ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ/ನವದೆಹಲಿ
ಕರ್ನಾಟಕದ ಬಿಜೆಪಿ ಸಂಸದರ ನಿಯೋಗ ಸೋಮವಾರ ದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ರಸಗೊಬ್ಬರದ ವಿತರಣೆಯಲ್ಲಿ ಆಗಿರುವ ಗೊಂದಲ ಕುರಿತು ಚರ್ಚೆ ನಡೆಸಿತು. ನಿಯೋಗಕ್ಕೆ ಕೇಂದ್ರ ಸಚಿವರು ಈ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಸಂಸದರಾದ ಡಾ.ಕೆ.ಸುಧಾಕರ್, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಗದ್ದಿಗೌಡರ್, ರಮೇಶ ಜಿಗಜಿಣಗಿ, ಕ್ಯಾ.ಬ್ರಿಜೇಶ್ ನಿಯೋಗದಲ್ಲಿದ್ದರು.
===ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ಪ್ರಸಕ್ತ ಬಿತ್ತನೆ ಋತುವಿಗೆ ಕರ್ನಾಟಕಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಸಲು ರಾಜ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಕರ್ನಾಟಕದ ಬೇಡಿಕೆಗೆ ಸ್ಪಂದಿಸಿ ಕೇಂದ್ರ ಸರ್ಕಾರ ಜುಲೈ ಅಂತ್ಯಕ್ಕೆ ಒಟ್ಟು 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಮಾಡಿದೆ. ರಾಜ್ಯದಲ್ಲಿ ಈವರೆಗೆ ಸುಮಾರು 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟವಾಗಿದೆ ಎಂದು ಸಚಿವರು ತಿಳಿಸಿದ್ದಾರೆ ಎಂದರು.ಬಾಕಿ ಉಳಿದಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ, ರಾಜ್ಯದ ಗೋದಾಮಿನಲ್ಲಿ ದಾಸ್ತಾನು ಇರುವುದಾಗಿ ಕೇಂದ್ರ ಸಚಿವ ನಡ್ಡಾ ಮಾಹಿತಿ ನೀಡಿದ್ದಾರೆ. ಹೆಚ್ಚುವರಿಯಾಗಿ ಸುಮಾರು 16 ಸಾವಿರ ಟನ್ ರಸಗೊಬ್ಬರವನ್ನು ರಾಜ್ಯಕ್ಕೆ ಕಳುಹಿಸಿಕೊಡಲು ಕೇಂದ್ರ ನಿರ್ಧರಿಸಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ದಾ ಅವರಿಗೆ ಕರ್ನಾಟಕದ ರೈತರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು. ಕ್ಷುಲ್ಲಕ ರಾಜಕೀಯ ಬೇಡ:
ಕೋಟ್:
- ಬಸವರಾಜ ಬೊಮ್ಮಾಯಿ, ಸಂಸದ.
ದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡ ಅವರನ್ನು ಕರ್ನಾಟಕದ ಬಿಜೆಪಿ ಸಂಸದರ ನಿಯೋಗ ಭೇಟಿಯಾಗಿ ರಾಜ್ಯದಲ್ಲಿ ರಸಗೊಬ್ಬರದ ವಿತರಣೆಯಲ್ಲಿ ಆಗಿರುವ ಗೊಂದಲ ಕುರಿತು ಚರ್ಚಿಸಿತು.