ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾ ಗೃಹ ರಕ್ಷಕದಳ ವತಿಯಿಂದ ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಸೋಮವಾರ ನಡೆದ ‘ಗೃಹ ರಕ್ಷಕದಳ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇರೆ ಬೇರೆ ಜಿಲ್ಲೆಗಳಲ್ಲಿ ಗೃಹರಕ್ಷಕದಳದಲ್ಲಿ ಕರ್ತವ್ಯ ನಿರ್ವಹಿಸಲು ಸ್ವಯಂ ಪ್ರೇರಣೆಯಿಂದ ಮುಂದೆ ಬರುತ್ತಾರೆ. ಆ ನಿಟ್ಟಿನಲ್ಲಿ ವೃತ್ತಿಯನ್ನು ಗೌರವಿಸಿ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು.ಗೃಹರಕ್ಷಕ ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸುವ ದಿನಕ್ಕೆ 500 ರು. ನೀಡಲಾಗುತ್ತದೆ. ಗೃಹರಕ್ಷಕರು ಪೊಲೀಸರಂತೆ ಕರ್ತವ್ಯ ನಿರ್ವಹಿಸುವುದನ್ನು ಕಾಣುತ್ತೇವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಗೃಹರಕ್ಷಕರು ಹಬ್ಬ ಹರಿದಿನಗಳು, ಜಾತ್ರೆಗಳು, ವಿಶೇಷ ಸಂದರ್ಭಗಳಲ್ಲಿ ಹಾಗೂ ವಿವಿಧ ಇಲಾಖೆಗಳ ಜೊತೆ ನಿಕಟ ಸಂಪರ್ಕ ಹೊಂದಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಸುಂದರರಾಜ್ ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ಗೃಹರಕ್ಷಕರು ಸಮಾಜದ ಒಳಿತಿಗಾಗಿ ಕೆಲಸ ನಿರ್ವಹಿಸುತ್ತಾರೆ. ಆ ನಿಟ್ಟಿನಲ್ಲಿ ತಮ್ಮ ಆರೋಗ್ಯವನ್ನು ನೋಡಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಗೃಹರಕ್ಷಕರು ಪೊಲೀಸರ ಜೊತೆ ಕರ್ತವ್ಯ ನಿಷ್ಠೆ ಹಾಗೂ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸುತ್ತಾರೆ, ಇದೊಂದು ರೀತಿ ಪರೋಪಕಾರದ ಕೆಲಸವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಪೊಲೀಸ್ ಇನ್ಸ್ಪೆಕ್ಟರ್ ರವಿ ಅವರು ಮಾತನಾಡಿ, ಗೃಹರಕ್ಷಕರು ಸಹ ಪೊಲೀಸರಷ್ಟೇ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ. ಸಂಚಾರ ನಿಯಂತ್ರಣದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಿದರು.
ಗೃಹರಕ್ಷಕದಳ ವಿಭಾಗದ ವಿಶ್ವನಾಥ, ಕವನ್ ಕುಮಾರ್, ಪುಟ್ಟರಾಜು, ತ್ಯಾಗರಾಜು, ಲೋಕೇಶ್ ಇತರರು ಇದ್ದರು. ಪ್ರಕೃತಿ ಮತ್ತು ತಂಡದವರು ಪ್ರಾರ್ಥಿಸಿದರು. ಗೃಹರಕ್ಷಕರಾದ ಮದಬ್ ಬೈರಗಿ ಸ್ವಾಗತಿಸಿದರು. ಲವಿ ಕೆ.ಎಫ್.ಅವರು ನಿರೂಪಿಸಿ, ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಗೃಹರಕ್ಷಕದಳದ ಪಿಎಸ್‌ಐ ಅಕ್ಷಯ್ ಕುಮಾರ್ ಅವರು ಗೌರವ ವಂದನೆ ಸಲ್ಲಿಸಿದರು.