ಹೊಸದಾಗಿ 184 ಇಂದಿರಾ ಕ್ಯಾಂಟೀನ್ : ಸಿಎಂ

KannadaprabhaNewsNetwork |  
Published : May 25, 2025, 01:53 AM ISTUpdated : May 25, 2025, 09:03 AM IST
11 | Kannada Prabha

ಸಾರಾಂಶ

ರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

  ಮೈಸೂರು : ರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಹಿನಕಲ್‌ನಲ್ಲಿ 9 ಇಂದಿರಾ ಕ್ಯಾಂಟೀನ್‌ಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ ಎಂದರು.

2017ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಅವಧಿಯಲ್ಲಿ ಬಡವರ ಕ್ಯಾಂಟೀನ್‌ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್‌ನಲ್ಲೇ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದ್ದು, ಹೊಸದಾಗಿ 184 ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಅವರು ಹೇಳಿದರು.ಬಾಕ್ಸ್...

‘ರಾಜಕೀಯವಾಗಿ ಶಕ್ತಿ ಕೊಟ್ಟ ಹಿನಕಲ್‌ ಪೂರ್ಣ ಅಭಿವೃದ್ಧಿ’

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು. ಎಂಜಿನಿಯರ್‌ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದರು.ಒಂದೇ ವೇದಿಕೆಯಲ್ಲಿ ವೈರಿಗಳು!ಚಾಮುಂಡೇಶ್ವರಿ ಕ್ಷೇತ್ರದ ಜನರು ಸಿದ್ದರಾಮಯ್ಯನವರ ಮಾತು ಕೇಳುತ್ತಾರೆ. ಗ್ರೇಟರ್ ಮೈಸೂರು ಮಾಡಿ ನಿಮ್ಮ ಕೀರ್ತಿ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು. 

ನಗರದ ಹಿನಕಲ್ ನಲ್ಲಿ ಶನಿವಾರ ನಡೆದ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಸಮಾರಂಭದಲ್ಲಿ ಬದ್ಧ ರಾಜಕೀಯ ವೈರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಜಿಟಿಡಿ ಮಾತನಾಡಿ, ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಮಾಡಿರೋದು ಒಳ್ಳೆಯ ಬೆಳವಣಿಗೆ. ಯುಜಿಡಿ ಸಮಸ್ಯೆಯನ್ನು ನೀವೇ ಬಗೆಹರಿಸಬೇಕು. ನೀವು ಅಲ್ಲದಿದ್ದರೆ ಇನ್ಯಾರು ಕೂಡ ಈ ಕೆಲಸ ಮಾಡಲು ಸಾಧ್ಯವಿಲ್ಲ ಎಂದರು.

ಬಡ ಜನರಿಗೆ ಅಕ್ಕಿ ಕೊಟ್ಟ ಕೀರ್ತಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲುತ್ತದೆ. ಶಾಸಕ, ಮಂತ್ರಿ, ಡಿಸಿಎಂ, ಸಿಎಂ... ಹೀಗೆ 42 ವರ್ಷಗಳ ಕಾಲ ಆಡಳಿತ ಮಾಡಿರುವ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿ ದಾಖಲೆ ಮಾಡಿದ್ದಾರೆ ಎಂದು ತಮ್ಮ ಭಾಷಣದ ಉದ್ದಕ್ಕೂ ಸಿದ್ದರಾಮಯ್ಯನವರ ಆಡಳಿತವನ್ನು ಜಿ.ಟಿ.ದೇವೇಗೌಡರು ಹಾಡಿ ಹೊಗಳಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಲ ಸಿಎಂ ಬೆಳಗಿನ ಉಪಾಹಾರ ಸೇವಿಸಿದರು. ಈ ವೇಳೆ, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ರಹೀಂ ಖಾನ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಡಿ.ರವಿಶಂಕರ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ