ಮಾತ್ಕಲ್‌ ಕೊರಗ ಕಾಲನಿ ರಸ್ತೆಗೆ 2.05 ಕೋಟಿ ರು. ಅನುದಾನ: ಸುನಿಲ್‌ ಕುಮಾರ್‌

KannadaprabhaNewsNetwork |  
Published : Jun 12, 2025, 01:12 AM IST
32 | Kannada Prabha

ಸಾರಾಂಶ

ಹೆಬ್ರಿ ತಾಲೂಕು ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗ ಕಾಲನಿ ರಸ್ತೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜನ ಜಾತಿಯ ಮಹಾ ನ್ಯಾಯ (ಪಿಎಂ ಜನ್‌ಮನ್‌) ಯೋಜನೆಯಡಿಯಲ್ಲಿ ರು. 2.05 ಕೋಟಿ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕು ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗ ಕಾಲನಿ ರಸ್ತೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜನ ಜಾತಿಯ ಮಹಾ ನ್ಯಾಯ (ಪಿಎಂ ಜನ್‌ಮನ್‌) ಯೋಜನೆಯಡಿಯಲ್ಲಿ ರು. 2.05 ಕೋಟಿ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.

ಇದು ಮೂಲ ನಿವಾಸಿ ಸಮುದಾಯವಾದ ಕೊರಗ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶವಾಗಿದ್ದು, ಈ ರಸ್ತೆಯ ಕಾಂಕ್ರೀಟ್‌ಕರಣದ ಮೂಲಕ ಹಳ್ಳಿಯ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಈ ಅನುದಾನ ನೆರವಾಗಲಿದೆ. ಪ್ರಧಾನಿ ಗ್ರಾಮ ಸಡಕ್ ಯೋಜನೆಯಡಿ ಕಾಮಗಾರಿ ಅನುಷ್ಠಾನಗೊಳ್ಳಲಿದೆ ಎಂದು ಅವರು ವಿವರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ವಿ. ಸುನಿಲ್ ಕುಮಾರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಸಬ್ ಕಾ ಸಾತ್, ಸಬ್ ಕಾ ವಿಕಾಸ್‌ ತತ್ವದಡಿ ಎಲ್ಲ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ. ಅದರ ಒಂದು ಭಾಗವಾಗಿಯೇ ಮಾತ್ಕಲ್ ಕೊರಗ ಕಾಲನಿ ರಸ್ತೆಯು ಶೀಘ್ರದಲ್ಲಿ ಅಭಿವೃದ್ಧಿಯಾಗಲಿದೆ ಎಂದು ನುಡಿದಿದ್ದಾರೆ.

ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾರ್ಯಾರಂಭ ಶೀಘ್ರವೇ ನಡೆಯಲಿದೆ ಎಂದು ಶಾಸಕರ ‘ವಿಕಾಸ’ ಜನಸೇವಾ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ