ಸರ್ವಾಂಗೀಣ ಅಭಿವೃದ್ಧಿಗಾಗಿ ₹180 ಕೋಟಿ ಅನುದಾನ

KannadaprabhaNewsNetwork |  
Published : Sep 18, 2026, 03:00 AM IST
ಅಥಣಿ | Kannada Prabha

ಸಾರಾಂಶ

ಪುರಸಭೆಯ ಆಡಳಿತದ ಸದಸ್ಯರು ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು. ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ಈಗಾಗಲೇ ₹180 ಕೋಟಿ ಅನುದಾನ ತರಲಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಪಟ್ಟಣದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ಪುರಸಭೆಯ ಆಡಳಿತದ ಸದಸ್ಯರು ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು. ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ಈಗಾಗಲೇ ₹180 ಕೋಟಿ ಅನುದಾನ ತರಲಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಪಟ್ಟಣದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಸೂಚಿಸಿದರು.

ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ಅವಳಿ ಕೆರೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಕಸ್ಮಿಕ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಮತ್ತು ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಅನುದಾನ ತರುವ ಸಂಕಲ್ಪ ಹೊಂದಿದ್ದೇನೆ. ಜೋಡು ಕೆರೆ ಪಟ್ಟಣದ ಪ್ರಮುಖ ಸಾರ್ವಜನಿಕ ಆಸ್ತಿಯಾಗಿದ್ದು, ಇದರ ಸಮಗ್ರ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಉತ್ತಮ ಪರಿಸರ, ವಾಯುವಿಹಾರ ಹಾಗೂ ಮನರಂಜನಾ ಸೌಲಭ್ಯಗಳು ದೊರೆಯಲಿವೆ. ಕೆರೆಯ ಸೌಂದರ್ಯೀಕರಣ, ಸ್ವಚ್ಛತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಆಡಳಿತ ಸದಸ್ಯರಿಗೆ ಸಲಹೆ ನೀಡಿದರು.

ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಕಾಮಗಾರಿಯ ಪ್ರತಿಯೊಂದು ಹಂತದಲ್ಲೂ ಗುಣಮಟ್ಟವನ್ನು ಪರಿಶೀಲಿಸಿ, ನಿಗದಿತ ಮಾನದಂಡದಂತೆ ಕೆಲಸ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗದೇ ನಿಗದಿತ ಸಮಯಕ್ಕೆ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗಬೇಕು. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಭಿವೃದ್ಧಿ ಕಾಮಗಾರಿ ಕೊನೆ ಹಂತದಲ್ಲಿರುವ ಕೆರೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಬೋರ್‌ವೆಲ್‌ ಕೊರಿಸಬೇಕು, ಬರುವ ಒಂದು ವಾರದೊಳಗಾಗಿ ಕೆರೆಗೆ ಹಂತ, ಹಂತವಾಗಿ ನೀರು ತುಂಬಿಸುವ ಕಾರ್ಯ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ, ಸದಸ್ಯರಾದ ಸಂತೋಷ ಸಾವಡಕರ, ಕಲ್ಲೇಶ ಮಡ್ಡಿ, ಮಲ್ಲೇಶ ಹುದ್ದಾರ, ಪ್ರಮೋದ್ ಬಿಳ್ಳೂರ, ರಾಜು ಗುಡೋಡಗಿ, ಸೈಯ್ಯದಅಮೀನ್ ಗದ್ಯಾಳ, ವಿಲಿನರಾಜ್ ಯಳಮಲ್ಲೆ, ಉಪತಹಸೀಲ್ದಾರ್‌ ಮಹಾದೇವ ಬಿರಾದಾರ, ಜಿಪಂ ಅಭಿಯಂತರ ವೀರಣ್ಣವಾಲಿ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಹಾಗೂ ಗುತ್ತಿಗೆದಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.₹15 ಕೋಟಿ ವೆಚ್ಚದಲ್ಲಿ ಪಟ್ಟಣದ ಜೋಡಿ ಕೆರೆಗಳನ್ನು ಅಭಿವೃದ್ಧಿಪಡಿಸಿ ಪಟ್ಟಣಕ್ಕೆ ಇನ್ನಷ್ಟು ಹೊಸ ಮೆರುಗು ನೀಡಲಾಗುವುದು. ಪಟ್ಟಣದ ಜನತೆಗೆ ನೀರಿನ ಮೂಲವಾಗಿರುವ ಈ ಕೆರೆಗಳಲ್ಲಿ ನೀರಿನ ಸಂಗ್ರಹಿಸುವುದರ ಜೊತೆಗೆ ಸಾರ್ವಜನಿಕರಿಗೆ ವಾಯುವಿಹಾರಕ್ಕಾಗಿ ವ್ಯವಸ್ಥೆ ಮಾಡಲಾಗುವದು. ಪಟ್ಟಣದ ಸೌಂದರ್ಯೀಕರಣ ಹೆಚ್ಚಿಸಿ ಪ್ರಮುಖ ಪ್ರವಾಸಿ ತಾಣವನ್ನಾಗಿ ಪರಿವರ್ತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

-ಲಕ್ಷ್ಮಣ ಸವದಿ, ಸಹಕಾರ ಸಚಿವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಧ್ಯಮ ಕ್ಷೇತ್ರದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ ಕಿರು ಕೃತಿ ಬಿಡುಗಡೆ
21ಕ್ಕೆ ಡಿಸಿಸಿ ಬ್ಯಾಂಕ್‌ ಎದುರು ರೈತರ ಪ್ರತಿಭಟನೆ