17 ಆಪ್ ನಲ್ಲಿ ಕೆಲಸ ನಿರ್ವಹಿಸುವುದು ಕಷ್ಟದ ಕಾರ್ಯ

KannadaprabhaNewsNetwork | Published : Sep 28, 2024 1:28 AM

ಸಾರಾಂಶ

ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.

ಕನ್ನಡಪ್ರಭವಾರ್ತೆ ಚಳ್ಳಕೆರೆ

ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.

ಸಂಘದ ತಾಲೂಕು ಅಧ್ಯಕ್ಷ ಎಂ. ಪ್ರಕಾಶ್ ತಹಸೀಲ್ದಾರ್ ರೇಹಾನ್‌ಪಾಷಗೆ ಮನವಿ ನೀಡಿ ಮಾತನಾಡಿ, ಸರ್ಕಾರ ಸುಮಾರು 17ಕ್ಕೂ ಹೆಚ್ಚು ಆಪ್ ಳ ಮೂಲಕ ಕಾರ್ಯನಿರ್ವಹಿಸಲು ಸೂಚನೆ ನೀಡಿದೆ. ಇದರಿಂದ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಆಡಳಿತಾಧಿಕಾರಿಗಳಿಗೆ ತೊಂದರೆ ಉಂಟಾಗಿದೆ. ಆಫ್‌ಗೆ ಅಪ್ಲೋಡ್ ಮಾಡುವ ಸಂದರ್ಭದಲ್ಲಿ ಹಲವಾರು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ ಎಂದು ತಿಳಿಸಿದರು.

ಪ್ರತಿನಿತ್ಯವೂ 17 ಅಪ್ ನಲ್ಲಿ ಕೆಲಸ ನಿರ್ವಹಿಸುವುದು ಕಷ್ಟಕಾರ್ಯ. ಇದರಿಂದ ಗ್ರಾಮ ಆಡಳಿತಾಧಿಕಾರಿಗಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಇದರಿಂದ ಯಾವುದೇ ಸಂದರ್ಭದಲ್ಲೂ ಕೆಲಸ ನಿರ್ವಹಿಸದ ಸ್ಥಿತಿ ಉಂಟಾಗಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಗ್ರಾಮ ಆಡಳಿತಾಧಿಕಾರಿಗಳ ಕೆಲಸವನ್ನು ಸರಳೀಕರಣಗೊಳಿಸುವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ರೇಹಾನ್‌ಪಾಷ, ತಾವು ಸರ್ಕಾರಕ್ಕೆ ನೀಡಿದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಲೆಕ್ಕಾಧಿಕಾರಿಗಳು ಒತ್ತಡದಲ್ಲೇ ಕಾರ್ಯನಿರ್ವಹಿಸುವ ಬಗ್ಗೆ ಸಾಕಷ್ಟು ಮಾಹಿತಿ ಬಂದಿದೆ. ಆದರೆ, ಈ ಹಂತದಲ್ಲಿ ಯಾವುದೇ ಬದಲಾವಣೆ ಮಾಡಲು ಸಾಧ್ಯವಾಗುವುದಿಲ್ಲ. ಸರ್ಕಾರದಿಂದ ಯಾವುದೇ ನಿದೇರ್ಶನ ಬಂದಿಲ್ಲ. ಆದ್ದರಿಂದ ತಮ್ಮ ಮನವಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ಬಣ) ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿವೀರಣ್ಣ, ರೈತ ಸಂಘದ ಹೋರಾಟಗಾರರು ಧರಣಿನಿರತ ಗ್ರಾಮ ಆಡಳಿತಾಧಿಕಾರಿಗಳಿಗೆ ಬೆಂಬಲ ಸೂಚಿಸಿದರು. ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಗಳ ಬಗ್ಗೆ ಗಂಭೀರ ಚಿಂತನೆ ನಡೆಸಿ ಪರಿಹರಿಸುವಂತೆ ಒತ್ತಾಯಿಸಿದರು.

ಗೌರವಾಧ್ಯಕ್ಷ ಆರ್. ರಂಗಸ್ವಾಮಿ, ಉಪಾಧ್ಯಕ್ಷ ಕರಿಬಸಜಯ್ಯ, ಪ್ರಧಾನ ಕಾರ್ಯದರ್ಶಿ ವೈ. ಹರೀಶ್, ದೇವರಾಜನಾಯ್ಕ, ಶಿವಾನಂದ, ಲಕ್ಷ್ಮೀ ಹಡಪದ, ಆರ್. ಪುಪ್ಪಲತಾ ಮುಂತಾದವರು ಉಪಸ್ಥಿತರಿದ್ದರು.

Share this article