19, 20ರಂದು ಇಷ್ಟಲಿಂಗ ಮಹಾಪೂಜೆ, ಧರ್ಮ ಸಮಾರಂಭ

KannadaprabhaNewsNetwork | Published : Oct 17, 2024 12:09 AM

ಸಾರಾಂಶ

ಚನ್ನಗಿರಿಯ ವೀರಶೈವ ಲಿಂಗಾಯತ ಸಮಾಜ ಮತ್ತು ಪುರೋಹಿತ ಬಳಗ ಹಾಗೂ ಹೊದಿಗೆರೆಯ ದೈವ ಸಂಸ್ಕೃತಿ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ ಲೋಕಕಲ್ಯಾಣಾರ್ಥ ಪಟ್ಟಣದಲ್ಲಿ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಾಲಸ್ವಾಮಿ ಸಮುದಾಯ ಭವನದಲ್ಲಿ ಅ.19 ಮತ್ತು 20ರಂದು ಜರುಗಲಿದೆ ಎಂದು ಟ್ರಸ್ಟ್‌ ಅಧ್ಯಕ್ಷ ವಿದ್ವಾನ್ ಬೂದಿ ಸ್ವಾಮಿ ಹಿರೇಮಠ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನಗಿರಿ

ಇಲ್ಲಿಯ ವೀರಶೈವ ಲಿಂಗಾಯತ ಸಮಾಜ ಮತ್ತು ಪುರೋಹಿತ ಬಳಗ ಹಾಗೂ ಹೊದಿಗೆರೆಯ ದೈವ ಸಂಸ್ಕೃತಿ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ ಲೋಕಕಲ್ಯಾಣಾರ್ಥ ಪಟ್ಟಣದಲ್ಲಿ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಾಲಸ್ವಾಮಿ ಸಮುದಾಯ ಭವನದಲ್ಲಿ ಅ.19 ಮತ್ತು 20ರಂದು ಜರುಗಲಿದೆ ಎಂದು ಟ್ರಸ್ಟ್‌ ಅಧ್ಯಕ್ಷ ವಿದ್ವಾನ್ ಬೂದಿ ಸ್ವಾಮಿ ಹಿರೇಮಠ ತಿಳಿಸಿದ್ದಾರೆ.

19ರಂದು ಮಧ್ಯಾಹ್ನ 3 ಗಂಟೆಗೆ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಜಗದ್ಗುರು ಅವರ ಪುರ ಪ್ರವೇಶ ನಡೆಯಲಿದೆ. ಶ್ರೀಗಳನ್ನು ಪೂರ್ಣಕುಂಭಗಳೊಂದಿಗೆ ಮತ್ತು ವಿವಿಧ ಕಲಾತಂಡಗಳೊಂದಿಗೆ ಸ್ವಾಗತ ಕೋರಲಾಗುವುದು. ಸಂಜೆ 6.30ರಿಂದ ಧರ್ಮ ಜಾಗೃತಿ ಸಮಾರಂಭ ನಡೆಯಲಿದೆ. ದಿವ್ಯ ಸಾನಿಧ್ಯವನ್ನು ವಾರಾಣಸಿ ಕಾಶಿ ಪೀಠದ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯರು ಹಾಗೂ ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮಿ ವಹಿಸುವರು ಎಂದಿದ್ದಾರೆ.

ಧರ್ಮ ಜಾಗೃತಿ ಸಮಾರಂಭದಲ್ಲಿ ತಾವರೆಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ, ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತ ವೀರ ಶಿವಾಚಾರ್ಯ ಮಹಾಸ್ವಾಮೀಜಿ, ಅಕ್ಕಿಹಾಲೂರಿನ ಮುತ್ತಿನ ಕಂತಿ ಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ, ಚನ್ನಗಿರಿ ಹಾಲಸ್ವಾಮಿ ವಿರಕ್ತ ಮಠದ ಶ್ರೀ ಡಾ.ಬಸವ ಜಯಚಂದ್ರ ಮಹಾಸ್ವಾಮಿ, ಬಸವಾಪಟ್ಟಣದ ಗವಿಮಠದ ಶ್ರೀ ಶಿವಯೋಗಿ ಶಿವಕುಮಾರ ಹಾಲಸ್ವಾಮೀಜಿ, ದೈವ ಸಂಸ್ಕೃತಿ ಪ್ರತಿಷ್ಠಾನ ಟ್ರಸ್ಟ್‌ ಅಧ್ಯಕ್ಷ ಬೂದಿಸ್ವಾಮಿ ಹಿರೇಮಠ ಭಾಗವಹಿಸುವರು.

ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಸವರಾಜು ವಿ. ಶಿವಗಂಗಾ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಪ ಮಾಜಿ ಸದಸ್ಯ ರುದ್ರೇಗೌಡ, ಸಂಸ್ಕೃತ ವಿದ್ಯಾಲಯದ ಕುಲಸಚಿವ ವಿಶ್ವನಾಥ ಪಿ. ಹಿರೇಮಠ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್, ದಾವಣಗೆರೆ ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ್, ತುಮ್ಕೋಸ್‌ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್, ಜಿಪಂ ಮಾಜಿ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು ಪಟೇಲ್, ವೀರಶೈವ ಸಮಾಜದ ಗೌರವ ಅಧ್ಯಕ್ಷ ರಾಜಶೇಖರಯ್ಯ, ಅಧ್ಯಕ್ಷ ಕೋರಿ ಬಸವರಾಜ್, ವೀರಭದ್ರೇಶ್ವರ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಚಿದಾನಂದಪ್ಪ, ಪುರಸಭೆಯ ಸದಸ್ಯ ಬಿ.ಆರ್. ಹಾಲೇಶ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಹಲವು ಮಹಾನೀಯರಿಗೆ ಶ್ರೀಗಳು ಗುರುರಕ್ಷೆ ನೀಡಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಗುವುದು ಎಂದು ವಿದ್ವಾನ್ ಬೂದಿ ಸ್ವಾಮಿ ತಿಳಿಸಿದ್ದಾರೆ.

- - -

Share this article