ಬೆಂ.ಗ್ರಾಮಾಂತರದಲ್ಲಿ ಶೇ.15ರಷ್ಟು ಮಳೆ ಕೊರತೆ

KannadaprabhaNewsNetwork |  
Published : Aug 31, 2026, 02:00 AM IST
30ಕೆಪಿಆರ್ಸಿಆರ್01 | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದಾಗ ಜನವರಿ 1ರಿಂದ ಆಗಸ್ಟ್ 27ರವರೆಗೆ 397.7 ಮಿಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ 339.7 ಮಿ.ಮೀ. ಮಳೆಯಾಗಿದ್ದು, ಶೇ.15ರಷ್ಟು ಮಳೆ ಕೊರತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ತಿಳಿಸಿದ್ದಾರೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದಾಗ ಜನವರಿ 1ರಿಂದ ಆಗಸ್ಟ್ 27ರವರೆಗೆ 397.7 ಮಿಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ 339.7 ಮಿ.ಮೀ. ಮಳೆಯಾಗಿದ್ದು, ಶೇ.15ರಷ್ಟು ಮಳೆ ಕೊರತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ತಿಳಿಸಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಪ್ರಮುಖ ಹಂಗಾಮು ಪ್ರಗತಿಯಲ್ಲಿದ್ದು, ಒಟ್ಟು 74,000 ಹೆಕ್ಟೇರ್ ಬಿತ್ತನೆ ಗುರಿ ನಿಗದಿಪಡಿಸಲಾಗಿದೆ. ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ ಜೋಳ, ತೊಗರಿ ಹಾಗೂ ನೆಲಗಡಲೆ ಸೇರಿದಂತೆ ಒಟ್ಟು 65,628 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದ್ದು, ಶೇ.89ರಷ್ಟು ಬಿತ್ತನೆ ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.ಬರ ಘೋಷಣೆ ಮಾನದಂಡಗಳ ಪರಿಶೀಲನೆ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳು ತೀವ್ರ ಬರ ಹಾಗೂ ದೇವನಹಳ್ಳಿ ತಾಲೂಕು ಮಧ್ಯಮ ಬರ ತಾಲೂಕುಗಳೆಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿಗೆ ಸಂಬಂಧಿಸಿದಂತೆ ಮಾನದಂಡಗಳನ್ನು ಪರಿಶೀಲಿಸಿ ವರದಿ ನೀಡಲಾಗುವುದು. ಜಿಲ್ಲೆಯ ಬರ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿಗೆ ಯಾವುದೇ ರೀತಿ ಸಮಸ್ಯೆ ಎದುರಾಗದಂತೆ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆ, ಹಾಸ್ಟೆಲ್‌ಗಳಿಗೆ ಭೇಟಿ ನೀಡಿ:

ಸರ್ಕಾರಿ ಶಾಲೆಗಳು, ವಸತಿ ನಿಲಯಗಳು, ಹಾಸ್ಟೆಲ್ ಗಳಿಗೆ ಅಧಿಕಾರಿಗಳು ಆಗಾಗ್ಗೆ ದಿಢೀರ್ ಭೇಟಿ ನೀಡಬೇಕು. ಅಲ್ಲಿನ ವಾಸ್ತವ ಸ್ಥಿತಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಬೇಕು. ಆಸ್ಪತ್ರೆಗಳಿಗೂ ಅಧಿಕಾರಿಗಳು ಆಗಾಗ ದಿಢೀರ್ ಭೇಟಿ ನೀಡಿ ಪರಿಶೀಲಿಸುತ್ತಿರಬೇಕು. ಇ-ಖಾತೆ, ಪಹಣಿ ಸೃಜಿಸಬೇಕಾದ ಶಾಲೆಗಳ ಮಾಹಿತಿ ನೀಡಿ, ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿರುವ ಅಂಗನವಾಡಿ ಕಟ್ಟಡಗಳು, ವಸತಿ ನಿಲಯಗಳು ವಿವರ, ಎಷ್ಟು ಅಂಗನವಾಡಿಗಳಿಗೆ ನಿವೇಶನ ಅವಶ್ಯಕತೆ ಇದೆ ಎಂಬುದರ ಬಗ್ಗೆ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಹವಾಲು ಆಲಿಸಿ ಪರಿಹಾರ ಸೂಚಿಸಿದ ಸಚಿವ ಬಸವಂತಪ್ಪ
ಸುಸ್ಥಿತಿಯ ಕಾಂಪೌಂಡ್ ಕೆಡವಿ, ಮರುನಿರ್ಮಾಣಕ್ಕೆ ತಡೆ