ತಾಲೂಕಿನ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‌ಟಿಒ) ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒವರ್‌ಲೋಡ್ ಮಾಡಿಕೊಂಡು ಸಂಚರಿಸುತ್ತಿದ್ದ 17 ಲಾರಿಗಳನ್ನು ವಶಕ್ಕೆ ಪಡೆದಿದೆ.
ಕನ್ನಡಪ್ರಭ ವಾರ್ತೆ ಹೊನ್ನಾವರ
ತಾಲೂಕಿನ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‌ಟಿಒ) ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒವರ್‌ಲೋಡ್ ಮಾಡಿಕೊಂಡು ಸಂಚರಿಸುತ್ತಿದ್ದ 17 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾಪುವಿನಿಂದ ಹೊನ್ನಾವರದ ಕಡೆಗೆ ಭಾರಿ ಗಾತ್ರದ ಶಿಲೆ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಗಳು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಭಾರ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಹೊನ್ನಾವರ ವ್ಯಾಪ್ತಿಯಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ 17 ಲಾರಿಗಳು ಒವರ್‌ಲೋಡ್ ಆಗಿರುವುದು ಪತ್ತೆಯಾಗಿದೆ. ಅವುಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವಶಕ್ಕೆ ಪಡೆದ ಲಾರಿಗಳು ಹೊನ್ನಾವರ ತಾಲೂಕಿನ ಕಾಸರಕೋಡದಲ್ಲಿ ನಿರ್ಮಾಣ ಹಂತದಲ್ಲಿರುವ ಖಾಸಗಿ ವಾಣಿಜ್ಯ ಬಂದರಿನ ವಿಸ್ತರಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೆ ಅಗತ್ಯವಿರುವ ಕಲ್ಲುಗಳನ್ನು ಸಾಗಿಸುತ್ತಿದ್ದವು ಎಂದು ಪತ್ತೆ ಹಚ್ಚಲಾಗಿದೆ.
ಅವುಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. ವಶಕ್ಕೆ ಪಡೆದ ಲಾರಿಗಳು ಹೊನ್ನಾವರ ತಾಲೂಕಿನ ಕಾಸರಕೋಡದಲ್ಲಿ ನಿರ್ಮಾಣ ಹಂತದಲ್ಲಿರುವ ಖಾಸಗಿ ವಾಣಿಜ್ಯ ಬಂದರಿನ ವಿಸ್ತರಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೆ ಅಗತ್ಯವಿರುವ ಕಲ್ಲುಗಳನ್ನು ಸಾಗಿಸುತ್ತಿದ್ದವು ಎಂದು ತಿಳಿದುಬಂದಿದೆ. ಸಾಗಾಟದಲ್ಲಿ ತೊಡಗಿದ್ದ ಲಾರಿಗಳ ಪೈಕಿ ಕೆಲವು ಉಡುಪಿ ಜಿಲ್ಲೆಯ ಪ್ರಭಾವಿ ವ್ಯಕ್ತಿಯೊಬ್ಬರಿಗೆ ಸೇರಿರುವುದು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ಅಧಿಕಾರಿಗಳು ಅಧಿಕೃತವಾಗಿ ಯಾವುದೇ ವಿವರ ಬಹಿರಂಗಪಡಿಸಿಲ್ಲ. ಇದೀಗ ಆರ್‌ಟಿಒ ಅಧಿಕಾರಿಗಳು ಹೊನ್ನಾವರ ಪೊಲೀಸ್ ಠಾಣೆಯ ಸುಪರ್ದಿಗೆ ನೀಡಿದ್ದಾರೆ.ಮೀನುಗಾರಿಕಾ ಬೋಟ್ ಮುಳುಗಡೆ; 7 ಮಂದಿ ಪ್ರಾಣಾಪಾಯದಿಂದ ಪಾರು:
ಹೊನ್ನಾವರ ತಾಲೂಕಿನ ಕಾಸರಕೋಡ ಬಂದರು ಸಮೀಪ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಒಂದು ಮುಳುಗಡೆಯಾಗಿರುವ ಘಟನೆ ಸಂಭವಿಸಿದೆ. ಬೋಟ್‌ನಲ್ಲಿದ್ದ ಎಲ್ಲ 7 ಮೀನುಗಾರರನ್ನು ತ್ವರಿತವಾಗಿ ಮತ್ತು ಸಕಾಲದಲ್ಲಿ ರಕ್ಷಿಸಲಾಗಿದೆ.ಮುಳುಗಡೆಯಾದ ''''ಶ್ರೀ ನವರತ್ನ'''' ಹೆಸರಿನ ಈ ಬೋಟ್ ಅಂಕೋಲಾ ತಾಲೂಕಿನ ಬೆಳಂಬಾರ ಗ್ರಾಮದ ಅಭಿನಂದನ ಖಾರ್ವಿ ಅವರಿಗೆ ಸೇರಿದ್ದಾಗಿದೆ. ಕಾಸರಕೋಡ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ವೇಳೆ ತಾಂತ್ರಿಕ ದೋಷ ಅಥವಾ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಬೋಟ್ ಮುಳುಗಲು ಪ್ರಾರಂಭಿಸಿತ್ತು. ಈ ಆಪತ್ತಿನ ಸಮಯದಲ್ಲಿ ಸಮೀಪದಲ್ಲೇ ಇದ್ದ ಬೇರೆ ಮೀನುಗಾರಿಕಾ ಬೋಟ್‌ನ ಸಿಬ್ಬಂದಿ ತಕ್ಷಣವೇ ಧಾವಿಸಿ ಬಂದು, ಮುಳುಗುತ್ತಿದ್ದ ಬೋಟ್‌ನಲ್ಲಿದ್ದ ಏಳೂ ಮೀನುಗಾರರನ್ನು ಸುರಕ್ಷಿತವಾಗಿ ತಮ್ಮ ಬೋಟ್‌ಗೆ ಹತ್ತಿಸಿಕೊಂಡು ರಕ್ಷಿಸಿದ್ದಾರೆ.ಬೋಟ್ ಸಮುದ್ರದ ಪಾಲಾಗಿದೆ. ಬೋಟ್‌ನಲ್ಲಿದ್ದ ಬೆಲೆಬಾಳುವ ಮೀನುಗಾರಿಕಾ ಜಾಲಗಳು, ಉಪಕರಣಗಳು ಹಾಗೂ ಇಂಜಿನ್ ಸೇರಿದಂತೆ ಒಟ್ಟಾರೆಯಾಗಿ ಸುಮಾರು ₹80 ಲಕ್ಷಗಳಷ್ಟು ಆರ್ಥಿಕ ಹಾನಿ ಸಂಭವಿಸಿದೆ ಎಂದು ಬೋಟ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಕರಾವಳಿ ಭಾಗದಲ್ಲಿ ಮುಂಗಾರು ಆರಂಭದ ಮುನ್ಸೂಚನೆ ಇರುವುದರಿಂದ ಸಮುದ್ರದಲ್ಲಿ ಇಂತಹ ಆಕಸ್ಮಿಕ ಹೆಚ್ಚುತ್ತಿದ್ದು, ಮೀನುಗಾರರು ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.