ಹಲವು ತಿಂಗಳುಗಳಿಂದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕುರಿತು ಜಿಲ್ಲಾಡಳಿತ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು.ಜಿಲ್ಲೆಯಲ್ಲಿ ಆಟೋಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಚಾಲಕರಿಗೆ ಸೂಕ್ತ ದುಡಿಮೆ ಇಲ್ಲದಂತಾಗಿದೆ. ಹೀಗಾಗಿ ಮುಂದಿನ ಕನಿಷ್ಠ 5 ವರ್ಷಗಳ ಕಾಲ ಹೊಸ ಆಟೋ ಪರ್ಮಿಟ್‌ಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು. ಪ್ರಸ್ತುತ ನಗರ ಪ್ರದೇಶಗಳಲ್ಲಿ 7 ಕಿಮೀ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 3 ಕಿಮೀ ಇರುವ ಪರ್ಮಿಟ್ ಸಂಚಾರ ವ್ಯಾಪ್ತಿಯನ್ನು ಕನಿಷ್ಠ 50 ಕಿಮೀಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.ಇನ್ನು ಜಿಲ್ಲೆಯಲ್ಲಿ ರೆಂಟ್ ಬೈಕ್ ಮತ್ತು ರಾಪಿಡೋ ಸೇವೆಗಳು ನಿಯಮಬಾಹಿರವಾಗಿ ಹಾಗೂ ಚಾಲಕರಿಗೆ ಸೂಕ್ತ ಭದ್ರತೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದು, ತಕ್ಷಣ ಈ ಸೇವೆಗಳನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.ಉಪಾಧ್ಯಕ್ಷ ವೆಂಕಟೇಶ ನಾಯ್ಕ ಭಟ್ಕಳ ಮಾತನಾಡಿ, ಈ ಹಿಂದೆ ಸಭೆ ನಡೆಸಿದ ವೇಳೆ ಆರ್‌ಟಿಒ ವರದಿಯಂತೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದರು. ಆದರೆ ಸಭೆ ನಡೆದರೂ ಇಲಾಖೆಯಿಂದ ಯಾವುದೇ ವರದಿ ಕೊಟ್ಟಿಲ್ಲ ಎನ್ನುವ ಉತ್ತರ ಬರುತ್ತಿದೆ‌ ಎಂದರು.

ಕೆಲವೆಡೆ ಸಿಬಿಜಿ ಇಂಧನಕ್ಕೆ ಸಿಎನ್‌ಜಿ ದರವನ್ನು ವಸೂಲಿ ಮಾಡಲಾಗುತ್ತಿದ್ದು, ಈ ಹಿನ್ನೆಲೆ ಬಾಧಿತ 35 ಚಾಲಕರ ಪರವಾಗಿ ತಲಾ ₹1.40 ಲಕ್ಷ ಪರಿಹಾರ ಕೋರಿ ಕಾರವಾರದ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದರು.

ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ಈ ಅವಧಿಯಲ್ಲಿ ಕುಂದುಕೊರತೆ ಸಭೆ ಕರೆದು ಸಮಸ್ಯೆಗಳನ್ನು ಪರಿಹರಿಸಬೇಕು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಕರ್ತವ್ಯ ಲೋಪ ಎಸಗಿದರೆಂದು ಆರೋಪಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು.

ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಸಂಸದರು ಭಾಗವಹಿಸುವ ಸಭೆ ಮತ್ತು ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ ಎಚ್ಚರಿಕೆ ನೀಡಿದರು.

ಉಪಾಧ್ಯಕ್ಷರಾದ ಶ್ರೀಧರ ನಾಯ್ಕ, ಚಂದ್ರಹಾಸ ನಾಯ್ಕ, ಮಹೇಶ ನಾಯ್ಕ, ಸಂಘಟನಾ ಕಾರ್ಯದರ್ಶಿ ಬಾಬಾ ಸಾಬ್ ಜಮಾದಾರ, ಸಲೀಂ ಮಹಮ್ಮದ್ ಯೂಸುಫ್ ಸೇರಿದಂತೆ ಇತರೆ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಾರ್ಮಿಕತೆ ಜತೆಗೆ ಶಿಕ್ಷಣಕ್ಕೂ ಆದ್ಯತೆ ನೀಡಿ: ಸಚಿವ ಕೆ.ಎಸ್. ಬಸವಂತಪ್ಪ
ಮಾಜಿ ಸಂಸದ ಮಂಜುನಾಥ ಕುನ್ನೂರಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ