ಅನ್ನಭಾಗ್ಯ ಬಾಕಿ ಸೇರಿ ಈ ತಿಂಗಳು 15 ಕೆಜಿ ಅಕ್ಕಿ

KannadaprabhaNewsNetwork |  
Published : Mar 04, 2025, 12:31 AM IST
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರೊಂದಿಗೆ ಸಚಿವ ಕೆ.ಎಚ್.ಮುನಿಯಪ್ಪ ವೀಡಿಯೋ ಸಂವಾದ ನಡೆಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಯೋಜನೆಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಸ್ಥಳದಲ್ಲಿಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೊಡ್ಡಬಳ್ಳಾಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಯೋಜನೆಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಸ್ಥಳದಲ್ಲಿಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆಸ್ಸಿ ಮುಖ್ಯಸ್ಥರೊಂದಿಗೆ ಸೋಮವಾರ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ ₹4290, ಹೈಬ್ರೀಡ್ ಜೋಳಕ್ಕೆ ₹3371, ಮಾಲದಂಡಿ ಜೋಳಕ್ಕೆ ₹3421, ಭತ್ತಕ್ಕೆ ₹2300. ಗ್ರೇಡ್ ಎ ಭತ್ತಕ್ಕೆ ₹2320 ದರ ನಿಗಧಿಯಾಗಿದ್ದು, ಈ ದರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು ಎಂದರು.

ಜಿಲ್ಲಾಧಿಕಾರಿಗಳು ಖರೀದಿ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಕಲ್ಪಿಸಬೇಕು. ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲು ಇರುವುದರಿಂದ ರೈತರಿಗೆ ಅನುಕೂಲಕರ ವಾತಾವರಣ ನಿರ್ಮಿಸಬೇಕು ಎಂದರು.

ಅನ್ನಭಾಗ್ಯ ಫಲಾನುಭವಿಗೆ 10 ಕೆ.ಜಿ ಅಕ್ಕಿ:

ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ‌ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಬೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತ ವಾಸಿ ರೆಡ್ಡಿ ವಿಜಯಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್,ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ ಎಸ್ ಎನ್ ಬಾಬು. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಫೋಟೋ-

3ಕೆಡಿಬಿಪಿ8- ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರೊಂದಿಗೆ ಸಚಿವ ಕೆ.ಎಚ್.ಮುನಿಯಪ್ಪ ವೀಡಿಯೋ ಸಂವಾದ ನಡೆಸಿದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ