ಕನ್ನಡಪ್ರಭ ವಾರ್ತೆ ಪುತ್ತೂರುಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳ ಮುಂಭಾಗದಲ್ಲಿರುವ ದೇವರಮಾರು ಗದ್ದೆಯಲ್ಲಿ ೩೧ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಜ.೨೭ರಂದು ನಡೆಯಲಿದೆ ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಂಬಳದಲ್ಲಿ ೧೭೫ರಿಂದ ೨೦೦ ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ. ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲ್, ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ವರ್ಗಗಳ ಸಚಿವ ಬಿ.ನಾಗೇಂದ್ರ, ಎಂ.ಆರ್.ಜಿ. ಬಂಜಾರ ಗ್ರೂಪ್ಸ್ ಬೆಂಗಳೂರು ಇದರ ಚೇರ್ಮನ್ ಪ್ರಕಾಶ್ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ. ಎನ್.ರಾಜೇಂದ್ರ ಕುಮಾರ್, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಮಡಿಕೇರಿ ಶಾಸಕ ಮಂತರ್ ಗೌಡ, ಹಾಸನದ ಶಾಸಕ ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೋ, ಯಕ್ಷಧ್ರುವ ಫೌಂಡೇಶನ್ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.ಸಾಧಕರಿಗೆ ಸನ್ಮಾನ
ಈ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ನಡೆಯಲಿದೆ. ಮಾಣಿಸಾಗು ಉಮೇಶ್ ಶೆಟ್ಟಿ (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು-ಕಂಬಳ ಕ್ಷೇತ್ರ), ಕೇಶವ ಗೌಡ (ಎಸ್.ಆರ್.ಕೆ.ಲ್ಯಾಡರ್-ಉದ್ಯಮ ಕ್ಷೇತ್ರ), ರವೀಂದ್ರ ಶೆಟ್ಟಿ ನುಳಿಯಾಲು (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು- ಧಾರ್ಮಿಕ ಕ್ಷೇತ್ರ), ದೀಪಕ್ ರೈ ಪಾಣಾಜೆ (ಖ್ಯಾತ ನಟ), ಜೈ ಗುರು ಆಚಾರ್ ಹಿಂದಾರ್(ಹೈನುಗಾರಿಕೆ), ಕಡಬ ಶ್ರೀನಿವಾಸ ರೈ (ಯಕ್ಷಗಾನ ಕಲಾವಿದ) ಅವರನ್ನು ಸನ್ಮಾನಿಸಲಾಗುವುದು.ಸಮಾರೋಪ ಸಮಾರಂಭ
ಸಮಾರೋಪ ಸಮಾರಂಭ ಜ.೨೮ರಂದು ನಡೆಯಲಿದ್ದು, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅಧ್ಯಕ್ಷತೆ ವಹಿಸುವರು. ಚಿತ್ರ ನಟರಾದ ಪ್ರಜ್ವಲ್ ದೇವರಾಜ್, ಅರವಿಂದ ಬೋಳಾರ್, ಕಾರ್ತಿಕ್ ಜಯರಾಮ್ ಜೆ.ಕೆ., ಅರ್ಜುನ್ ಕಾಪಿಕಾಡ್, ಸೋನು ಗೌಡ, ರೂಪೇಶ್ ಶೆಟ್ಟಿ, ನೇಹಾ ಗೌಡ, ಚಂದನ್, ಗುರುನಂದನ್ ಮತ್ತಿತರರು ಭಾಗವಹಿಸಲಿದ್ದಾರೆ.ಲೇಸರ್ ಫಿನಿಶಿಂಗ್ ತೀರ್ಪು: ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಲೇಸರ್ ಫಿನಿಶಿಂಗ್ ತೀರ್ಪು ನೀಡುವ ವ್ಯವಸ್ಥೆ ಮಾಡಲಾಗಿದೆ. ಕಂಬಳವನ್ನು ೨೪ ಗಂಟೆಯೊಳಗೆ ಮುಗಿಸುವ ಪ್ರಯತ್ನ ಕಂಬಳ ಕೂಟದಲ್ಲಿ ನಿರ್ಣಯವಾಗಿದೆ. ಈಗಾಗಲೇ ಕಂಬಳ ಕೂಟದಲ್ಲಿ ನಡೆದ ಮೀಟಿಂಗ್‌ನಲ್ಲಿ ಮುಂದೆ ಕಂಬಳದ ಕೋಣಗಳನ್ನು ಬಿಡುವ ಸ್ಥಳದಲ್ಲಿ ಎಲೆಕ್ಟ್ರಾನಿಕ್ ಮಾದರಿಯ ಗೇಟ್ ಅಳವಡಿಸುವ ಚಿಂತನೆ ನಡೆದಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಸಂಚಾಲಕ ಕೆ.ವಸಂತ ಕುಮಾರ್ ರೈ ದುಗ್ಗಳ, ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್, ತೀರ್ಪುಗಾರ ನಿರಂಜನ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.