ಜಿಲ್ಲೆಯಲ್ಲಿ 1721 ಶಿಕ್ಷಕರು, 14375 ಪದವೀಧರ ಮತದಾರರು ನೋಂದಣಿ

KannadaprabhaNewsNetwork | Published : Nov 24, 2023 1:30 AM

ಸಾರಾಂಶ

ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ 2023ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಗುರುವಾರ ಪ್ರಕಟಗೊಳಿಸಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಡಿಸೆಂಬರ್ 09 ರೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ-2023 ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ 2023 ರ ಸೆಪ್ಟೆಂಬರ್ 30ರಂದು ಸಾರ್ವಜನಿಕವಾಗಿ ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅ.1ರಿಂದ ನ.6 ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರಡು ಮತದಾರರ ಪಟ್ಟಿಯನ್ನು ಜಿಲ್ಲೆ, ಉಪವಿಭಾಗ, ತಾಲೂಕು ಕಚೇರಿಗಳಲ್ಲಿ, ನಾಡಕಚೇರಿಗಳಲ್ಲಿ, ಪುರಸಭೆ, ನಗರಸಭೆ ಮತ್ತು ಎಲ್ಲಾ ಸಾರ್ವಜನಿಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಡಿ.9ರೊಳಗಾಗಿ ಆಯಾ ತಾಲೂಕಿನ ತಹಸೀಲ್ದಾರ್ ಹಾಗೂ ಸಹಾಯಕ ಮತದಾನದ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. ಅಂತಿಮ ಮತದಾರರ ಪಟ್ಟಿಗಳನ್ನು ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದು ಹೇಳಿದರು.

ಪಟ್ಟಿಯಲ್ಲಿ 1721 ಶಿಕ್ಷಕರು:

ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯಂತೆ ಇದುವರೆಗೂ 855 ಪುರುಷ ಶಿಕ್ಷಕರು ಹಾಗೂ 266 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 1721 ಶಿಕ್ಷಕರು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

14,375 ಪದವೀಧರರು ನೊಂದಣಿ:

ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿರುವಂತೆ ಇದುವರೆಗೆ 7509 ಪುರುಷ ಮತದಾರರು ಹಾಗೂ 6864 ಮಹಿಳಾ ಮತದಾರರು ಸೇರಿ 14375 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಹಾಗೂ ಇಲಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಅರ್ಹ ಪದವೀಧರರು ಹಾಗೂ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ ಶಿವಶಂಕರ ಎನ್ ಅವರು ಮನವಿ ಮಾಡಿದರು.

(ಮಗ್‌ಶಾಟ್‌ ಫೋಟೋ ಬಳಿಸಿದರೆ ಸಾಕು)

23ಕೆಡಿಬಿಪಿ3-

ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರ ಮತದಾರರ ಪಟ್ಟಿಗಳ ಕರಡು ಪ್ರತಿ ಪ್ರಕಟ ಕುರಿತು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

Share this article