ಆ. 7, 8ರಂದು 16ನೇ ‘ಆಳ್ವಾಸ್ ಪ್ರಗತಿ’ ಮೂಡುಬಿದಿರೆಯಲ್ಲಿ ಬೃಹತ್ ಉದ್ಯೋಗ ಮೇಳ

KannadaprabhaNewsNetwork |  
Published : Jul 28, 2026, 02:45 AM IST
ಮೇಳ | Kannada Prabha

ಸಾರಾಂಶ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಉಚಿತ ಬೃಹತ್ ಉದ್ಯೋಗ ಮೇಳ ‘16ನೇ ಆಳ್ವಾಸ್ ಪ್ರಗತಿ–2026’ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಕುಂದಾಪುರ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಉಚಿತ ಬೃಹತ್ ಉದ್ಯೋಗ ಮೇಳ ‘16ನೇ ಆಳ್ವಾಸ್ ಪ್ರಗತಿ–2026’ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.ಸೋಮವಾರ ಕುಂದಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ನಡೆದ ಉದ್ಯೋಗ ಮೇಳಗಳ ಮೂಲಕ 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432 ಮಂದಿ ಮುಂದಿನ ಹಂತದ ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷದ ಮೇಳದಲ್ಲಿ 2,873 ಮಂದಿಗೆ ಸ್ಥಳದಲ್ಲೇ ಉದ್ಯೋಗ ದೊರೆತಿದ್ದು, 3,734 ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಶಾರ್ಟ್‌ಲಿಸ್ಟ್ ಆಗಿದ್ದರು ಎಂದು ಮಾಹಿತಿ ನೀಡಿದರು.ಈ ಬಾರಿ ಸುಮಾರು 350 ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ 320ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಐಟಿ, ಐಟಿಐಇಎಸ್, ಉತ್ಪಾದನೆ, ಆರೋಗ್ಯ, ಔಷಧ, ಬ್ಯಾಂಕಿಂಗ್, ಹಣಕಾಸು, ಮಾರಾಟ, ಚಿಲ್ಲರೆ ವ್ಯಾಪಾರ, ಆತಿಥ್ಯ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ ಹಾಗೂ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 23,972ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರಲಿವೆ ಎಂದು ತಿಳಿಸಿದರು.2026ರ ಶೈಕ್ಷಣಿಕ ವರ್ಷದಲ್ಲಿ ಅಥವಾ ಅದಕ್ಕೂ ಮೊದಲು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ನರ್ಸಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್, ಬಿಬಿಎ, ಎಂಬಿಎ ಸೇರಿದಂತೆ ವಿವಿಧ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆಕರ್ಷಕ ವೇತನದ ಉದ್ಯೋಗಾವಕಾಶ ದೊರೆಯಲಿದೆ ಎಂದರು.ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗಾಗಿ ಆ.6ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಐಟಿಐ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆಯೂ ಮಾಡಲಾಗಿದೆ. ಕಾಪು, ಬೆಳ್ತಂಗಡಿ, ಬ್ರಹ್ಮಾವರ, ಬೈಂದೂರು, ಬಂಟ್ವಾಳ, ಪುತ್ತೂರು ಹಾಗೂ ಸುಬ್ರಹ್ಮಣ್ಯದಲ್ಲಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಆನ್‌ಲೈನ್ ನೋಂದಣಿ ಕಡ್ಡಾಯವಾಗಿದ್ದು, ಹೆಚ್ಚಿನ ಮಾಹಿತಿಗಾಗಿ www.alvaspragati.com⁠ ವೆಬ್‌ಸೈಟ್ ಅಥವಾ 9611750531, 9741440490, 9008907716, 7975223865 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದರು.ಆಳ್ವಾಸ್ ಪ್ರಗತಿ ಸಂಯೋಜಕ ಡಾ. ಕುಮಾರಸ್ವಾಮಿ ಹಾಗೂ ನುಡಿಸಿರಿ ವಿರಾಸತ್ ಕುಂದಾಪುರ ಘಟಕದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ರೋಹನ್‌ ಕಾರ್ಪೋರೇಷನ್‌ ಸನ್ಮಾನ
ವಿದ್ಯಾಸಂಸ್ಥೆ ಬೆಳವಣಿಗೆಗೆ ಎಲ್ಲರ ಸಹಭಾಗಿತ್ವ ಅಗತ್ಯ: ಸೀತಾರಾಮ ರೈ