ಗ್ಯಾರಂಟಿಗಳಿಂದ ಜಿಲ್ಲೆಯ 9 ಲಕ್ಷ ಮಂದಿಗೆ 2 ಸಾವಿರ ಕೋಟಿ : ಶಿವಾನಂದಸ್ವಾಮಿ

KannadaprabhaNewsNetwork |  
Published : Aug 22, 2025, 12:00 AM IST
ಚಿಕ್ಕಮಗಳೂರಿನ ಜಿ.ಪಂ. ಮಿನಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಚಿಕ್ಕಮಗಳೂರು, ಜಿಲ್ಲೆಯಲ್ಲಿ ಇದುವರೆಗೂ ಐದು ಗ್ಯಾರಂಟಿ ಯೋಜನೆಗಳಿಂದ 9 ಲಕ್ಷ ಫಲಾನುಭವಿಗಳಿಗೆ ₹2 ಸಾವಿರ ಕೋಟಿ ಸಂದಾಯ ವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.

- ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಇದುವರೆಗೂ ಐದು ಗ್ಯಾರಂಟಿ ಯೋಜನೆಗಳಿಂದ 9 ಲಕ್ಷ ಫಲಾನುಭವಿಗಳಿಗೆ ₹2 ಸಾವಿರ ಕೋಟಿ ಸಂದಾಯ ವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐದು ಇಲಾಖೆಗಳಿಗೆ ಸಂಬಂಧಪಟ್ಟಂತೆ ಯೋಜನೆಗಳು ಕಾರ್ಯಗತವಾಗಿರುವ ಬಗ್ಗೆ ಯಾವುದಾದರೂ ಕುಂಠಿತ ವಿಚಾರಗಳನ್ನು ಸುದೀರ್ಘವಾಗಿ ಚರ್ಚೆ ಮಾಡುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಶೇ.97 ರಷ್ಟು ಯಶಸ್ವಿಯಾಗಿವೆ ಎಂದು ಹೇಳಿದರು.

ಇದುವರೆಗೂ ಜಿಲ್ಲೆಯಲ್ಲಿ 2,62,944 ಯಜಮಾನಿಯರಿಗೆ ಗೃಹಲಕ್ಷ್ಮೀ ಮೂಲಕ ಮಾಸಿಕ ಸುಮಾರು ₹53 ಕೋಟಿಯನ್ನು 21 ಕಂತುಗಳ ಮೂಲಕ ನೀಡಲಾಗಿದೆ. ಮಾಸಿಕ ಇದುವರೆಗೂ ಒಂದು ಸಾವಿರ ಕೋಟಿ ರು. ಗಳನ್ನು ರಾಜ್ಯ ಸರ್ಕಾರ ನೇರವಾಗಿ ಫಲಾನುಭವಿಗಳ ಖಾತೆಗೆ ತಲಾ ₹2 ಸಾವಿರ ಜಮಾ ಮಾಡಿದೆ ಎಂದು ಹೇಳಿದರು.ಶಕ್ತಿ ಯೋಜನೆಯಡಿ 60 ಸಾವಿರ ಜನ ಪ್ರತಿದಿನ ಮಹಿಳಾ ಫಲಾನುಭವಿಗಳು ಪ್ರಯಾಣ ಮಾಡುತ್ತಿದ್ದಾರೆ, 24 ತಿಂಗಳಲ್ಲಿ 4 ಕೋಟಿ 67 ಟ್ರಿಪ್ ಬಸ್‌ಗಳು ಓಡಾಡಿವೆ. ಅದಕ್ಕೆ ಸಂಬಂಧಪಟ್ಟಂತೆ ₹188 ಕೋಟಿ ಯನ್ನು ರಾಜ್ಯ ಸರ್ಕಾರ ಮಹಿಳೆಯರ ಪ್ರಯಾಣಕ್ಕೆ ಒದಗಿಸಿದೆ. ಮಲೆನಾಡು ಭಾಗದಲ್ಲಿ ಅದರಲ್ಲೂ ವಿಶೇಷವಾಗಿ ನರಸಿಂಹರಾಜಪುರ, ಬಾಳೆಹೊನ್ನೂರಿಗೆ ಸದಾ ಓಡಾಡಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 3506 ಜನ ಪದವೀಧರರಿಗೆ ₹1,05,12,000 ರು. ನೀಡಲಾಗಿದೆ. 36 ಜನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹54 ಸಾವಿರ ನೀಡಲಾಗಿದೆ. ಈವರೆಗೂ ₹9 ಕೋಟಿ 48 ಲಕ್ಷ 29 ಸಾವಿರ ರು.ಗಳ ಸಂದಾಯವಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಸಭೆಗೆ ಮಾಹಿತಿ ನೀಡಿದರು.4488 ವಿದ್ಯಾರ್ಥಿಗಳು ಹೊಸದಾಗಿ ನೋಂದಣಿಯಾಗಿದ್ದು, ಅದರಲ್ಲಿ 4431 ವಿದ್ಯಾರ್ಥಿಗಳು ಪದವೀಧರರು, ಡಿಪ್ಲೊಮಾ ಆಗಿರುವ 57 ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಈಗಾಗಲೇ ಎಲ್ಲಾ ತಾಲೂಕಿನ ಕಾಲೇಜಿನಲ್ಲಿ ವ್ಯಾಪಕ ಪ್ರಚಾರ ಮಾಡಲಾಗಿದೆ. ಜೊತೆಗೆ ಎಲ್ಲಾ ಕಡೆ ತರಬೇತಿ ಶಿಬಿರಗಳು ಪ್ರಾರಂಭವಾಗಿದ್ದು, ಅದನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 2,49,128 ಬಿಪಿಎಲ್ ಕಾರ್ಡ್‌ಗಳ 8 ಲಕ್ಷದ ಒಂದು ಸಾವಿರದ ಐನೂರ ಮೂವತ್ತಾರು ಫಲಾನುಭವಿಗಳಿಗೆ ಹಣದ ಬದಲು 5 ಕೆ.ಜಿ ಅಕ್ಕಿ ನೀಡಲಾಗಿದ್ದು, ಆಗಸ್ಟ್ ಮಾಹೆಗೆ 43,420 ಕ್ವಿಂಟಾಲ್ ಅಕ್ಕಿ ಬಿಡುಗಡೆಯಾಗಿದೆ. ಇದಕ್ಕೆ ಅಂದಾಜು ₹9 ಕೋಟಿ ವೆಚ್ಚವಾಗಿದೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಅಧ್ಯಕ್ಷರು, ಅನ್ನಭಾಗ್ಯ ಯೋಜನೆಯಡಿ ನಮ್ಮ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಅನ್ಯಾಯ ವಾಗದಂತೆ ನೋಡಿಕೊಳ್ಳಬೇಕು. ಇನ್ನು ಮುಂದೆ ನ್ಯಾಯಬೆಲೆ ಅಂಗಡಿಯಲ್ಲಿ ಐರೀಷ್ ತಂತ್ರಜ್ಞಾನದ ಮೂಲಕ ಫಲಾನುಭವಿಗಳನ್ನು ಗುರುತಿಸಿ ಪಡಿತರ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಮ್ಮ ಜಿಲ್ಲೆಯಲ್ಲೂ ಕೂಡ ಈ ತಂತ್ರಜ್ಞಾನದ ಮೂಲಕ ಫಲಾನುಭವಿಗಳನ್ನು ಗುರುತಿಸಿ ವಿತರಿಸಬೇಕೆಂದರು.

ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ 3 ಲಕ್ಷದ 12 ಸಾವಿರ ಮೀಟರ್‌ಗಳಿಗೆ ಸಂಬಂಧಿಸಿದಂತೆ ಸುಮಾರು 9 ಲಕ್ಷ ಜನರಿಗೆ ಪ್ರತಿ ತಿಂಗಳಿಗೆ ಉಚಿತ ವಿದ್ಯುತ್ ಒದಗಿಸುವ ಸಲುವಾಗಿ ₹12 ಕೋಟಿ ಗಳನ್ನು ಸರ್ಕಾರ ಮೆಸ್ಕಾಂಗೆ ಸಂದಾಯ ಮಾಡುತ್ತಿದ್ದು, ಇದುವರೆಗೆ ₹300 ಕೋಟಿ ವಿನಿಯೋಗವಾಗಿದೆ ಎಂದು ಅಧೀಕ್ಷಕ ಅಭಿಯಂತರ ಪ್ರದೀಪ್ ತಿಳಿಸಿದರು.ಸಭೆಯಲ್ಲಿ ಗ್ಯಾರಂಟಿ ಯೋಜನೆ ಉಪಾಧ್ಯಕ್ಷರಾದ ಎಸ್.ಎನ್. ಮಂಜುನಾಥ್, ಎಚ್.ಎಸ್.ಕೃಷ್ಣೇಗೌಡ, ಹೇಮಾವತಿ ಹಾಗೂ ಚಂದ್ರಮೌಳಿ, ಪ್ರಾಧಿಕಾರದ ಸದಸ್ಯರು, ಎಲ್ಲಾ ತಾಲೂಕುಗಳ ಅಧ್ಯಕ್ಷರು, ಜಿಪಂ ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್ ಹಾಜರಿದ್ದರು.

21 ಕೆಸಿಕೆಎಂ 1ಚಿಕ್ಕಮಗಳೂರಿನ ಜಿ.ಪಂ. ಮಿನಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

PREV

Recommended Stories

‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ