ಕನ್ನಡಪ್ರಭ ವಾರ್ತೆ ರಾಯಚೂರು
ಗ್ರಾಮೀಣ ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಮಗದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಈ ಯೋಜನೆಗೆ ಅನುಮೋದನೆ ದೊರಕಿದೆ.
ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಜನರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಬೇಕು ಎಂದು ಕಳೆದ ಐದು ವರ್ಷಗಳಿಂದಲೂ ನಿರಂತರ ಈ ಯೋಜನೆ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದರ ಪರಿಣಾಮವಾಗಿ, ಕಾಂಗ್ರೆಸ್ ಸರ್ಕಾರದಿಂದ ಈ ಯೋಜನೆಗೆ ಅನುಮೋದನೆ ದೊರೆತಿದೆ.ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ನೀರಾವರಿ ಪ್ರದೇಶದಿಂದ ವಂಚಿತವಾದ ಪ್ರದೇಶ ಈ ಭಾಗವನ್ನು ನೀರಾವರಿಯನ್ನಾಗಿ ಮಾಡಬೇಕು ಎಂದು ಕಳೆದ ಬಾರಿ ಶಾಸಕರಾದ ಸಂದರ್ಭದಿಂದ ಇಲ್ಲಿಯವರೆಗೂ ನಿರಂತರವಾಗಿ ಕ್ಷೇತ್ರದ ಕೆರೆ ತುಂಬುವ ಯೋಜನೆಗಳು, ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗಳಿಗೆ ಸಾಕಷ್ಟು ಪ್ರಯತ್ನಿಸಲಾಗಿದೆ. ಇಂಥ ಅನೇಕ ಯೋಜನೆಗಳು ಕ್ಷೇತ್ರಕ್ಕೆ ಮಂಜೂರು ಮಾಡಿಸಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಶಾಸಕ ಬಸನಗೌಡ ದದ್ದಲ್ ಅವರು ತಿಳಿಸಿದ್ದಾರೆ.