)
ಕನ್ನಡಪ್ರಭ ವಾರ್ತೆ ಬೆಂಗಳೂರು
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು 3,052 ಭೂ ಮಾಲೀಕರು ತಮ್ಮ ಆಸ್ತಿಯನ್ನು ಶಿವರಾಂ ಕಾರಂತ ಬಡಾವಣೆಗೆ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು18 ಸಾವಿರ ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಲಾಗುತ್ತಿದೆ. ಮೇ 15ರಿಂದಲೇ ಮಾಲೀಕರು ನಿವೇಶನ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಕೇಂದ್ರಿಯ ಇ ಗವರ್ನೆನ್ಸ್ ನಿಂದ ಸಾಫ್ಟವೇರ್ ಅಭಿವೃದ್ಧಿಪಡಿಸಿ ಅದರ ಮೂಲಕ ಹಂಚಿಕೆ ವ್ಯವಸ್ಥೆ ಮಾಡಲಾಗಿದೆ ಎಂದರು.ಒಂದು ಇಲ್ಲವೇ 2 ಎಕರೆ ಅಥವಾ ಹೆಚ್ಚು ಭೂಮಿ ಹೊಂದಿದ್ದ ಮಾಲೀಕರಿಗೆ ಪ್ರತ್ಯೇಕ ಅವಕಾಶ ಕಲ್ಪಿಸಲಾಗಿದೆ. ಒಂದೇ ಜಾಗದಲ್ಲಿ ದೊಡ್ಡ ನಿವೇಶನ ಬೇಕು ಎಂದವರಿಗೂ ಅವಕಾಶ ಕೊಟ್ಟಿದ್ದು 7 ಜನರು ಮಾತ್ರ ಅರ್ಜಿ ಸಲ್ಲಿಸಿದ್ದಾರೆ. 1 ಎಕರೆ ಜಮೀನು ಇದ್ದರೆ ಒಂದೇ ಜಾಗದಲ್ಲಿ 9,583 ಚದರ ಅಡಿ ಜಾಗ ನೀಡಲಾಗುವುದು. ಇದರ ಮೂಲಕ ಎತ್ತರದ ಕಟ್ಟಡಗಳಿಗೆ ಅವಕಾಶ ಮಾಡಿಕೊಡಲು ಈ ರೀತಿ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.
ಅಕ್ರಮಕ್ಕೆ ಮತ್ತೊಂದು ಅವಕಾಶ:ಬಿಡಿಎ ಜಾಗದಲ್ಲಿ ಅಕ್ರಮವಾಗಿ ಕಟ್ಟಿದ ಕಟ್ಟಡಗಳಿಗೆ ಸಕ್ರಮ ಮಾಡಿಕೊಳ್ಳಲು 2020ರಲ್ಲಿ ಬಿಜೆಪಿ ಸರ್ಕಾರ ‘38 ಡಿ’ಎನ್ನುವ ಕಾನೂನು ಜಾರಿಗೆ ತಂದಿತ್ತು. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಬಿಡಿಎ ಲೇಔಟ್‌ಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಇದರಲ್ಲಿ 570 ಜನ ಮಾತ್ರ ಅರ್ಜಿ ಸಲ್ಲಿಸಿದ್ದರು.
ಈಗ ಅರ್ಜಿ ಹಾಕಲು ಜೂ.15 ರಿಂದ ಒಟ್ಟು 3 ತಿಂಗಳು ಅವಕಾಶ ಕಲ್ಪಿಸಿಕೊಡಲಾಗುವುದು. ಓಟಿಎಸ್ ಜಾರಿ ಮಾಡಲಾಗುವುದು. ಮೊದಲ 100 ದಿನ ಅರ್ಜಿ ಸಲ್ಲಿಸಲು, ಮತ್ತೆ 100 ದಿನ ಅರ್ಜಿ ಪರಿಶೀಲನೆಗೆ, ನಂತರ ಪಾವತಿಗೆ ಅವಕಾಶ ನೀಡಲಾಗವುದು. 1 ವರ್ಷ ಕಾಲಮಿತಿಯೊಳಗೆ ಅಂದರೆ 2027ರ ಜೂನ್‌ಗೆ ಈ ಯೋಜನೆ ಮುಕ್ತಾಯಗೊಳಿಸಲಾಗುವುದು ಎಂದು ಹೇಳಿದರು.